September 20, 2024

ಮಹಾತ್ಮರ ಜಯಂತಿಗಳನ್ನು ಎಲ್ಲಾ ವರ್ಗದವರು ಒಗ್ಗೂಡಿ ಆಚರಿಸಬೇಕು

0
ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

ಚಿಕ್ಕಮಗಳೂರು: ಹಾತ್ಮರ ಜಯಂತಿಗಳನ್ನು ಸಮಾಜದ ಎಲ್ಲಾ ವರ್ಗದ ಜನರು ಒಗ್ಗೂಡಿ ಆಚರಿಸಿದಾಗ ಅದಕ್ಕೊಂದು ಅರ್ಥ ಬರುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,  ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ನಗರದಲ್ಲಿ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಭವನಕ್ಕೆ  ರಾಜ್ಯ ಸರ್ಕಾರ 75 ಲಕ್ಷ ರೂ ಅನುದಾನ ಮಂಜೂರು ಮಾಡಿದೆ ಎಂದು ಶಾಸಕ ಎಚ್ ಡಿ ತಮ್ಮಯ್ಯ ಹೇಳಿದರು.

ವಾಲ್ಮೀಕಿ ಭವನದ ಕಾಮಗಾರಿ ಈಗಾಗಲೇ ಶೇಕಡ 90ರಷ್ಟು ಮುಗಿದಿದೆ. ಕಾಮಗಾರಿ ಪೂರ್ಣಗೊಳ್ಳಲು ತಾಂತ್ರಿಕವಾಗಿ ಕೆಲವು ಅಡಚಣೆಗಳಿದ್ದು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸೇರಿ ಅದನ್ನು ಬಗೆಹರಿಸಿ ಆದಷ್ಟು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಿ  ಭವನವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು ಎಂದರು ಮುಂದಿನ ವರ್ಷ ವಾಲ್ಮೀಕಿ ಜಯಂತಿಯನ್ನು ಹೊಸ ಭವನದಲ್ಲೇ ಮಾಡಲಾಗುವುದು ಎಂದು  ತಿಳಿಸಿದರು.

ಮಹಾತ್ಮರ ಜಯಂತಿಗಳು ಕೇವಲ ಯಾವುದೋ ಒಂದು ವರ್ಗಕ್ಕೆ ಸೀಮಿತವಾಗಬಾರದು ಅವು ಸಾರ್ವಜನಿಕ ಜಯಂತಿಯಾಗಬೇಕು ಎಂದ ಅವರು ಬುದ್ಧ, ಬಸವ, ಅಂಬೇಡ್ಕರ್, ಕನಕದಾಸರು, ವಾಲ್ಮೀಕಿ, ನಾರಾಯಣ ಗುರುಗಳು ಸೇರಿದಂತೆ ಎಲ್ಲಾ ಮಹಾತ್ಮರು ಶೋಷಿತ ವರ್ಗದ ಉದ್ದಾರಕ್ಕಾಗಿ ಸಮಾಜದ ಹಿತಕ್ಕಾಗಿ ಕೆಲಸ ಮಾಡಿದ್ದಾರೆ. ಅವರ ಜಯಂತಿಗಳನ್ನು ಎಲ್ಲಾ ವರ್ಗಗಳ ಜನರು ಸಾರ್ವಜನಿಕರು ಒಗ್ಗೂಡಿ ಆಚರಿಸಬೇಕು ಎಲ್ಲರೂ ಜಯಂತಿಗಳಲ್ಲಿ ಭಾಗವಹಿಸುವಂತಾಗಬೇಕು ಎಂದು ಕಿವಿಮಾತು ಹೇಳಿದರು.

24 ಸಾವಿರ ಶ್ಲೋಕಗಳುಳ್ಳ ಏಳು ಕಾಂಡಗಳುಳ್ಳ ರಾಮಾಯಣ ಮಹಾ ಗ್ರಂಥವನ್ನು ರಚನೆ ಮಾಡಿದ ಮಹಾತ್ಮರು ವಾಲ್ಮೀಕಿ ಮಹರ್ಷಿಗಳು ಎಂದ ಅವರು ಸಂಘರ್ಷಗಳು ಇಕ್ಕಟ್ಟು ಬಿಕ್ಕಟ್ಟುಗಳನ್ನು ಮೆಟ್ಟಿನಿಂತು  ಏನನ್ನು ಬೇಕಾದರೂ ಸಾದಿಸಬಹುದು ಎಂಬುದಕ್ಕೆ ವಾಲ್ಮೀಕಿ ಮಹರ್ಷಿಗಳೇ ಉದಾಹರಣೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ವಾಲ್ಮೀಕಿ ಮಹರ್ಷಿಗಳು ಈ ನಾಡಿನ ಬಹುದೊಡ್ಡ ಆಸ್ತಿ ಅವರನ್ನು ಯಾವುದೋ ಒಂದು ವರ್ಗಕ್ಕೆ ಸೀಮಿತಗೊಳಿಸುವುದು ಬಹುದೊಡ್ಡ ಅಪರಾಧವಾಗುತ್ತದೆ ಎಂದರು.

ಮಹಾಭಾರತ ಗ್ರಂಥವನ್ನು ಬರೆದವರು  ವೇದವ್ಯಾಸರು ರಾಮಾಯಣವನ್ನು ಬರೆದವರು ವಾಲ್ಮೀಕಿ ಮಹರ್ಷಿಗಳು ಇವರಿಬ್ಬರೂ ಅಸ್ಪೃಶ್ಯರೇ ಆಗಿದ್ದರೂ ಸಮಾಜಕ್ಕೆ ರಾಮಾಯಣ ಮಹಾಭಾರತ ದಂತಹ ಕೃತಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಅದು ನಮ್ಮ ಮುಂದಿನ ಪೀಳಿಗೆಗೆ ದಾರಿದೀಪವಾಗಬೇಕು ಹಾಗಾಗ ಬೇಕಾದರೆ ಅವರ ವಿಚಾರಧಾರೆಗಳನ್ನು ಎಲ್ಲರಿಗೂ ತಿಳಿಸುವ ಕೆಲಸ ಮಾಡಬೇಕು ಮುಂದಿನ ಪೀಳಿಗೆ ಅವರ ಹಾದಿಯಲ್ಲಿ ನಡೆಯುವಂತೆ ಮಾಡಬೇಕು ಎಂದು ಸಲಹೆ ಮಾಡಿದರು.

ವಾಲ್ಮೀಕಿ ಮಹರ್ಷಿಗಳ ಮತ್ತು ಮಹಾತ್ಮರ ವಿಚಾರಧಾರೆಗಳನ್ನು ಎಲ್ಲರಿಗೂ ತಲುಪಿಸುವ ಕೆಲಸ ಮಾಡಿದರೆ ಮಾತ್ರ ಸ್ವಾಸ್ಥ್ಯ ಸಮಾಜದ ನಿರ್ಮಾಣವಾಗುತ್ತದೆ ಜಯಂತಿ ಆಚರಣೆಗೆ ಅರ್ಥ ಬರುತ್ತದೆ ಜಯಂತಿ ಸಾರ್ಥಕವಾಗುತ್ತದೆ ಎಂದು ಹೇಳಿದರು. ರಾಮಾಯಣದ ಕನ್ನಡ ಅವತರಣಿಕೆಯ ಶ್ಲೋಕವನ್ನು ಇದೇ ವೇಳೆ   ಸಬಿಕರೆದುರು ಹಾಡಿ ರಂಜಿಸಿದ ಅವರು ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ನಮ್ಮ ಮುಂದಿನ ಪೀಳಿಗೆಗೆ ತಿಳಿಸುವ ಮೂಲಕ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಲು ಎಲ್ಲರೂ ಮುಂದಾಗಬೇಕು ಎಂದು ಕಿವಿ ಮಾತು ಹೇಳಿದರು.

ಹೊಸ ನಗರದ ಕೊಡಚಾದ್ರಿ ಪ್ರಥಮ ದಜೆ೯ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಕೆ. ಶ್ರೀಪತಿ ಹಳಗುಂದ ಮಹಷಿ೯ ವಾಲ್ಮೀಕಿ ಅವರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾಯ೯ಕ್ರಮದಲ್ಲಿ ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮ್ಟೆ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಗೋಪಾಲ್ ಕೃಷ್ಣ, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ, ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಭೀಮಪ್ಪ ಜಿ.ಕೆ. ಜಿಲ್ಲಾ ವಾಲ್ಮೀಕಿ ನಾಯಕ ಯುವಕರ ಸಂಘದ ಅಧ್ಯಕ್ಷ ಜಗದೀಶ್ ಕೋಟೆ, ಐ.ಟಿ.ಡಿ.ಪಿ.ಅಧಿಕಾರಿ ಭಾಗೀರಥಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು..

Maharshi Valmiki Jayanti

About Author

Leave a Reply

Your email address will not be published. Required fields are marked *