September 20, 2024

ಅ.9 ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ

0
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಎಂ ಮಹೇಶ್ ಪತ್ರಿಕಾಗೋಷ್ಠಿ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಎಂ ಮಹೇಶ್ ಪತ್ರಿಕಾಗೋಷ್ಠಿ

ಚಿಕ್ಕಮಗಳೂರು: ಮೂಡಿಗೆರೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಠಾಣಾ ಹಾಗೂ ಕಂದಾಯ ಭೂಮಿಯನ್ನು ಪರಭಾರೆ ಮಾಡಲು ಹೊರಟಿರುವ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಅ.೯ ರಂದು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಎಂ ಮಹೇಶ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು ಅವರು ಕೂಡಲೇ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅಕ್ರಮ ಭೂ ಕಬಳಿಕೆ ಮತ್ತು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಂದು ಪ್ರತಿಭಟನೆ ನಡೆಸಲಾಗುವುದೆಂದು ಹೇಳಿದರು.

ಈ ಪ್ರತಿಭಟನೆಯಲ್ಲಿ ರೈತರು, ರೈತ ಮಹಿಳೆಯರು, ವಿದ್ಯಾರ್ಥಿಗಳು ಎಲ್ಲಾ ಸಂಘ ಸಂಸ್ಥೆಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಭೂಗಳ್ಳರು, ಭೂ ಮಾಫಿಯಾ ನಡೆಸುವರ ಜೊತೆ ಕೈಜೋಡಿಸಿ ಕಾನೂನು ಬಾಹಿರವಾಗಿ ಗ್ರಾಮಠಾಣಾ ಜಾಗವನ್ನು ನಿವೇಶನಗಳಾಗಿ ಪರಿವರ್ತಿಸಿಕೊಂಡು ಅಕ್ರಮ ಮಾರಾಟ ನಡೆಸಿದ್ದಾರೆ ಎಂದು ಆರೋಪಿಸಿದರು.

ಕೂಡಲೇ ಸರ್ಕಾರ ಸೂಕ್ತ ತನಿಖೆ ನಡೆಸುವ ಮೂಲಕ ಸಂಬಂಧಪಟ್ಟ ಅಧಿಕಾರಿಗಳನ್ನು ಬಂಧಿಸಿ ಗ್ರಾಮಠಾಣಾ ಜಾಗವನ್ನು ಪಟ್ಟಣ ಪಂಚಾಯಿತಿಗೆ ವಾಪಾಸ್ ಇಡುವಂತೆ ಒತ್ತಾಯಿಸಿದರು.

೧೯೮೪ ರಲ್ಲಿ ಎಸ್‌ಸಿ, ಎಸ್‌ಟಿ ಜನಾಂಗದವರ ೭ ಜನರಿಗೆ ೧೪ ಎಕರೆ ಜಮೀನನ್ನು ಮಂಜೂರು ಮಾಡಿದ್ದು, ಆದರೆ ಇವರಿಗೆ ಯಾವುದೇ ಹಕ್ಕುಪತ್ರ ನೀಡದೆ ಸದರಿ ಜಮೀನನ್ನು ಅಕ್ರಮವಾಗಿ ಖಾತೆ ಮಾಡಿಕೊಂಡು ಮಾರಾಟ ಮಾಡಿರುವುದರಿಂದ ಈ ಕುಟುಂಬಗಳು ಕೂಲಿ ಮಾಡಿ ಜೀವನ ಸಾಗಿಸುವಂತಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಡಿ.ಆರ್ ದುಗ್ಗಪ್ಪಗೌಡ, ಹಸಿರು ಸೇನೆ ಜಿಲ್ಲಾಧ್ಯಕ್ಷ ಅನಂತೇಶ್, ಜಿಲ್ಲಾ ಕಾರ್ಯಾಧ್ಯಕ್ಷ ನಿರಂಜನ್ ಮೂರ್ತಿ, ತಾಲ್ಲೂಕು ಅಧ್ಯಕ್ಷ ತುಳಸೇಗೌಡ, ಜಿಲ್ಲಾ ಉಪಾಧ್ಯಕ್ಷ ಮಂಜೇಗೌಡ ಮತ್ತಿತರರು ಉಪಸ್ಥಿತರಿದ್ದರು.

A protest in front of the District Collector’s office on August 9

About Author

Leave a Reply

Your email address will not be published. Required fields are marked *