September 20, 2024

ಸೆ.25ಕ್ಕೆ ನಗರದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ

0
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸುದ್ದಿಗೋಷ್ಠಿ

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸುದ್ದಿಗೋಷ್ಠಿ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಸೂಚನೆಯಂತೆ ಇದೇ ತಿಂಗಳ ೨೫ ರಂದು ನಗರದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಏರ್ಪಡಿಸಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನಗರದ ಆರ್‌ಜಿ ರಸ್ತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಭಾ ಭವನದಲ್ಲಿ ಬೆಳಗ್ಗೆ ೧೦.೩೦ ಕ್ಕೆ ಆರಂಭವಾಗುವ ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಅವರು ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲೆಯ ಶಾಸಕರುಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿಗಳ ನಿರ್ದೇಶನದಂತೆ ನಡೆಯುತ್ತಿರುವ ಈ ಮೊದಲ ಹಂತದ ಜನತಾದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದಾಗಿದ್ದು, ಸಮಯದ ಆಧಾರದಲ್ಲಿ ವೈಯಕ್ತಿಕ ಹಾಗೂ ಸಾರ್ವಜನಿಕ ಸಂಬಂದಿತ ಒಂದಕ್ಕಿಂತ ಹೆಚ್ಚು ಸಲ್ಲಿಸದಂತೆ ಸಹಕರಿಸಬೇಕೆಂದು ಮನವಿ ಮಾಡಿದರು.

ಅಹವಾಲುಗಳನ್ನು ನೊಂದಾವಣೆ ಮಾಡಿಕೊಳ್ಳಲು ಹೊಸ ಆಪ್ ಒಂದನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಸುಮಾರು ೧೦ ಮಂದಿ ಸಿಬ್ಬಂದಿಯೊಂದಿಗೆ ಕಂಪ್ಯೂಟರ್‌ಗಳನ್ನು ಅಳವಡಿಸಿದ್ದು, ಸಾರ್ವಜನಿಕರು ಸಲ್ಲಿಸುವ ಅಹವಾಲುಗಳನ್ನು ದಾಖಲು ಮಾಡಿಕೊಂಡು ಸಂಬಂಧಪಟ್ಟವರಿಗೆ ತೆಗೆದುಕೊಂಡ ಕ್ರಮದ ಬಗ್ಗೆ ಮಾಹಿತಿ ಕಳಿಸಿಕೊಡಲಾಗುವುದೆಂದು ತಿಳಿಸಿದರು.

ಅಹವಾಲು ಸಲ್ಲಿಸಬಯಸುವವರು ತಮ್ಮ ಹೆಸರನ್ನು ನೊಂದಾವಣೆ ಮಾಡಿಕೊಳ್ಳಬೇಕು ನೊಂದಾವಣೆ ಮಾಡಿ ಪ್ರತಿಯೊಬ್ಬರಿಗೂ ಟೋಕನ್ ನೀಡಲಾಗುವುದು ನಂತರ ಸಮಸ್ಯೆಗಳನ್ನು ಆಲಿಸಲಾಗುವುದು ಎಂದರು.

ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಇದೇ ರೀತಿಯ ಜನತಾದರ್ಶನ ಕಾರ್ಯಕ್ರಮ ನಡೆಸಲು ಸರ್ಕಾರ ಉದ್ದೇಶಿಸಿದೆ. ಇದಕ್ಕೂ ಮುಂಚಿತವಾಗಿ ಪ್ರತಿ ತಾಲೂಕಿನಲ್ಲಿ ೧೫ ದಿನಕ್ಕೊಮ್ಮೆ ತಾಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮ ನಡೆಸಲು ನಿರ್ದೇಶನ ನೀಡಲಾಗಿದ್ದು, ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮಳೆ ಕೊರತೆ ಹಿನ್ನೆಲೆಯಲ್ಲಿ ಅಜ್ಜಂಪುರ ಮತ್ತು ತರೀಕೆರೆ ತಾಲೂಕು ತೀವ್ರ ಸ್ವರೂಪದ ಬರ, ಉಳಿದ ನಾಲ್ಕು ತಾಲೂಕುಗಳನ್ನು ಸಾಧಾರಣ ಎಂದು ಸರ್ಕಾರ ಪರಿಗಣಿಸಿದ್ದು, ಸುಮಾರು ೨.೯ ಸಾವಿರ ಕೋಟಿ ಬೆಳೆ ಹಾನಿ ಎಂದು ಅಂದಾಜಿಸಲಾಗಿದೆ. ಕುಡಿಯುವ ನೀರು ಮತ್ತು ಮೇವಿಗೆ ಸಧ್ಯಕ್ಕೆ ಯಾವುದೇ ಸಮಸ್ಯೆ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಉಪಸ್ಥಿತರಿದ್ದರು.

On September 25 the district level public meeting in the city

About Author

Leave a Reply

Your email address will not be published. Required fields are marked *