September 19, 2024

ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಸೋಲು-ಗೆಲುವು ಮುಖ್ಯವಲ್ಲ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ

0
ಕಂದಾಯ ಇಲಾಖೆಯ ವಾರ್ಷಿಕ ಕ್ರೀಡಾಕೂಟ

ಕಂದಾಯ ಇಲಾಖೆಯ ವಾರ್ಷಿಕ ಕ್ರೀಡಾಕೂಟ

ಚಿಕ್ಕಮಗಳೂರು: ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಎರಡು ದಿನಗಳ ಕಾಲ ಕೆಲಸದ ಒತ್ತಡಗಳನ್ನು ಮರೆತು ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬೆರೆಯುವ ಕಂದಾಯ ಇಲಾಖೆಯ ನೌಕರರ ಕ್ರೀಡಾಕೂಟ ಇಂದು ನಗರದಲ್ಲಿ ಆರಂಭವಾಯಿತು.

ಪ್ರತಿ ವ?ದಂತೆ ನಡೆಯುವ ಕಂದಾಯ ಇಲಾಖೆಯ ವಾರ್ಷಿಕ ಕ್ರೀಡಾಕೂಟವನ್ನು ನಗರದಲ್ಲಿ ನೇತಾಜಿ ಸುಭಾ? ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಉದ್ಘಾಟಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ವ?ವಿಡೀ ಕಂದಾಯ ಇಲಾಖೆ ನೌಕರರು ಅತ್ಯಂತ ಒತ್ತಡದಲ್ಲಿಯೇ ಕೆಲಸ ಮಾಡಬೇಕು ಯಾವ ನಿಮಿ?ದಲ್ಲಿ ಏನಾಗುತ್ತದೆ, ಎಂಬುದನ್ನು ನಿರೀಕ್ಷಿಸಲಾಗದ ಸಂದರ್ಭಗಳೂ ಇರುತ್ತವೆ. ಈ ರೀತಿ ಸದಾ ಒತ್ತಡದಲ್ಲಿರುವ ನೌಕರರಿಗೆ ಇಂತಹ ಕ್ರೀಡಾಕೂಟಗಳು ಮಾನಸಿಕವಾಗಿ, ದೈಹಿಕವಾಗಿ ವಿಶ್ರಾಂತಿ ಹಾಗೂ ಶಾಂತಿ ದೊರೆಯುತ್ತದೆ ಎಂದು ಹೇಳಿದರು.

ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಸೋಲು-ಗೆಲುವು ಮುಖ್ಯವಲ್ಲ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಅಧಿಕಾರ ನೌಕರರ ಹುದ್ದೆಗಳ ಭೇದವಿಲ್ಲದೆ ಪಾಲ್ಗೊಂಡು ಉತ್ಸಾಹದಿಂದ ಮುಂದಿನ ದಿನಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವ ಮನೋಸ್ಥೈರ್ಯ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.

ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಪ್ರತ್ಯೇಕ ತಂಡಗಳಾಗಿ ಕಬಡ್ಡಿ ವಾಲಿಬಾಲ್, ಕ್ರಿಕೆಟ್ ಸೇರಿದಂತೆ ಚೆಸ್ ಬ್ಯಾಟ್‌ಮಿಂಟನ್ ಪಂದ್ಯಾವಳಿಗಳನ್ನು ಏರ್ಪಡಿಸಿ ಕಂದಾಯ ಇಲಾಖೆ ನೌಕರರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ.

ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕನಕ ರಡ್ಡಿ ನಾರಾಯಣ ರಡ್ಡಿ ಕ್ರೀಡಾಜ್ಯೋತಿ ಸ್ವೀಕರಿಸಿದರು. ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಕೃ?ಮೂರ್ತಿ, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ಹೆಚ್.ಡಿ ರಾಜೇಶ್, ತರೀಕೆರೆ ಉಪ ವಿಭಾಗಾಧಿಕಾರಿ ಡಾ|| ಕಾಂತರಾಜ್ ಮತ್ತು ಜಿಲ್ಲೆಯ ಎಲ್ಲಾ ತಹಸೀಲ್ದಾರ್‌ಗಳು ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರ್ ಹೇಮಂತ್ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Annual sports event of Revenue Department

About Author

Leave a Reply

Your email address will not be published. Required fields are marked *

You may have missed