September 20, 2024

ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ ವಹಿಸಿ

0
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆ

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆ

ಚಿಕ್ಕಮಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯದಲ್ಲಿ ಜಿಲ್ಲೆ ೧೭ನೇ ಸ್ಥಾನದಲ್ಲಿದ್ದು, ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮವಹಿಸುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ ಹಾಗೂ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ೨೦೨೩-೨೪ನೇ ಸಾರಿಗೆ ಉತ್ತಮ ಗುಣ ಮಟ್ಟದ ಫಲಿತಾಂಶ ಪಡೆಯಲು ಅಗತ್ಯ ಕಾರ್ಯ ಯೋಜನೆ ರೂಪಿಸಬೇಕು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗಾಗಿ ಹೆಚ್ಚುವರಿ ಸಂಗತಿಗಳನ್ನು ನಡೆಸುವ ಮೂಲಕ ಅವರ ಶೈಕ್ಷಣಿಕ ಪ್ರಗತಿಗೆ ಕ್ರಮ ವಹಿಸುವಂತೆ ತಿಳಿಸಿದರು.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲೆಗೆ ಕರೆತರಲು ಹಾಗೂ ಜಿಲ್ಲೆಯ ೨೦ ಶಾಲೆಗಳಲ್ಲಿ ೦೫ ವಿದ್ಯಾರ್ಥಿಗಳಿಗಿಂತಲ್ಲೂ ಕಡಿಮೆ ಇದ್ದು, ದಾಖಲಾತಿ ಪ್ರಮಾಣ ಕಡಿಮೆಯಾಗಲು ಕಾರಣವನ್ನು ಮುಂದಿನ ಸಭೆಯಲ್ಲಿ ನೀಡುವಂತೆ ತಿಳಿಸಿದರು. ಗ್ರಾಮಗಳಲ್ಲಿ ಲಭ್ಯವಿರುವ ಸರ್ಕಾರಿ ಭೂಮಿಯನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲಾ ತಾಲ್ಲೂಕುಗಳ ತಹಸೀಲ್ದಾರರಿಗಿದ್ದು, ಗೋಮಾಳ ಜಮೀನು ಸರ್ಕಾರದ ಅಧೀನದಲ್ಲಿರುವುದರಿಂದ ಅದನ್ನು ಸಾರ್ವಜನಿಕ ಉದ್ದೇಶಗಳಿಗೆ ಮಾತ್ರ ಬಳಸುವಂತೆ ಹೇಳಿದರಲ್ಲದೆ. ೪ ಎಕರೆ ೩೮ ಕುಂಟೆಗೂ ಹೆಚ್ಚು ಜಮೀನು ಇರುವವರಿಗೆ ಗೋಮಾಳ ಜಮೀನನ್ನು ಮಂಜೂರು ಮಾಡಲು ಬರುವುದಿಲ್ಲ, ಡೀಮ್ಡ್ ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಬರುವುದಿಲ್ಲ ಎಂದರು.

ಮಲೆನಾಡು ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತದೆ, ಮಳೆಯಿಂದ ಸೇತುವೆಗಳು ಹಾನಿಗೊಳಗಾಗಿ ಜನರ ಓಡಾಟಕ್ಕೆ ಅನಾನುಕೂಲವಾಗುತ್ತದೆ, ಹಾನಿಗೊಳಗಾದ ಸೇತುವೆಗಳನ್ನು ಉತ್ತಮ ಗುಣಮಟ್ಟದಿಂದ ನಿರ್ಮಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಮಾತನಾಡಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಪ್ರಾರಂಭವಾಗಿದ್ದು, ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ೬೧೬೩ ಕ್ವಿಂಟಾಲ್ ಬೇಡಿಕೆ ಇದ್ದು, ೫೬೨೦.೯೫ ಕ್ವಿಂಟಾಲ್ ಸರಬರಾಜಾಗಿದೆ, ೩೭೫೧.೨೩ ಕ್ವಿಂಟಾಲ್ ವಿತರಣೆಯಾಗಿದ್ದು, ೧೮೬೯.೭೨ ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನು ಇದೆ, ರಸಗೊಬ್ಬರ ೭೧೩೬೩ ಕ್ವಿಂಟಾಲ್ ದಾಸ್ತಾನಾಗಿದ್ದು, ಇಲ್ಲಿಯವರೆಗೆ ೬೯೨೮೬ ಕ್ವಿಂಟಾಲ್ ವಿತರಣೆ ಮಾಡಲಾಗಿದೆ, ೩೫೦೪೭ ಕ್ವಿಂಟಾಲ್ ದಾಸ್ತಾನು ಇದ್ದು, ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದರು.

ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆವಿಗೂ ೨,೪೨,೫೦೮ ಫಲಾನುಭವಿಗಳು ನೋಂದಾಯಿಸಿ ಕೊಂಡಿದ್ದು, ಶೇ. ೭೯.೮೩ ಪ್ರಗತಿಯಾಗಿದೆ, ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ೨,೧೩,೨೫೭ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವ ೬,೮೧,೨೧೬ ಫಲಾನುಭವಿಗಳಿಗೆ ರೂ. ೧೧.೫೮ ಕೋಟಿ ಅವರ ಖಾತೆಗೆ ಜಮೆ ಮಾಡಲಾಗಿದೆ. ಶಕ್ತಿ ಯೋಜನೆಯಡಿ ಇಲ್ಲಿಯವರೆಗೆ ೫೫,೬೦,೯೯೭ ಮಹಿಳೆಯರು ಪ್ರಯಾಣ ಮಾಡಿದ್ದು, ಒಟ್ಟು ಪ್ರಯಾಣ ಮೊತ್ತ ರೂ. ೧೯,೨೨,೮೦,೧೬೨ ಆಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ, ಭದ್ರಾ ಹುಲಿ ಅರಣ್ಯ ಸಂರಕ್ಷಿತ ನಿರ್ದೇಶಕ ಪ್ರಭಾಕರನ್ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಜಿಲ್ಲಾ ಆಸ್ಪತ್ರೆಗೆ ಭೇಟಿ:- ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಇಂದು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಆಸ್ಪತ್ರೆಗೆ ಬಡಜನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆಗಾಗಿ ಬರುತ್ತಾರೆ. ಅವರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕೆಂದು ವೈದ್ಯರುಗಳಿಗೆ ಸೂಚಿಸಿದರು.

ನಂತರ ವೈದ್ಯಕೀಯ ವಿಜ್ಞಾನ ಕಾಲೇಜಿಗೆ ಭೇಟಿ ನೀಡಿ ಅಲ್ಲಿನ ಕಾಮಗಾರಿಯನ್ನು ಪರಿಶೀಲಿಸಿ ಉಳಿಕೆ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಹಾಗೂ ಕುಡಿಯುವ ನೀರಿಗೆ ಮಳೆ ನೀರು ಕೊಯ್ಲನ್ನು ಅಳವಡಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರಲ್ಲದೆ, ವಿದ್ಯಾರ್ಥಿಗಳ ಹಾಗೂ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಸಾರಿಗೆ ವ್ಯವಸ್ಥೆಯನ್ನು ತಲುಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

SSLC Take necessary steps to improve exam results

About Author

Leave a Reply

Your email address will not be published. Required fields are marked *