ಪೊಲೀಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್ ವರ್ಗಾವಣೆ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದ್ದು, ಜಿಲ್ಲೆಯ ನೂತನ ಎಸ್ಪಿಯನ್ನಾಗಿ ಅಮಾತೆ ವಿಕ್ರಮ್ ಅವರನ್ನು ನೇಮಿಸಲಾಗಿದೆ.
೨೦೨೧ನೇ ಸಾಲಿನ ಬ್ಯಾಚ್ನ ಐಪಿಎಸ್ ಅಧಿಕಾರಿ ಅಮಾತೆ ವಿಕ್ರಮ್ ಅವರನ್ನು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯುಕ್ತಿಗೊಳಿಸಿ ರಾಜ್ಯ ಸರಕಾರದ ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ನಾಗಪ್ ಎಸ್ ಪರೀತ್ ಅವರು ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಉಮಾ ಪ್ರಶಾಂತ್ ಅವರನ್ನು ದಾವಣಗೆರೆ ಜಿಲ್ಲೆಯ ಎಸ್ಪಿಯನ್ನಾಗಿ ನಿಯುಕ್ತಿಗೊಳಿಸಲಾಗಿದೆ.
ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿ ಉಮಾ ಪ್ರಶಾಂತ್ ಅವರ ಕಾರ್ಯವೈಖರಿಗೆ ಬಗ್ಗೆ ದಲಿತ ಸಂಘಟನೆಗಳ ಮುಖಂಡರು ಹಲವು ಬಾರಿ ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ವರ್ಗಾವಣೆಗೆ ಆಗ್ರಹಿಸಿದ್ದವು.
Uma Prashant transferred as Superintendent of Police