September 19, 2024

ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ನ.೨೬ರಂದು ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ಸಮ್ಮೇಳನ

0
ನಾರಿ ಶಕ್ತಿ ಸಂಗಮ ಸಹ ಸಂಯೋಜಕಿ ವಾಣಿನಾಗೇಶ್ ಪತ್ರಿಕಾಗೋಷ್ಠಿ

ನಾರಿ ಶಕ್ತಿ ಸಂಗಮ ಸಹ ಸಂಯೋಜಕಿ ವಾಣಿನಾಗೇಶ್ ಪತ್ರಿಕಾಗೋಷ್ಠಿ

ಚಿಕ್ಕಮಗಳೂರು: ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ನ.೨೬ರಂದು ಭಾನುವಾರ ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ಸಮ್ಮೇಳನ ಆಯೋಜಿಸಲಾಗಿದೆ ಎಂದು ನಾರಿ ಶಕ್ತಿ ಸಂಗಮ ಸಹ ಸಂಯೋಜಕಿ ವಾಣಿನಾಗೇಶ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿ?ಯ ತಿಳಿಸಿ ನಾರಿಶಕ್ತಿ ಸಂಗಮ ಮಹಿಳಾ ಸಮನ್ವಯ ಕರ್ನಾಟಕ ದಕ್ಷಿಣ ಪ್ರಾಂತ, ಸಮರ್ಪಣ ಟ್ರಸ್ಟ್ ಇವರುಗಳ ಸಹಯೋಗದಲ್ಲಿ ಆಯೋಜಿಸಿರುವ ಮಹಿಳಾ ಸಮ್ಮೇಳನವನ್ನು ಕಸ್ತೂರಿ ಬಾಸದನ ಕಾರ್ಯದರ್ಶಿ ಶ್ರೀಮತಿ ಮೋಹಿನಿ ಸಿದ್ದೇಗೌಡ ಉದ್ಘಾಟಿಸಲಿದ್ದಾರೆ ಎಂದರು.

ರಾಷ್ಟ್ರೀಯ ಚಿಂತನೆ, ಸಾಮಾಜಿಕ ಸಾಮರಸ್ಯ, ಮಹಿಳಾ ಸುರಕ್ಷೆ, ಗ್ರಾಮೀಣ ಕೃಷಿ ಇತ್ಯಾದಿ ವಿಚಾರಗಳ ಬಗ್ಗೆ ಈ ಸಮ್ಮೇಳನ ಬೆಳಕು ಚೆಲ್ಲಲಿದೆ. ಚಿಕ್ಕಮಗಳೂರಿನಲ್ಲಿ ನಡೆಯುವ ಈ ಸಮ್ಮೇಳನದಲ್ಲಿ ೧೫೦೦ ಮಹಿಳೆಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಈ ಸಮ್ಮೇಳನಕ್ಕೆ ವೈದ್ಯರು, ವಕೀಲರು, ಅಧ್ಯಾಪಕಿಯರು, ಸ್ವಯಂಸೇವಾ ಸಂಸ್ಥೆಗಳು, ಮಹಿಳಾ ಸಂಘಗಳು/ವೇದಿಕೆಗಳು, ಉದ್ಯೋಗಸ್ಥ ಮಹಿಳೆಯರು, ವಿದ್ಯಾರ್ಥಿನಿಯರು, ಹೋರಾಟಗಾರ್ತಿಯರು ಹೀಗೆ ೧೧ ಶ್ರೇಣಿಗಳನ್ನು ಗುರುತಿಸಲಾಗಿದ್ದು ಆ ಶ್ರೇಣಿಯ ಮಹಿಳೆಯರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಅದಕ್ಕಾಗಿ ತಾಲೂಕು, ನಗರ ಹಾಗು ಜಿಲ್ಲಾ ಮಟ್ಟಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದೆ ಎಂದರು.

ಸ್ವಾತಂತ್ರ್ಯ ಪೂರ್ವದಲ್ಲಿ ಹೋರಾಟ ಮಾಡಿದ ವೀರ ಮಹಿಳೆಯರ ಹಾಗೂ ಸ್ವಾತಂತ್ರ್ಯ ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ದಂತಹ ಮಹಿಳಾ ಸಾಧಕಿಯರ ಚಿತ್ರ ಪ್ರದರ್ಶನ ಏರ್ಪಡಿಸಲಾಗಿದ್ದು ಮಹಿಳೆಯರು ತಯಾರಿಸಿದ ಕರಕುಶಲ ವಸ್ತುಗಳ ಮತ್ತು ಗೋವು ಉತ್ಪನ್ನಗಳ ಮಳಿಗೆಗಳು ಸಮ್ಮೇಳನದಲ್ಲಿ ಇರುತ್ತದೆ ಎಂದು ತಿಳಿಸಿದರು.

ಸಮ್ಮೇಳನದಲ್ಲಿ ಭಾರತೀಯ ಚಿಂತನೆಯಲ್ಲಿ ಮಹಿಳೆ, ಭಾರತದ ವಿಕಾಸದಲ್ಲಿ ಮಹಿಳೆಯ ಪಾತ್ರ ಮತ್ತು ಮಹಿಳಾ ಸುರಕ್ಷಾ, ಸ್ವಾವಲಂಬನೆ, ಆರೋಗ್ಯ, ಶಿಕ್ಷಣ ವಿ?ಯಗಳ ಬಗ್ಗೆ ಮಾರ್ಗದರ್ಶನ ನೀಡಲು ವಿ?ಯ ತಜ್ಞರು ಆಗಮಿಸಲಿದ್ದಾರೆ ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ಅಧ್ಯಕ್ಷ ಬಿ.ಮಲ್ಲಿಕಾರ್ಜುನರಾವ್, ಅನ್ನಪೂರ್ಣ ಇದ್ದರು.

Nari Shakti Sangam to create awareness among women

About Author

Leave a Reply

Your email address will not be published. Required fields are marked *

You may have missed