September 19, 2024

ಕಾಡಾನೆ ದಾಳಿಗೆ ಮೃತಪಟ್ಟ ಮಹಿಳೆ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರ

0
ಮೂಡಿಗೆರೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ತುರ್ತು ಸಭೆ

ಮೂಡಿಗೆರೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ತುರ್ತು ಸಭೆ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆಯ ಹೆಡದಾಳು ಬಳಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ ೨೯ ವರ್ಷ ವಯಸ್ಸಿನ ಶ್ರಮಿಕ ಮಹಿಳೆ ಮೀನಾ ಅವರ ಸಾವಿಗೆ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ತಕ್ಷಣ ೧೫ ಲಕ್ಷ ರೂ ಪರಿಹಾರದ ಚೆಕ್ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬುಧವಾರ ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದಲ್ಲಿ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ನಿಧನರಾಗಿದ್ದ ಮಾಜಿ ಸಚಿವ ಡಿಬಿ ಚಂದ್ರೆಗೌಡ
ಅಂತಿಮ ದರ್ಶನ ಪಡೆದ ಬಳಿಕ ಮೂಡಿಗೆರೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ತುರ್ತು ಸಭೆ ನಡೆಸಿದರು.

ಪಟ್ಟಣಕ್ಕೆ ಬಂದಿರುವ ಕಾಡಾನೆಗಳನ್ನು ವಾಪಾಸ್ ಕಾಡಿಗೆ ಕಳುಹಿಸಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಮೃತ ಮೀನಾ ಅವರ ಮೃತದೇಹ ಇಟ್ಟುಕೊಂಡು ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರ ಜತೆ ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕಾಡಾನೆ ಹಾವಳಿ ತಪ್ಪಿಸಲು ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಸೂಚನೆ ನೀಡಿದ್ದೇನೆ ಎಂದರು

ಅರಣ್ಯ ಸಚಿವರೂ ಇಲ್ಲಿಗೆ ಬಂದು ಸುದೀರ್ಘ ಸಭೆ ನಡೆಸಿ ರಕ್ಷಣಾ ಕಾರ್ಯಗಳ ಕುರಿತಾಗಿ ಕ್ರಮ ಕೈಗೊಳ್ಳುತ್ತಾರೆ. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಕಾಫಿ ತೋಟಗಳು ಇರುವುದರಿಂದ ಕಾಡಾನೆಗಳು ಬರುತ್ತಿವೆ. ರೈಲ್ವೇ ಫೆನ್ಸಿಂಗ್ ಹಾಕುವುದೂ ಸೇರಿ ಅಗತ್ಯ ಕ್ರಮಗಳ ಕುರಿತು ಟಾಸ್ಕ್ ಫೋರ್ಸ್ ಗೆ ಸ್ಪಷ್ಟ ಸೂಚನೆ ನೀಡಲು ಅರಣ್ಯ ಸಚಿವರ ಜತೆ ಚರ್ಚಿಸಿದ್ದೇನೆ ಎಂದು ಹೇಳಿದರು

ಪಂಚಾಯ್ತಿ ಮಟ್ಟದಲ್ಲಿ, ತಾಲ್ಲೂಕು ಮಟ್ಟದ ಅಧಿಕಾರಿಗಳು, ತಾಲೂಕು ಕೇಂದ್ರದಲ್ಲಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲಾ ಕೇಂದ್ರದಲ್ಲಿ ಉಳಿದುಕೊಂಡು ಕರ್ತವ್ಯ ನಿರ್ವಹಿಸಬೇಕು ಸೂಚಿಸಿದ ಅವರು, ರೈತರಿಗೆ ಪ್ರತಿನಿತ್ಯ ತ್ರಿಫೇಸ್ ೭ ಗಂಟೆ ವಿದ್ಯುತ್ ನೀಡಲು ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನ ತಪ್ಪಿಸದಂತೆ ಖಡಕ್ ಸೂಚನೆ ನೀಡಿದರು.

ಪಿಡಿಒಗಳು ಪಂಚಾಯ್ತಿ ಕರ್ತವ್ಯ ಕೇಂದ್ರದಲ್ಲೇ ಉಳಿದು ಕರ್ತವ್ಯ ನಿರ್ವಹಿಸಬೇಕು. ತಾಲ್ಲೂಕು ಅಧಿಕಾರಿಗಳು ತಾಲ್ಲೂಕು ಕೇಂದ್ರಗಳಲ್ಲಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲಾ ಕೇಂದ್ರಗಳಲ್ಲೇ ಉಳಿಯಬೇಕು. ಸಾರ್ವಜನಿಕರ ಜತೆ ನಿರಂತರ ಸಂಪರ್ಕದಲ್ಲಿದ್ದು ಸಮಸ್ಯೆ ಆಲಿಸಬೇಕು ಎಂದು ತಿಳಿಸಿದರು.

15 lakh compensation to the family of the woman who died in the forest attack

About Author

Leave a Reply

Your email address will not be published. Required fields are marked *

You may have missed