September 20, 2024

ಕಾಂಗ್ರೆಸ್ ಸರ್ಕಾರ ಜನರ ಆಶಯ ಮರೆತು ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ

0
ಬಹುಜನ ಸಮಾಜ ಪಾರ್ಟಿಯ ಕರ್ನಾಟಕ ರಾಜ್ಯ ಉಸ್ತುವಾರಿ ಎಂ.ಕೃಷ್ಣಮೂರ್ತಿ ಸುದ್ದಿಗೋಷ್ಠಿ

ಬಹುಜನ ಸಮಾಜ ಪಾರ್ಟಿಯ ಕರ್ನಾಟಕ ರಾಜ್ಯ ಉಸ್ತುವಾರಿ ಎಂ.ಕೃಷ್ಣಮೂರ್ತಿ ಸುದ್ದಿಗೋಷ್ಠಿ

ಚಿಕ್ಕಮಗಳೂರು:  ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಜನರ ಆಶಯವನ್ನು ಮರೆತು ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ ಎಂದು ಬಹುಜನ ಸಮಾಜ ಪಾರ್ಟಿಯ ಕರ್ನಾಟಕ ರಾಜ್ಯ ಉಸ್ತುವಾರಿಯಾಗಿರುವ ಎಂ.ಕೃಷ್ಣಮೂರ್ತಿ ಆರೋಪಿಸಿದರು.

ಇಂದು ನಗರದಲ್ಲಿ ಏರ್ಪಡಿಸಿದ್ದ ಬಿ.ಎಸ್.ಪಿ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸಿದ್ದ ಅವರು ಪ್ರಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

೫ ಗ್ಯಾರಂಟಿಗಳನ್ನು ಹೇಳಿ ಅಧಿಕಾರ ಹಿಡಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಾರಂಭದ ೬ ತಿಂಗಳಲ್ಲಿಯೇ ವಿಫಲತೆಯ ಹಾದಿ ಹಿಡಿದಿದೆ ಅಧಿಕಾರಕ್ಕಾಗಿ ಗುಂಪುಗಾರಿಕೆ ಮಾಡಿಕೊಂಡು ಕಚ್ಚಾಡುತ್ತಿದ್ದಾರೆ ಎಂದು ಟೀಕಿಸಿದರು.

ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಭ್ರಷ್ಠಾಚಾರ ಹೆಚ್ಚಾಗಿ ಅಲ್ಪಸಂಖ್ಯಾತರು ದಲಿತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ತಡೆಯುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದರಲ್ಲದೆ ವರ್ಗಾವಣೆ ದಂಧೆ ನಡೆಯುತ್ತಿದ್ದು ಭ್ರಷ್ಠಾಚಾರ ನಿಲ್ಲಿಸದಿದ್ದರೆ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದ್ದರು.

ಬಿ.ಎಸ್.ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಮಾತನಾಡಿ ಈಗಿನ ಸರ್ಕಾರ ಬರುವುದಕ್ಕಿಂತ ಮುಂಚೆ ಅಧಿಕಾರ ನಡೆಸಿದ್ದ ಎಲ್ಲಾ ಪಕ್ಷಗಳು ಒಳಮೀಸಲಾತಿಯನ್ನು ಜಾರಿಗೆ ತರುವುದಾಗಿ ಹೇಳಿದ್ದವು ಸಿದ್ದರಾಮಯ್ಯನವರು ಸರ್ಕಾರ ರಚಿಸಿ ಮೊದಲ ಸಂಪುಟ ಸಭೆಯಲ್ಲಿಯೇ ಒಳಮೀಸಲಾತಿಯನ್ನು ಘೋಷಿಸಿ ಜಾರಿ ಮಾಡುವುದಾಗಿ ಹೇಳಿದ್ದರು ಆದರೆ ಈವರೆಗೆ ಆ ಬಗ್ಗೆ ಮಾತನಾಡುತ್ತಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಜಾತಿವಾರು ಜನಗಣತಿ ನಡೆಸಿ ವರದಿ ಸಿದ್ದವಾಗಿರುವುದಾಗಿ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಹೇಳಿದ್ದಾರೆ. ಆದರೆ ಈ ವರದಿಯನ್ನು ಸರ್ಕಾರ ಬಿಡುಗಡೆ ಮಾಡುತ್ತಿಲ್ಲ ಹಿಂದಿನಿಂದಲೂ ಬಿ.ಎಸ್.ಪಿ ಒತ್ತಾಯಿಸುತ್ತಿರುವಂತೆ ಕಾಂತರಾಜ್ ಆಯೋಗದ ವರದಿಯನ್ನು ಕೂಡಲೆ ಜಾರಿಗೆ ತರುವಂತೆ ಆಗ್ರಹಿಸಿದರು.

ಹಿಂದೆ ಸಿದ್ದರಾಮಯ್ಯ ಸಿ.ಎಂ ಆಗಿದ್ದಾಗ ಎಸ್.ಸಿ.ಪಿ.ಡಿ.ಎಸ್.ಪಿ ಹಣ ಸಮರ್ಪಕವಾಗಿ ಅನು?ನವಾಗದಿದ್ದರೆ ಶಿಕ್ಷೆ ವಿಧಿಸುವ ಕಾನೂನು ಜಾರಿಗೊಳಿಸಿದ್ದರು ಆದರೆ ಹಿಂದಿನ ಸರ್ಕಾರ ಸುಮಾರು ೧ ಲಕ್ಷ ಸಾವಿರ ಕೋಟಿ ಹಣವನ್ನು ಮೆಟ್ರೋ ಹಾಗೂ ಇನ್ನಿತರ ನೀರಾವರಿ ಯೋಜನೆಗಳಿಗೆ ಬಳಕೆ ಮಾಡಿಕೊಂಡು ಎಸ್.ಸಿ, ಎಸ್.ಟಿ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಸುಮಾರು ೧೧ ಸಾವಿರ ಕೋಟಿ ಎಸ್.ಸಿ, ಎಸ್.ಟಿ ಅನುಧಾನವನ್ನು ೫ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡು ಆ ಸಮುದಾಯದ ಜನರಿಗೆ ಅನ್ಯಾಯ ಮಾಡಿದ್ದಾರೆ ಅದೇ ೧೧ ಸಾವಿರ ಕೋಟಿ ಹಣವನ್ನು ಸಮುದಾಯದ ನಿರುದ್ಯೋಗ ನಿವಾರಣೆ ಇನ್ನಿತರ ಉದ್ದೇಶಗಳಿಗೆ ಬಳಸಿಕೊಂಡಿದ್ದರೆ ಪರಿಶಿಷ್ಠ ಸಮುದಾಯ ಅಭಿವೃದ್ಧಿ ಆಗುತ್ತಿತ್ತು ಎಂದು ಹೇಳಿದರು.

ರಾಜ್ಯ ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚು ಗಮನ ಹರಿಸಿದ್ದು ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ನಿಂತು ಹೋಗಿದೆ ಮಳೆ ಇಲ್ಲದೆ ರೈತರು ಸಂಕ?ದಲ್ಲಿದ್ದಾರೆ ಲೋಡ್ ಶೆಡ್ಡಿಂಗ್‌ನಿಂದ ಕೈಗಾರಿಕೋದ್ಯಮಗಳು, ರೈತರು ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗಿದೆ ಎಂದು ತಿಳಿಸಿದರು.

ಈ ಜಿಲ್ಲೆಯಲ್ಲಿ ಸಾವಿರಾರು ಕುಟುಂಬಗಳು ಮನೆ ನಿವೇಶನ ಇಲ್ಲದೆ ಭೂ ರೈತರಾಗಿದ್ದಾರೆ ಫಾರಂ ೫೩,೫೭ ಮತ್ತು ೯೪ ಸಿ.ಸಿ ಯೋಜನೆಗಳಲ್ಲಿ ಆರು ತಿಂಗಳು ಕಳೆದ ರೂ ಸಮಿತಿ ರಚಿಸಿ ಜಮೀನು ಮತ್ತು ನಿವೇಶನ ಮಂಜೂರು ಮಾಡುತ್ತಿಲ್ಲ ಕೂಡಲೇ ಅರ್ಹ ಫಲಾನುಭವಿಗಳಿಗೆ ಜಮೀನು ಮತ್ತು ನಿವೇಶನದ ಹಕ್ಕುಪತ್ರ ನೀಡಬೇಕೆಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮ ವಿಫಲವಾಗಿದ್ದು ಅನೇಕ ಕಡೆಗಳಿಂದ ಪ್ರವಾಸಿಗರು ಬರುತ್ತಿದ್ದಾರೆ ಈ ಭಾಗದ ಪರಿಸರ ಹಾಳಾಗುತ್ತಿದೆ ಅಕ್ರಮವಾಗಿ ಮಾದಕ ವಸ್ತುಗಳು ಬರುತ್ತಿದ್ದು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಈ ಜಿಲ್ಲೆಯ ಪರಿಸರಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ರೈತರು ಹಾಗೂ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಕೂಡಲೆ ಗಮನಹರಿಸಿ ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ರಾಜ್ಯದಲ್ಲಿ ರಾಜಕೀಯವಾಗಿ ಬಿ.ಎಸ್.ಪಿ ಪಕ್ಷ ಹಿನ್ನಡೆ ಸಾಧಿಸುತ್ತಿರುವ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಅವರು ಹಿಂದೆ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಜನ ಬೇಸತ್ತಿದ್ದರು ಹಾಗೂ ಕಾಂಗ್ರೆಸ್ ಪಕ್ಷ ಐದು ಉಚಿತ ಉಡುಗೊರೆಗಳ ಗ್ಯಾರಂಟಿ ಯೋಜನೆಗಳ ಆಸೆ ತೋರಿಸಿದ್ದರಿಂದ ಬಿ.ಎಸ್.ಪಿ ಪರವಾಗಿ ಬರಬೇಕಾದ ಮತಗಳು ಕಾಂಗ್ರೆಸ್ ಪರ ಚಲಾಯಿಸಲ್ಪಟ್ಟವು ಆ ಕಾರಣದಿಂದ ತಮ್ಮ ಪಕ್ಷಕ್ಕೆ ಹಿನ್ನಡೆಯಾಗಿದ್ದು ಮುಂಬರಲಿರುವ ಲೋಕಸಭೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂಘಟನೆ ಮಾಡುತ್ತಿರುವುದಾಗಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿ.ಎಸ್.ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಮುನಿಯಪ್ಪ, ರಾಜ್ಯ ಉಪಾಧ್ಯಕ್ಷ ಗಂಗಾಧರ್ ಬಹುಜನ್, ರಾಜ್ಯ ಕಾರ್ಯದರ್ಶಿ ಕೆ.ಬಿ ಸುಧಾ, ಜಿಲ್ಲಾಧ್ಯಕ್ಷ ಕೆ.ಟಿ ರಾಧಾಕೃ? ಪರಮೇಶ್, ಎಚ್.ಕುಮಾರ್, ಜಾಕೀರ್ ಹುಸೇನ್, ಎಂ. ಬಾಬು ಉಪಸ್ಥಿತರಿದ್ದರು.

BSP in-charge M. Krishnamurthy press conference

 

About Author

Leave a Reply

Your email address will not be published. Required fields are marked *