September 19, 2024

ಪಿ.ಎಂ. ವಿಶ್ವಕರ್ಮ ಯೋಜನೆ ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಬೇಕು

0
ಜಿಲ್ಲಾ ಕೈಗಾರಿಕಾ ಕೇಂದ್ರ ಹೊರತಂದಿರುವ ಪಿ.ಎಂ. ವಿಶ್ವಕರ್ಮ ಯೋಜನೆ ಕರಪತ್ರ ಬಿಡುಗಡೆ

ಜಿಲ್ಲಾ ಕೈಗಾರಿಕಾ ಕೇಂದ್ರ ಹೊರತಂದಿರುವ ಪಿ.ಎಂ. ವಿಶ್ವಕರ್ಮ ಯೋಜನೆ ಕರಪತ್ರ ಬಿಡುಗಡೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕರಕುಶಲ ಕಲೆಯಲ್ಲಿ ತೊಡಗಿರುವ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸಲು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಜಿಲ್ಲಾ ಕೈಗಾರಿಕಾ ಕೇಂದ್ರ ಹೊರತಂದಿರುವ ಪಿ.ಎಂ. ವಿಶ್ವಕರ್ಮ ಯೋಜನೆ ಕರಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಸರ್ಕಾರ ಕುಶಲಕರ್ಮಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವುದರ ಜೊತೆಗೆ ಅವರುಗಳಿಗೆ ಆರ್ಥಿಕ ಸೌಲಭ್ಯಗಳನ್ನು ಕಲ್ಪಿಸಿ ಸ್ವಾವಲಂಬಿ ಜೀವನ ನಡೆಸುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರೊಂದಿಗೆ ಅರ್ಹ ಫಲಾನುಭವಿಗಳು ಯೋಜನೆಯ ಲಾಭ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.
ಯೋಜನೆ ಕುಶಲಕರ್ಮಿಗಳಿಗೆ ಸಹಾಯ ಆಧಾರಿತ ಯೋಜನೆಯಾಗಿದ್ದು ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ಕುಶಲಕರ್ಮಿಗಳಿಗೆ ಸೌಲಭ್ಯ ಕಲ್ಪಿಸುವ ಉದ್ದೇಶ ಹೊಂದಿದೆ. ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ನೋಂದಣಿ ಮತ್ತು ಆಧಾರ್ ಆಧಾರಿತ, ಬಯೋಮೆಟ್ರಿಕ್, ದೃಢೀಕೃತ ಪಿ.ಎಂ. ವಿಶ್ವಕರ್ಮ ಪೋರ್ಟಲ್ ಮೂಲಕ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದ ಅವರು ಸ್ಥಳೀಯ ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ಥಾಪಿಸಲಾಗಿರುವ ಸಾಮಾನ್ಯ ಸೇವಾ ಕೇಂದ್ರದಲ್ಲಿ ತ್ವರಿತವಾಗಿ ಯೋಜನೆಗೆ ನೋಂದಣಿ ಮಾಡಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸಿದ್ದರಾಜು ಮಾತನಾಡಿ ಸ್ಥಳೀಯ ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಸಾಂಪ್ರದಾಯಿಕವಾಗಿ ಕುಶಲಕರ್ಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕುಟುಂಬದ ಸದಸ್ಯರು, ಸರ್ಕಾರಿ ಸೇವೆಯಲ್ಲಿ ಇಲ್ಲದೇ ಇರುವ ಕುಟುಂಬದ ಏಕಮಾತ್ರ ಸದಸ್ಯರು ಯೋಜನೆಗೆ ಶಿಫಾರಸ್ಸು ಮಾಡಬಹುದಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ೨೦೯ ಗ್ರಾಮ ಪಂಚಾಯಿತಿ ಅಧ್ಯಕ್ಷರು ಆನ್ ಬೋರ್ಡಿಂಗ್ ಆಗಿದು, ಇನ್ನೂ ೧೭ ಗ್ರಾಮ ಪಂಚಾಯಿತಿ ಅಧ್ಯಕ್ಷರು ಆಗಬೇಕಾಗಿದೆ. ಬಡಗಿ/ಮರಗೆಲಸ, ದೋಣಿ ತಯಾರಿಸುವವರು, ಶಸ್ತ್ರ ತಯಾರಕರು, ಕಮ್ಮಾರ ವೃತ್ತಿ, ಗಾರೆ ಕೆಲಸ /ಕಲ್ಲು ಕುಟಿಗ, ಬುಟ್ಟಿ, ಚಾಪೆ ಕಸಪೊರಕೆ ತಯಾರಕರು ಸೇರಿದಂತೆ ಇತರರು ಈ ಯೋಜನೆಯಡಿ ಲಾಭ ಪಡೆಯಬಹುದಾಗಿದ್ದು, ಈಗಾಗಲೇ ಜಿಲ್ಲೆಯಲ್ಲಿ ೪೧೫೦ ಜನರು ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಬಿ., ಗ್ರಾಮೀಣ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಉಮೇಶ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ರವಿ ಪ್ರಸಾದ್, ಸಹಾಯಕ ನಿರ್ದೇಶಕ ಚಂದ್ರಶೇಖರ್ ಉಪಸ್ಥಿತರಿದ್ದರು.
P.M. Vishwakarma Yojana brochure released

About Author

Leave a Reply

Your email address will not be published. Required fields are marked *

You may have missed