September 19, 2024

ಸಮಾಜದ ಸ್ವಸ್ಥ್ಯ ಕಾಪಾಡುವ ಪೊಲೀಸರ ಮೇಲೆ ನಿರಂತರ ದೌರ್ಜನ್ಯ

0
ಕರ್ನಾಟಕ ಪೊಲೀಸ್ ಮಹಾ ಸಂಘದ ಜಿಲ್ಲಾಧ್ಯಕ್ಷ ರೈತ ಮನೋಜ್ ಸುದ್ದಿಗೋಷ್ಟಿ

ಕರ್ನಾಟಕ ಪೊಲೀಸ್ ಮಹಾ ಸಂಘದ ಜಿಲ್ಲಾಧ್ಯಕ್ಷ ರೈತ ಮನೋಜ್ ಸುದ್ದಿಗೋಷ್ಟಿ

ಚಿಕ್ಕಮಗಳೂರು: ಸಮಾಜದ ಸ್ವಸ್ಥ್ಯ ಕಾಪಾಡುವ ಪೊಲೀಸರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ರಾಜ್ಯ ಸರ್ಕಾರ ಪೊಲೀಸರಿಗೆ ಭದ್ರತೆ ನೀಡಬೇಕು ಹಾಗೂ ಪೊಲೀಸರ ಅಭಿವೃದ್ದಿ ನಿಟ್ಟಿನಲ್ಲಿ ಪೊಲೀಸ್ ಅಭಿವೃದ್ದಿ ನಿಗಮ ಸ್ಥಾಪನೆ ಮಾಡಬೇಕು ಎಂದು ಕರ್ನಾಟಕ ಪೊಲೀಸ್ ಮಹಾ ಸಂಘದ ಜಿಲ್ಲಾಧ್ಯಕ್ಷ ಡಾ|ರೈತ ಮನೋಜ್ ಎಸ್. ಆಗ್ರಹಿಸಿದರು.

ಗುರುವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಚಿಕ್ಕಮಗಳೂರು ನಗರದಲ್ಲಿ ಪೊಲೀಸರು ಮತ್ತು ವಕೀಲರ ನಡುವೆ ನಡೆದಿರುವ ಗಲಾಟೆ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಅನ್ಯಾಯವಾಗಿದ್ದು, ಪೊಲೀಸ್ ಸಿಬ್ಬಂದಿಗಳ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ತಪ್ಪಿದ್ದಲ್ಲಿ ಸಂಘದಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ ಅವರು, ಸಂಘವು ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬಗಳ ಶ್ರಯೋಭಿವೃದ್ದಿಗೆ ಶ್ರಮಿಸುತ್ತಿದೆ ಎಂದು ಹೇಳಿದರು.

ವಕೀಲ ಪ್ರೀತಮ್ ಬೈಕ್‌ನಲ್ಲಿ ತೆರಳುವಾಗ ಹೆಲ್ಮೆಟ್ ಧರಿಸಿಲ್ಲವೆಂದು ಪೊಲೀಸರು ಅಡ್ಡಗಟ್ಟಿದ್ದಾರೆ. ಇರಿಂದ ಕುಪಿತನಾದ ಪ್ರೀತಮ್ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಹೆಲ್ಮೆಟ್ ಧರಿಸಿದಿರುವುದಕ್ಕೆ ದಂಡಕಟ್ಟುವಂತೆ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದ ಅವರು, ವಕೀಲರು ಪ್ರತಿಭಟನೆ ನಡೆಸಿ ಅಂದು ರಾತ್ರಿ ಪೊಲೀಸ್ ಠಾಣೆಗೆ ತೆರಳಿ ದೂರಿನ ಪ್ರತಿಯನ್ನು ಹರಿದು ಹಾಕುವ ಮೂಲಕ ಕಾನೂನಿಗೆ ಅಗೌರವ ತೋರಿದ್ದಾರೆ ಎಂದು ದೂರಿದರು.

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಪೊಲೀಸರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಪೊಲೀಸರ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಪೊಲೀಸರು ಪ್ರತಿಭಟನೆ ನಡೆಸಿ ತಮ್ಮಗಾದ ಅನ್ಯಾಯವನ್ನು ಹೊರಹಾಕಿದ್ದು, ಪ್ರತಿಭಟನೆ ನಡೆಸಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವುದಾಗಿ ಗೃಹಮಂತ್ರಿಗಳು ಹೇಳಿಕೆ ನೀಡಿದ್ದು, ಪೊಲೀಸರ ಮೇಲೆ ದೌರ್ಜನ್ಯ ಎಸಗಿದ್ದು, ಅವರ ಮೇಲೆ ಕ್ರಮ ಕೈಗೊಳ್ಳುವವರು ಯಾರು ಎಂದು ಪ್ರಶ್ನಿಸಿದರು.

ವಕೀಲನ ಮೇಲಿನ ಹಲ್ಲೆ ದೂರಿನ ಮೇರೆಗೆ ಅಮಾನತ್ತುಗೊಂಡಿರುವ ಪೊಲೀಸ್ ಸಿಬ್ಬಂದಿಗಳ ಮೇಲಿನ ಅಮಾನತ್ತು ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಸಮಾಜದ ಸ್ವಸ್ತ್ಯ ಕಾಪಾಡುವ ಪೊಲೀಸರಿಗೆ ರಕ್ಷಣೆ ನೀಡಬೇಕು ಹಾಗೂ ಪೊಲೀಸ್ ಸಿಬ್ಬಂದಿಗಳ ಶ್ರಯೋಭಿವೃದ್ದಿ ದೃಷ್ಟಿಯಿಂದ ಪೊಲೀಸ್ ಅಭಿವೃದ್ದಿ ನಿಗಮ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು. ಸುದ್ದಿಗೋಷ್ಟಿಯಲ್ಲಿ ಕರ್ನಾಟಕ ಪೊಲೀಸ್ ಮಹಾ ಸಂಘದ ಉಪಾಧ್ಯಕ್ಷ ಎಚ್.ಜೆ.ನಾಗಭೂಷಣಾಚಾರ್, ಕಾರ್ಯದರ್ಶಿ ಜಿ.ವಿ. ವಿವಸ್ಟನ್, ರಂಜಿತ್, ನಿರಂಜನ್, ಅರ್ಜುನ್, ಮೀನಾಕ್ಷಿ ಇದ್ದರು.

Raitha Manoj District President of Karnataka Police Maha Sangh News Conference

About Author

Leave a Reply

Your email address will not be published. Required fields are marked *

You may have missed