September 19, 2024

ರಾಜ್ಯಸರ್ಕಾರ ವಜಾಗೊಳಿಸಬೇಕು ಎಂದು ಆಗ್ರಹಿಸಿ ಸಂಘ ಪರಿವಾರ ಮನವಿ

0
ರಾಜ್ಯ ಸರ್ಕಾರ ವಜಾಗೊಳಿಸಬೇಕು ಎಂದು ಆಗ್ರಹಿಸಿ ವಿಶ್ವಹಿಂದೂ ಪರಿಷತ್-ಬಜರಂಗದಳ ಸಂಘಟನೆ ಜಿಲ್ಲಾಧಿಕಾರಿಗ ಮನವಿ

ರಾಜ್ಯ ಸರ್ಕಾರ ವಜಾಗೊಳಿಸಬೇಕು ಎಂದು ಆಗ್ರಹಿಸಿ ವಿಶ್ವಹಿಂದೂ ಪರಿಷತ್-ಬಜರಂಗದಳ ಸಂಘಟನೆ ಜಿಲ್ಲಾಧಿಕಾರಿಗ ಮನವಿ

ಚಿಕ್ಕಮಗಳೂರು: ಮುಸ್ಲಿಮರಿಗೆ ೧೦ ಸಾವಿರ ಕೋಟಿ ರೂ. ಅನುದಾನ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆ ಸಂವಿಧಾನ ವಿರೋಧಿಯಾಗಿರುವುದರಿಂದ ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಗೊಳಿಸಬೇಕು ಎಂದು ವಿಶ್ವಹಿಂದೂ ಪರಿಷತ್-ಬಜರಂಗದಳ ಸಂಘಟನೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರನ್ನು ಒತ್ತಾಯಿಸಿದೆ.

ಸಂಘಟನೆ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ, ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಮಾನತಾಡಿರುವ ಮುಖ್ಯಮಂತ್ರಿಗಳು ಮುಂದಿನ ವರ್ಷ ಮುಸ್ಲಿಮರಿಗೆ ಹತ್ತು ಸಾವಿರ ರೂ. ಅನುನಾದ ಕೊಡುತ್ತೇವೆ ಎಂದು ಹೇಳಿದ್ದಾರೆ.

ಮುಸ್ಲಿಮರಿಗೆ ಪ್ರತ್ಯೇಕ ಅನುದಾನ ಕೊಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಆರ್ಟಿಕಲ್-೨೯ ಪ್ರಕಾರ ತನ್ನದೇ ಆದ ವಿಶಿಷ್ಟ ಭಾಷೆ, ಲಿಪಿ ಅಥವಾ ಸಂಸ್ಕೃತಿಯನ್ನು ಹೊಂದಿದ್ದರೆ ಅವುಗಳನ್ನು ರಕ್ಷಿಸುವ ಹಕ್ಕು ಪಡೆದಿದೆ. ಆದರೆ ಮುಸ್ಲಿಂ ಸಮುದಾಯಕ್ಕೆ ವಿಶಿಷ್ಟ ಭಾಷೆ, ಲಿಪಿ, ಸಂಪ್ರದಾಯ ಇಲ್ಲದಿರುವುದರಿಂದ ಅವರಿಗೆ ವಿಶೇಷ ಅನುದಾನ ನೀಡಲು ಸಂವಿಧಾನದಲ್ಲಿ ಅವಕಾಶ ಇರುವುದಿಲ್ಲ ಎಂದಿದ್ದಾರೆ.

ಆರ್ಟಿಕಲ್ ೩೦ ರ ಪ್ರಕಾರವೂ ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರಿಗೆ ಬೇಕಾದ ಶೈಕ್ಷಣಿಕ ಸಂಸ್ಥೆ ಸ್ಥಾಪಿಸಲು, ನಡೆಸಲು ಮಾತ್ರ ಹಕ್ಕು ಕೊಟ್ಟಿದೆ. ಆದ್ದರಿಂದ ಈ ಆರ್ಟಿಕಲ್ ಪ್ರಕಾರವೂ ಮುಸ್ಲಿಮರಿಗೆ ವಿಶೇಷ ಅನುದಾನಕ್ಕೆ ಅವಕಾಶವಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಅಲ್ಪಸಂಖ್ಯಾತರಲ್ಲಿ ೬ ಧರ್ಮೀಯರಿದ್ದು ಅವುಗಳನ್ನು ಸಮನಾಗಿ ನೋಡಬೇಕಾಗಿದೆ. ಮುಸ್ಲಿ ಒಂದು ಸಮುದಾಯಕ್ಕೆ ಮಾತ್ರ ಅಗಾಧ ಪ್ರಮಾಣದಲ್ಲಿ ಅನುದಾನ ನೀಡಿರುವುದು ಮತ್ತು ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ನೀಡಲು ಉದ್ದೇಶಿಸಿರುವುದು ಸಂವಿಧಾನ ಬಾಹಿರವಾಗಿದೆ. ಮಾತ್ರವಲ್ಲದೆ ಇದು ರಾಜ್ಯದಲ್ಲಿ ಸಾಮರಸ್ಯಕ್ಕೆ ಧಕ್ಕೆ ತರುವಂತಹ ಕೆಲಸವಾಗಿದೆ. ಈ ಎಲ್ಲಾ ಕಾರಣಗಳಿಂದಾಗಿ ಸಂವಿಧಾನ ವಿರೋಧವಾಗಿ ರಾಜ್ಯದ ಖಜಾನೆಯನ್ನು ಖರ್ಚು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಸಿದ್ದರಾಮಯ್ಯ ಸರ್ಕಾರವನ್ನು ವಜಾ ಗೊಳಿಸಬೇಕು ಎಂದು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರ ಜೊತೆ ವೇದಿಕೆ ಹಂಚಿಕೊಂಡಿರುವ ತನ್ವೀರ್ ಪೀರಾ ಎಂಬ ಮೌಲ್ವಿಗೆ ಶಂಕಿತ ಭಯೋತ್ಪಾದಕ ಸಂಘಟನೆಗಳ ಜೊತೆ ನಂಟು ಇದೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಆರೋಪಿಸಿದ್ದಾರೆ. ಈ ವಿಚಾರವನ್ನು ಉನ್ನತಮಟ್ಟದ ತನಿಖೆಗೆ ಒಳಪಡಿಸಬೇಕು ಎಂದು ಒತ್ತಯಿಸುತ್ತೇವೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಮೌಲ್ವಿಯು ಸೌದಿ, ಯಮನ್ ಹಾಗೂ ಇತರೆ ದೇಶಗಳ ಪ್ರವಾಸದಲ್ಲಿ ಕೆಲವು ಸಂಘಟನೆಯ ಮುಖಂಡರನ್ನು ಭೇಟಿಯಾಗಿರುವ ಫೋಟೋಗಳನ್ನು ಯತ್ನಾಳ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಎಲ್ಲಾ ಕಾರಣದಿಂದ ಪ್ರಕರಣದ ಬಗ್ಗೆ ಉನ್ನತ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ.
ಈ ವೇಳೆ ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರಂಗನಾಥ್, ಬಜರಂಗದಳದ ಜಿಲ್ಲಾ ಸಂಯೋಜಕ ಸಿ.ಡಿ.ಶಿವಕುಮಾರ್, ಆಟೋ ಶಿವಣ್ಣ, ಶ್ಯಾಂ ವಿ.ಗೌಡ, ಯೋಗೀಶ್ ರಾಜ್ ಅರಸ್ ಇತರರು ಇದ್ದರು.

Sangh Parivar petition demanding that the state government should be sacked

About Author

Leave a Reply

Your email address will not be published. Required fields are marked *

You may have missed