September 19, 2024

ಗುರು ಹಿರಿಯರ ಮಾರ್ಗದರ್ಶನ ಪಡೆದರೆ ಜೀವನದಲ್ಲಿ ಯಶಸ್ವಿ

0
ಶಾರದ ಪೈ ಕಲ್ಯಾಣ ಮಂಟಪದಲ್ಲಿ ಕಾಶಿ ಮಠದ ವಾರಣಾಸಿ ಅಧೀನ ಸಂಸ್ಥೆ ವತಿಯಿಂದ ಗುರುಪೂರ್ಣಿಮ ಕಾರ್ಯಕ್ರಮದ

ಚಿಕ್ಕಮಗಳೂರು: ಆಧುನಿಕ ಕಾಲದಲ್ಲಿ ವಿದ್ಯಾರ್ಥಿಗಳು ಗುರು ಹಿರಿಯರ ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿದರೆ ಜೀವನದಲ್ಲಿ ಯಶಸ್ಸು ಕಾಣಬಹುದೆಂದು ಶಾರದ ಪೈ ಕಲ್ಯಾಣ ಮಂಟಪದ ಟ್ರಸ್ಟ್‌ನ ಅಧ್ಯಕ್ಷರಾದ ಜಯಂತ್ ಪೈ ತಿಳಿಸಿದರು.

ಸೋಮವಾರ ಶಾರದ ಪೈ ಕಲ್ಯಾಣ ಮಂಟಪದಲ್ಲಿ ಕಾಶಿ ಮಠದ ವಾರಣಾಸಿ ಅಧೀನ ಸಂಸ್ಥೆ ವತಿಯಿಂದ ಗುರುಪೂರ್ಣಿಮ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿ ಗುರುವನ್ನು ಅರಿವಿನ ಸಾಗರ ಎಂದು ಕರೆಯುತ್ತಾರೆ ಸರ್ವರ ಹಿತ ಬಯಸುವ ಗುರುಗಳನ್ನು ಭಕ್ತಿ ಕೃತಜ್ಞತೆಯಿಂದ ಸ್ಮರಿಸಿ ಪೂಜಿಸುವ ಕಾರ್ಯಕ್ರಮವೇ ಗುರುಪೂರ್ಣಿಮೆ ಆಗಿದೆ ಎಂದರು.

ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಶ್ರೇಷ್ಠ ಸ್ಥಾನ ಗುರುಗಳು ಜೀವನದ ಕತ್ತಲನ್ನು ದೂರಮಾಡಿ ಬೆಳಕಿನೆಡೆಗೆ ಉತ್ತಮ ಮಾರ್ಗದರ್ಶನ ನೀಡುತ್ತಾರೆ ಎಂದರು..ವಿದ್ಯಾರ್ಥಿಗಳು ಗುರುಗಳ ಮತ್ತು ಪೋಷಕರ ಮಾರ್ಗ ದರ್ಶನದಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಉನ್ನತ ವ್ಯಾಸಂಗ ಮಾಡಿ ಸಮಾಜ ಸೇವೆ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಇತರರಿಗೆ ಮಾದರಿಯಾಗಿ ಸಾರ್ಥಕ ಬದುಕನ ನಿಮ್ಮದಾಗಿಸಿಕೊಳ್ಳಬೇಕು ಎಂದರು.

ಪ್ರತಿವರ್ಷ ಗುರುಪೂರ್ಣಿಮೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡುವುದರ ಜೋತೆಗೆ ಜನಾಂಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ರಮೇಶ್ ಪೈ, ನಗರಸಭೆ ಮಾಜಿ ಸದಸ್ಯ ರವೀಂದ್ರ ಪ್ರಭು, ಕಾಮತ್, ವ್ಯವಸ್ಥಾಪಕ ಲಕ್ಮಣ್‌ಕಾಮತ್ ಉಪಸ್ಥಿತರಿದ್ದರು. ಗುರುಪೂರ್ಣಿಮೆ ಕಾರ್ಯಕ್ರಮದ ಬಗ್ಗೆ ನಾರಾಯಣ ಮಲ್ಯ ಮಾತನಾಡಿದರು ಅರ್ಚಕ ಕೃಷ್ಣಭಟ್ ನೇತೃತ್ವದಲ್ಲಿ ಗಣಪತಿ ಹೋಮ, ಪೂರ್ಣಾಹುತಿ, ಸತ್ಯನಾರಾಯಣ ವ್ರತ ಮತ್ತು ಕಥಾಶ್ರವಣ ನಡೆದ ಬಳಿಕ ಗುರು ಪೂಜೆ, ಪಾದುಕ ಪೂಜೆ, ಗುರು ಕಾಣಿಕೆಯೋಂದಿಗೆ ಮಹಾ ಮಂಗಳಾರತಿಯೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿನಿಯೋಗಿಸಿದರು. ಮಹಿಳಾ ಸಂಘದಿಂದ ಭಜನೆ ಕಾರ್ಯಕ್ರಮ ನಡೆಯಿತು

Successful in life if Guru gets guidance from elders

About Author

Leave a Reply

Your email address will not be published. Required fields are marked *

You may have missed