September 20, 2024

ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು: ನಂಜೇಶ್ ಬೆಣ್ಣೂರು ಮನವಿ

0
ನೈರುತ್ಯ ಶಿಕ್ಷಕರ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿರುವ ನಂಜೇಶ್ ಬೆಣ್ಣೂರು ಸುದ್ದಿಗೋಷ್ಠಿ

ನೈರುತ್ಯ ಶಿಕ್ಷಕರ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿರುವ ನಂಜೇಶ್ ಬೆಣ್ಣೂರು ಸುದ್ದಿಗೋಷ್ಠಿ

ಚಿಕ್ಕಮಗಳೂರು: ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಒಳಪಡುವ ನಿವೃತ್ತ ಶಿಕ್ಷಕರು ಸೇರಿದಂತೆ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಶಿಕ್ಷಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾವಣೆ ಮಾಡುವಂತೆ ನೈರುತ್ಯ ಶಿಕ್ಷಕರ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿರುವ ನಂಜೇಶ್ ಬೆಣ್ಣೂರು ಅವರು ಮನವಿ ಮಾಡಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿ ಆರು ವ?ಗಳಿಗೊಮ್ಮೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಪ್ರತಿ ಚುನಾವಣೆ ಸಂದರ್ಭದಲ್ಲಿ ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸ ಬೇಕಾಗಿದ್ದು ಅಕ್ಟೋಬರ್ ೩೧ ರವರೆಗೆ ಕಾಲಾವಕಾಶವಿದ್ದು ಈ ಅವಧಿಯಲ್ಲಿ ತಮ್ಮ ಹೆಸರುಗಳನ್ನು ಶಿಕ್ಷಕರ ಮತದಾರರ ಪಟ್ಟಿಗೆ ನೋಂದಾವಣೆ ಮೂಲಕ ಸೇರ್ಪಡೆಗೊಳಿಸಬೇಕೆಂದು ಮನವಿ ಮಾಡಿದರು.

ವೃತ್ತಿಯಿಂದ ನಿವೃತ್ತರಾದ ಮೂರು ವ?ದವರೆಗೆ ಮತ ಚಲಾಯಿಸುವ ಅವಕಾಶವಿದ್ದು ಪ್ರಾಥಮಿಕ ಶಾಲೆಯ ನಂತರ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಎಲ್ಲಾ ಶಿಕ್ಷಕರುಗಳು ತಾಂತ್ರಿಕ ಶಿಕ್ಷಣ ಸಂಸ್ಥೆಗಳು, ಪದವಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರುಗಳಿಗೆ ಮತದಾನದ ಅವಕಾಶವಿದ್ದು ಶಿಕ್ಷಕರ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾವಣೆ ಮಾಡಿ ಮತದಾನದ ಮೂಲಕ ತಮ್ಮ ಹಕ್ಕು ಚಲಾಯಿಸುವಂತೆ ವಿನಂತಿಸಿದರು.

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿರುವ ತಾವು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಎಲ್ಲಾ ರೀತಿಯ ಸಾಮರ್ಥ್ಯ ಹೊಂದಿದ್ದು ಪಕ್ಷದಲ್ಲಿ ತಮ್ಮ ಸೇವೆಯನ್ನು ಗುರುತಿಸಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದ ಜವಾಬ್ದಾರಿ ನೀಡಿದ್ದು ಆ ಮೂಲಕ ಪಕ್ಷದ ಸಂಘಟನೆಯಲ್ಲಿ ತೊಡಗಿರುವುದಾಗಿ ತಿಳಿಸಿದರು.

ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಕಾಂಕ್ಷಿಯಾಗಿರುವ ತಮಗೆ ಕೆ.ಪಿ.ಸಿ.ಸಿ ಅಧ್ಯಕ್ಷರು ಸಂಘಟನೆಯಲ್ಲಿ ತೊಡಗುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಒಳಪಡುವ ಐದು ಜಿಲ್ಲೆಗಳಲ್ಲಿ ಸುಮಾರು ೩೦೦೦ ಶಾಲಾ ಕಾಲೇಜುಗಳನ್ನು ಭೇಟಿ ಮಾಡಿ ೩೦೦೦ ಕಾರ್ಯಕರ್ತರನ್ನು ರೂಪಿಸುವ ಅಭಿಯಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಈಗಾಗಲೇ ೩೦೦೦ ಶಿಕ್ಷಕರು ಕಾರ್ಯಕರ್ತರೊಂದಿಗೆ ಸಂಪರ್ಕ ಸಾಧಿಸುವ ಮೂಲಕ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದು ತಮಗೆ ಅವಕಾಶ ನೀಡಿದರೆ ಗೆಲುವು ನಿಶ್ಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರುಗಳಾದ ನಾಗೇಶ್ ರಾಜ್, ಸಾಮಾಜಿಕ ಜಾಲತಾಣದ ವಿಭಾಗದ ಸಚಿನ್ ಎತ್ತಿನ ಮನೆ, ಕೀರ್ತಿ ಸೇಠ್ ಉಪಸ್ಥಿತರಿದ್ದರು.

Nanjesh Bennoor is a contender for the South West teacher’s field

About Author

Leave a Reply

Your email address will not be published. Required fields are marked *