September 20, 2024

ವಿದ್ಯಾರ್ಥಿಗಳನ್ನು ಅಣಿಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ

0
31st National Children's Science Conference Training & One Day Workshop for Science Teachers

31st National Children's Science Conference Training & One Day Workshop for Science Teachers

ಚಿಕ್ಕಮಗಳೂರು: ವಿದ್ಯಾರ್ಥಿಗಳನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿಜ್ಞಾನ ಸಮಾವೇಶ ದಲ್ಲಿ ಅಣಿಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದ್ದು ಗುಣಮಟ್ಟದ ಯೋಜನಾ ವರದಿ ತಯಾರಿಸುವ ವಿದ್ಯಾರ್ಥಿ ಗಳಿಗೆ ಹೆಚ್ಚು ಪ್ರೋತ್ಸಾಹಿಸಬೇಕು ಎಂದು ಜಿಲ್ಲಾ ವಿಜ್ಞಾನ ಪರಿಷತ್ ಗೌರವಾಧ್ಯಕ್ಷ ಎ.ಎನ್.ಮಹೇಶ್ ಹೇಳಿದರು.

ನಗರದ ಬೈಪಾಸ್ ಸಮೀಪ ಮಲೆನಾಡು ವಿದ್ಯಾಸಂಸ್ಥೆಯ ಪ್ರಾಯೋಗಿಕ ಪ್ರೌಢಶಾಲೆಯಲ್ಲಿ ಜಿಲ್ಲಾ ವಿಜ್ಞಾನ ಪರಿಷತ್ತು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಏರ್ಪಡಿಸಿದ್ದ ೩೧ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ತರಬೇತಿ ಹಾಗೂ ವಿಜ್ಞಾನ ಶಿಕ್ಷಕರ ಒಂದು ದಿನದ ಕಾರ್ಯಾಗಾರವನ್ನು ಮಂಗಳವಾರ ಉದ್ಗಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಿಂದ ಒಟ್ಟು ಹತ್ತು ವಿದ್ಯಾರ್ಥಿಗಳು ರಾಜ್ಯಮಟ್ಟದ ವಿಜ್ಞಾನ ಸಮಾವೇಶಕ್ಕೆ ಭಾಗವಹಿಸುವುದರಿಂದ ಅತ್ಯಂತ ಚುರುಕಿನಿಂದ ವಿಜ್ಞಾನ ಶಿಕ್ಷಕರು ಕಾರ್ಯನಿರ್ವಹಿಸಬೇಕು. ಉತ್ತಮ ಗುಣಮಟ್ಟದ ಯೋಜನಾ ವರದಿ ತಯಾರಿಸುವ ವಿದ್ಯಾರ್ಥಿಗಳಿಗೆ ಇನ್ನಷ್ಟು ಪ್ರೋತ್ಸಾಹಿಸುವ ಮೂಲಕ ಅವರಿಗೆ ಆತ್ಮಬಲ ತುಂಬುವ ಕೆಲಸ ಮಾಡ ಬೇಕು ಎಂದು ಹೇಳಿದರು.

ಈ ಹಿಂದೆಯು ಸಹ ಹಲವಾರು ವಿದ್ಯಾರ್ಥಿಗಳು ರಾಜ್ಯಮಟ್ಟದ ಸಮಾವೇಶಗಳಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತಂದಿರುವುದಕ್ಕೆ ವಿಜ್ಞಾನ ಶಿಕ್ಷಕರು ಮೂಲ ಕಾರಣ. ಆದ್ದರಿಂದ ಮುಂಬರುವ ಸಮಾವೇಶಗಳಲ್ಲಿ ಜಿಲ್ಲೆಯಿ ಂದ ಪ್ರತಿನಿಧಿಸುವಂತಹ ಮಕ್ಕಳನ್ನು ಆಯ್ಕೆಗೊಳಿಸಲು ಶಿಕ್ಷಕರು ಶ್ರಮವಹಿಸಬೇಕು ಎಂದು ಕಿವಿಮಾತು ಹೇಳಿ ದರು.

ವಿಜ್ಞಾನ ಶಿಕ್ಷಕರು ವೈಜ್ಞಾನಿಕ ಚಿಂತನೆ ಮೂಲಕ ಕಾರ್ಯನಿರ್ವಹಿಸಬೇಕು. ಮಕ್ಕಳ ಬೆಳವಣಿಗೆಗೆ ಸಹಕಾರ ನೀಡಬೇಕು. ವಿಜ್ಞಾನ ಸಮಾವೇಶಕ್ಕೆ ಜಿಲ್ಲೆಯಿಂದ ೧೦ ವಿದ್ಯಾರ್ಥಿಗಳು ರಾಜ್ಯಕ್ಕೆ ಹಾಗೂ ರಾಜ್ಯದಿಂದ ಒಟ್ಟು ೩೦ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ತೆರಳಲಿದ್ದು ಆ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದರೆ ಜಿಲ್ಲೆಯ ವಿದ್ಯಾರ್ಥಿ ಗಳು ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಲು ಸಾಧ್ಯ ಎಂದರು.

ರಾಜ್ಯ ವಿಜ್ಞಾನ ಪರಿಷತ್ ಕಾರ್ಯಕಾರಿ ಮಂಡಳಿ ಸದಸ್ಯ ಟಿ.ಕೆ.ಜಿ.ಅರಸ್ ಪ್ರಾಸ್ತಾವಿಕವಾಗಿ ಮಾತನಾಡಿ ದಿ|| ನರಸಿಂಹಯ್ಯನವರು ಸ್ಥಾಪಿಸಿದಂತಹ ವಿಜ್ಞಾನ ಪರಿಷತ್ತು ಇದೀಗ ರಾಜ್ಯಾದಾದ್ಯಂತ ಸರ್ಕಾರದ ಅನುದಾನದ ಮೂಲಕ ವ್ಯಾಪಿಸಿಕೊಂಡಿದೆ. ಇದರಿಂದ ಸಾವಿರಾರು ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಪ್ರತಿಭೆ ಅನಾವರಣ ಮಾ ಡಲು ಕಾರಣವಾಗಿದೆ ಎಂದು ಹೇಳಿದರು.

ಮುಂದಿನ ತಿಂಗಳಲ್ಲಿ ಜಿಲ್ಲಾಮಟ್ಟದ ವಿಜ್ಞಾನ ಸಮಾವೇಶ ನಡೆಯಲಿದ್ದು ಆ ನಿಟ್ಟಿನಲ್ಲಿ ಮಕ್ಕಳನ್ನು ಸೂಕ್ತ ರೀತಿ ಯಲ್ಲಿ ತಯಾರಿಸುವ ನಿಟ್ಟಿನಲ್ಲಿ ಶಿಕ್ಷಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದ್ದು ಉನ್ನತ ಮಟ್ಟ ದಲ್ಲಿ ಅಭ್ಯಾಸಿಸಿ ತಮ್ಮ ಶಾಲೆಯ ಮಕ್ಕಳಿಗೆ ವಿಜ್ಞಾನದ ಅರಿವನ್ನು ಮೂಡಿಸಿ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೇರೇಪಿ ಸಬೇಕು ಎಂದು ಹೇಳಿದರು.

ವಿಜ್ಞಾನ ಪರಿಷತ್ ಕಳೆದ ನಾಲ್ಕು ದಶಕಗಳ ಹೆಚ್ಚು ಕಾಲ ವಿಜ್ಞಾನ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರಲಾಗಿದೆ. ಮಕ್ಕಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪರಿಷತ್ತು ಶಿಕ್ಷಕರಿಗೆ ಸಂಪೂರ್ಣ ಸಹಕಾರ ನೀಡಲಾಗುತ್ತಿದ್ದು ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಮಕ್ಕಳನ್ನು ಕಳಿಸಿಕೊಡುವ ನಿಟ್ಟಿನಲ್ಲಿ ಸಹಕರಿಸಲಾಗುತ್ತಿದೆ ಎಂದು ಹೇಳಿದರು.

ಇದೇ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಸಿ.ರವೀಶ್ ಹಾಗೂ ಶಿಕ್ಷಣಾಧಿಕಾರಿ ಎಸ್.ಆರ್.ಮಂಜುನಾಥ್ ಕಾರ್ಯಾಗಾರದಲ್ಲಿ ಭಾಗವಹಿಸಿದ ವಿಜ್ಞಾನ ಶಿಕ್ಷಕರಿಗೆ ತರಬೇತಿ ಬಗ್ಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಶಿಕ್ಷಕಿ ಕೌಸರ್ ಫಾತಿಮಾ ವಹಿಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ವಿಜ್ಞಾನ ಪರಿಷತ್ ಅಧ್ಯಕ್ಷ ಸತ್ಯನಾರಾಯಣ್, ಗೌರವ ಸಲಹೆಗಾರ ಹೆಚ್.ಎಂ. ನೀಲಕಂಠಪ್ಪ, ಖಜಾಂಚಿ ಸದಾಶಿವಾ, ಕಾರ್ಯದರ್ಶಿ ಪ್ರಕಾಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಂ.ಬಿ.ಚಂದ್ರೇಗೌಡ, ಸಂಪನ್ಮೂಲ ವ್ಯಕ್ತಿಗಳಾದ ಹೆಗ್ಡೆ, ಶರಣಪ್ಪ, ಪ್ರಶಾಂತ್ ಮತ್ತಿತರರು ಹಾಜರಿದ್ದರು.

31st National Children’s Science Conference Training & One Day Workshop for Science Teachers

About Author

Leave a Reply

Your email address will not be published. Required fields are marked *