September 20, 2024

ನಿಗದಿತ ಅವಧಿಯಲ್ಲಿ ಕಾಮಗಾರಿ  ಪೂರ್ಣಗೊಳಿಸುವಂತೆ ಸೂಚನೆ

0
ತಾಲ್ಲೂಕು ಪಂಚಾಯಿತಿಯ ಡಾ. ಬಿ.ಆರ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಸಭೆ

ತಾಲ್ಲೂಕು ಪಂಚಾಯಿತಿಯ ಡಾ. ಬಿ.ಆರ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಸಭೆ

ಚಿಕ್ಕಮಗಳೂರು: ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುವ ಕಾಮಗಾರಿಗಳನ್ನು ಅನುಮೋದನೆ ಪಡೆದು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಅನುದಾನ ಅಪವ್ಯಯವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಜಿ.ಪಂ ಉಪ ಕಾರ್ಯದರ್ಶಿ(ಆಡಳಿತ) ಮತ್ತು ತಾ.ಪಂ ಆಡಳಿತಾಧಿಕಾರಿಯೂ ಆಗಿರುವ ಆರ್.ಬಿ ಕರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ತಾಲ್ಲೂಕು ಪಂಚಾಯಿತಿಯ ಡಾ. ಬಿ.ಆರ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ಕಾರದ ವಿವಿಧ ಅನುದಾನದಡಿ ಬಿಡುಗಡೆಯಾದ ಲೆಕ್ಕ ಶೀರ್ಷಿಕೆ ಜುಲೈ ತಿಂಗಳಲ್ಲಿ ನಡೆದ ಸಭೆಯಲ್ಲಿ ನಡಾವಳಿಗಳನ್ನು ನೂತನ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಕ್ರಿಯಾ ಯೋಜನೆ ತಯಾರಿಸಿ, ಮಂಡಿಸಲು ಅಧಿಕಾರಿಗಳಿಗೆ ಸೂಚಿಸಿದ ಅವರು ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡುವಂತೆ ಗುತ್ತಿಗೆದಾರರಲ್ಲಿ ಕ್ರಮ ವಹಿಸುವಂತೆ ತಿಳಿಸಿದರು.

ವಿವಿಧ ಅಂಗನವಾಡಿ ಕಟ್ಟಡ ಕಾಮಗಾರಿ ಪರಿಶೀಲನೆ, ಶಾಲಾ ಕಟ್ಟಡದ ಪ್ರಗತಿ, ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದ ಇದೇ ಸಭೆಯಲ್ಲಿ ನಡೆಸಿ ತಾ.ಪಂ ಅನಿರ್ಬಂಧಿತ ಅನುದಾನ ೨೩೦ ಲಕ್ಷ ರೂ ಚಿಕ್ಕಮಗಳೂರು ತಾ.ಪಂ ಗೆ ಮಂಜೂರಾಗಿದ್ದು, ಸರ್ಕಾರದ ಆದೇಶದ ಅನ್ವಯ ಕ್ರಿಯಾ ಯೋಜನೆ ತಯಾರಿಸಿ, ಅನುಮೋದನೆ ಸಲ್ಲಿಸಲು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಕಾಮಗಾರಿಗಳ ಪಟ್ಟಿ ಪರಿಶೀಲಿಸಿ ಅನುಮೋದನೆ ನೀಡುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು. ೨೦೨೩-೨೪ ನೇ ಸಾಲಿನ ಜಿಲ್ಲೆಯ ಎಲ್ಲಾ ತಾ.ಪಂ ಗಳಿಗೆ ಅನುಮೋದನೆ ನೀಡಲಾಗಿದ್ದ ಶೇ.೧೫ ರಷ್ಟು ಜಿ.ಪಂ, ತಾ.ಪಂ ಅನುದಾನದಲ್ಲಿ ನಿಗಧಿಪಡಿಸಿದ ಆಧಾರದಲ್ಲಿ ಶಾಲಾ ಕಟ್ಟಡಗಳಿಗೆ ವಿನಿಯೋಗಿಸಲು ಕ್ರಮ ವಹಿಸಲಾಗಿದೆ ಎಂದರು.

ಅನುಮೋದನೆ ನೀಡುವುದು ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ತಾ.ಪಂ ಕಾರ್ಯ ನಿರ್ವಹಣ ಅಧಿಕಾರಿ ತಾರನಾಥ್ ಈ ಸಭೆಗೆ ಎಲ್ಲಾ ಅಧಿಕಾರಿಗಳು ಹಾಜರಿದ್ದು ಉಪಸ್ಥಿತರಿದ್ದರು.

Taluk Panchayat General Assembly Meeting

About Author

Leave a Reply

Your email address will not be published. Required fields are marked *