September 20, 2024

ಬಾಲ್ಯ ವಿವಾಹ ಪಿಡುಗು ತೊಡೆದು ಹಾಕಲು ಎಲ್ಲರೂ ಕೈಜೋಡಿಸಿ

0
ಶಾಂತಿನಗರದ (ಕಲ್ದೋಡಿ) ಸಮುದಾಯ ಭವನದಲ್ಲಿ ನಡೆದ ಪೋಷಣ್ ಮಾಸಾಚರಣೆಯ ಕಾರ್ಯಕ್ರಮ

ಶಾಂತಿನಗರದ (ಕಲ್ದೋಡಿ) ಸಮುದಾಯ ಭವನದಲ್ಲಿ ನಡೆದ ಪೋಷಣ್ ಮಾಸಾಚರಣೆಯ ಕಾರ್ಯಕ್ರಮ

ಚಿಕ್ಕಮಗಳೂರು: ಬಾಲ್ಯ ವಿವಾಹದಂತಹ ಅನಿಷ್ಟ ಪಿಡುಗುಗಳನ್ನು ತೊಡೆದು ಹಾಕಲು ಎಲ್ಲರೂ ಕೈಜೋಡಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ. ಹನುಮಂತಪ್ಪ ತಿಳಿಸಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ಶಾಂತಿನಗರದ (ಕಲ್ದೋಡಿ) ಸಮುದಾಯ ಭವನದಲ್ಲಿ ನಿನ್ನೆ (ಬುಧವಾರ) ಆಯೋಜಿಸಿದ್ದ ಪೋಷಣ್ ಮಾಸಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಾಲ್ಯ ವಿವಾಹದಿಂದ ಒಂದು ಮಗು ತನ್ನ ಹಕ್ಕುಗಳಾದ ಬದುಕುವ ಹಕ್ಕು, ರಕ್ಷಣೆಯ ಹಕ್ಕು, ವಿಕಾಸ ಹೊಂದುವಂತಹ ಹಕ್ಕುಗಳನ್ನು ಕಳೆದುಕೊಳ್ಳುತ್ತದೆ ಹಾಗೂ ದೈಹಿಕ, ಮಾನಸಿಕ ತೊಂದರೆಗಳಿಗೆ ಒಳಗಾಗುತ್ತಾಳೆ, ಯಾರೂ ಕೂಡ ತಮ್ಮ ಮಕ್ಕಳನ್ನು ಬಾಲ್ಯ ವಿವಾಹ ಮಾಡದಂತೆ ತಿಳಿಸಿದ ಅವರು ಹೆಣ್ಣು ಮಕ್ಕಳ ಮೇಲೆ ಅನಾದಿ ಕಾಲದಿಂದಲೂ ಶೋಷಣೆ ನಡೆಯುತ್ತಿದ್ದು, ಇದರಿಂದ ಹೆಣ್ಣು ಮಕ್ಕಳು ಮುಕ್ತರಾಗಬೇಕಾದಲ್ಲಿ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣದ ಅಗತ್ಯವಿದ್ದು, ಹೆಣ್ಣು ಮಕ್ಕಳು ಕನಿಷ್ಠ ಪದವಿಯವರೆಗಾದರೂ ಓದಬೇಕು. ಈ ನಿಟ್ಟಿನಲ್ಲಿ ಪೋಷಕರು ಹೆಚ್ಚು ಗಮನಹರಿಸಬೇಕು ಎಂದರು.

ಚಿಕ್ಕಮಗಳೂರು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ್ ಸಿ. ಪ್ರಾಸ್ತಾವಿಕವಾಗಿ ಮಾತನಾಡಿ ಗರ್ಭಿಣಿಯರು, ಬಾಣಂತಿಯರು, ಶಿಶುಗಳ ಅಪೌಷ್ಠಿಕತೆಯನ್ನು ತಡೆಗಟ್ಟಲು ಇಲಾಖೆಯಿಂದ ಪ್ರತಿ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪೂರಕ ಪೌಷ್ಠಿಕ ಆಹಾರವನ್ನು ಅಂಗನವಾಡಿಗಳಲ್ಲಿನ ಮಕ್ಕಳಿಗೆ ವಿತರಿಸಲಾಗುತ್ತಿದೆ. ಯಾವುದೇ ಮಕ್ಕಳು ರಕ್ತ ಹೀನತೆಯಿಂದ ಬಳಲದಂತೆ ನೋಡಿಕೊಳ್ಳುವಂತೆ ಮಕ್ಕಳ ಪೋಷಕರನ್ನು ಕರೆದು ತಿಳುವಳಿಕೆ ನೀಡಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಮುನೀರ್ ಅಹಮ್ಮದ್, ಸಮುದಾಯ ಆರೋಗ್ಯಾಧಿಕಾರಿ ಗೀತಾಮಣಿ, ಕಿರಿಯ ಪ್ರಾಥಮಿಕ ಸುರಕ್ಷಣಾಧಿಕಾರಿ ಉಮಾದೇವಿ, ಹಾಗೂ ಅಂಗನವಾಡಿ ಕಾರ್ಯಕರ್ತೆ ಗ್ರೇಟ್ ಫರನಾಂಡೀಸ್ ಮುಂತಾದವರಿದ್ದರು.

Poshan Masa celebration program held at Community Bhawan, Shantinagar (Kaldodi).

About Author

Leave a Reply

Your email address will not be published. Required fields are marked *