September 19, 2024

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪೂರ್ಣಗೊಳಿಸಲು ಗುರಿ

0
ಚಿಕ್ಕಮಗಳೂರು ಪ್ರೆಸ್‌ಕ್ಲಬ್ ಆಯೋಜಿಸಿದ್ದ ತಿಂಗಳ ಅತಿಥಿ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಡಿ ತಮ್ಮಯ್ಯ

ಚಿಕ್ಕಮಗಳೂರು ಪ್ರೆಸ್‌ಕ್ಲಬ್ ಆಯೋಜಿಸಿದ್ದ ತಿಂಗಳ ಅತಿಥಿ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಡಿ ತಮ್ಮಯ್ಯ

ಚಿಕ್ಕಮಗಳೂರು: ತಮ್ಮ ಅಧಿಕಾರವಧಿಯಲ್ಲಿ ಶಾಶ್ವತವಾಗಿ ಉಳಿಯುವಂತಹ ಎರಡು ಮಹತ್ವಾಕಾಂಕ್ಷೆಯ ಯೋಜನೆಗಳಾದ ಭದ್ರಾ ಉಪಕಣಿವೆ ಮತ್ತು ನಗರದಲ್ಲಿ ಸೂಪರ್ ಸ್ಪೆ?ಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಗುರಿ ಹೊಂದಿದ್ದು, ಈ ಯೋಜನೆಗಳನ್ನು ಪೂರ್ಣಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಶಾಸಕ ಹೆಚ್.ಡಿ ತಮ್ಮಯ್ಯ ಅವರು ಭರವಸೆ ನೀಡಿದರು.

ಅವರು ನಗರದಲ್ಲಿಂದು ಚಿಕ್ಕಮಗಳೂರು ಪ್ರೆಸ್‌ಕ್ಲಬ್ ಆಯೋಜಿಸಿದ್ದ ತಿಂಗಳ ಅತಿಥಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ  ಭದ್ರಾ ಉಪ ಕಣಿವೆ ಜಾರಿಯಾದರೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಬಯಲುಸೀಮೆ ಭಾಗದ ೨೩ ಕೆರೆಗಳಿಗೆ ನೀರು ತುಂಬಿಸಬಹುದಾಗಿದ್ದು ಇದರಿಂದ ಬರಗಾಲಕ್ಕೆ ತುತ್ತಾಗುವ ಹಳ್ಳಿಗಳಿಗೆ ಶಾಶ್ವತ ಪರಿಹಾರ ಸಿಗಲಿದ್ದು ಮೊದಲ ಹಂತದಲ್ಲಿ ೧೨೮೦ ಕೋಟಿ ರೂ. ಮೊತ್ತದ ಯೋಜನೆಗೆ ಸರ್ಕಾರ ಮಂಜೂರಾತಿ ನೀಡಿ ಅನು?ನಗೊಳಿಸಲಾಗುತ್ತಿದೆ ಈ ಯೋಜನೆಯನ್ನು ಪೂರ್ಣಗೊಳಿಸುವ ಗುರಿ ಹೊಂದಿರುವುದಾಗಿ ತಿಳಿಸಿದರು.

ಅದೇ ರೀತಿ ನಗರದ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ರಮ ನಡೆಯುತ್ತಿದೆ ಜಿಲ್ಲಾಕೇಂದ್ರದಲ್ಲಿ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇದ್ದರೆ ಬಡವರಿಗೆ ಅನುಕೂಲವಾಗುವ ಜೊತೆಗೆ ಮಂಗಳೂರು, ಶಿವಮೊಗ್ಗ ಇತರ ಕಡೆಗೆ ರೋಗಿಗಳನ್ನು ಕಳಿಸುವ ಪರಿಸ್ಥಿತಿ ತಪ್ಪುತ್ತದೆ ಆದ್ದರಿಂದ ಇಲ್ಲಿಯೇ ಒಂದು ಅತ್ಯುತ್ತಮವಾದ ಸೂಪರ್ ಸ್ಪೆ?ಲಿಟಿ ಆಸ್ಪತ್ರೆಯನ್ನು ನಿರ್ಮಿಸಬೇಕೆಂಬ ಕನಸು ಹೊಂದಿದ್ದು, ತಮಗಿರುವ ಅಧಿಕಾರವಧಿಯಲ್ಲಿ ಈ ಯೋಜನೆಗಳನ್ನು ಪೂರ್ಣಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಹೇಳಿದರು.

ಶಾಸಕರಾಗಿ ಆಯ್ಕೆಯಾಗಿ ೬ ತಿಂಗಳು ಪೂರ್ಣಗೊಂಡು ೭ನೇ ತಿಂಗಳಿಗೆ ಕಾಲಿಟ್ಟಿದ್ದು ಈ ಸಮಯದಲ್ಲಿ ಕ್ಷೇತ್ರದ ಸವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದ ಅವರು ಇದೀಗ ನಡೆದ ಬೆಳಗಾವಿ ಅಧಿವೇಶನದಲ್ಲಿ ಚಿಕ್ಕಮಗಳೂರು ತಾಲೂಕನ್ನು ಸಂಪೂರ್ಣವಾಗಿ ಬರಪೀಡಿತ ಪ್ರದೇಶವೆಂದು ಘೋ?ಣೆ ಮಾಡುವಂತೆ ಮಾನವ ಮತ್ತು ವನ್ಯ ಪ್ರಾಣಿ ಸಂಘ? ತಡೆಯುವಂತೆ ಕಾಮೇನಹಳ್ಳಿ, ಕೊಂಬುಗತ್ತಿ ಸುತ್ತಮುತ್ತಲ ರೈತರ ಜಮೀನು ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿರುವುದಾಗಿ ತಿಳಿಸಿದರು.

ರಾಜ್ಯ ಸರ್ಕಾರ ತಂದಿರುವ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಬಾರದೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಅಗತ್ಯ ಇರುವ? ಹಣ ಬಿಡುಗಡೆ ಮಾಡುತ್ತಿದ್ದು, ಹಣದ ಕೊರತೆಯಿಂದ ಕುಂಟುತ್ತಾಸಾಗಿದ್ದ ಜಿಲ್ಲಾಧಿಕಾರಿ ಸಂಕೀರ್ಣ ನಿರ್ಮಾಣ ಕಾಮಗಾರಿಗೆ ೧೦ ಕೋಟಿ ರೂ. ಬಿಡುಗಡೆ ಮಾಡಿಸಿದ್ದು ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ. ಮೆಡಿಕಲ್ ಕಾಲೇಜಿಗೆ ೨೦ ಕೋಟಿ ರೂ. ಬಿಡುಗಡೆ ಮಾಡಿಸಿದ್ದು ಇನ್ನೂ ೨ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಮೆಡಿಕಲ್ ಕಾಲೇಜು ಉದ್ಘಾಟಿಸಲಾಗುವುದೆಂದು ಹೇಳಿದರು.

ಹಿಂದಿನ ಸರ್ಕಾರ ಮಂಜೂರು ಮಾಡಿದ್ದ ಯೋಜನೆಗಳನ್ನು ಅನುದಾನ ಇಲ್ಲದೆ ತಡೆಹಿಡಿಯಲಾಗಿದ್ದು ಯಾವುದೇ ಸರ್ಕಾರ ಯೋಜನೆ ರೂಪಿಸಿದ್ದು ಜನರು ಮತ್ತು ಕ್ಷೇತ್ರದ ಅಭಿವೃದ್ಧಿಯ ಉದ್ದೇಶ ಇರುವುದರಿಂದ ಅವಶ್ಯವಿರುವ ಯೋಜನೆಗಳನ್ನು ಮುಂದುವರಿಸಲಾಗುವುದೆಂದರು.
ಚುನಾವಣೆ ಹೊಸ್ತಿಲಿನಲ್ಲಿ ೨೦೨೩ನೇ ಸಾಲಿನಲ್ಲಿ ಹಿಂದಿನ ಸರ್ಕಾರ ತರಾತುರಿಯಲ್ಲಿ ಕೆಲವು ಯೋಜನೆಗಳನ್ನು ಮಂಜೂರು ಮಾಡಿ ಸುಮಾರು ೨೦ ಕೋಟಿ ರೂ ವೆಚ್ಚದ ಸಮುದಾಯ ಭವನಗಳು ಸೇರಿದಂತೆ ಒಟ್ಟು ೪೦ ಕೋಟಿ ರೂ ಅನುದಾನ ನೀಡುವ ಬಾಕಿ ಇದ್ದು ಅವುಗಳಲ್ಲಿ ಅವಶ್ಯವಿರುವ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲು ಹಣ ಬಿಡುಗಡೆ ಮಾಡಿಸುವುದಾಗಿ ತಿಳಿಸಿದರು.

ಬಸವನಹಳ್ಳಿ ಕೆರೆ ಅಭಿವೃದ್ಧಿ ಸ್ಥಗಿತವಾಗಿರುವ ಬಗ್ಗೆ ಗಮನ ಸೆಳೆದಾಗ ಹಿಂದಿನ ಸರ್ಕಾರದಲ್ಲಿ ೨೭ ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಮಂಜೂರಾತಿ ನೀಡಿದ್ದು ಕೇವಲ ೭ ಕೋಟಿ ರೂ ಬಿಡುಗಡೆಯಾಗಿ ಕಾಮಗಾರಿ ಆರಂಭವಾದ ಹಂತದಲ್ಲಿ ವಿವಾದ ಏರ್ಪಟ್ಟ ಹಿನ್ನೆಲೆಯಲ್ಲಿ ಈ ಕೆರೆ ಅಭಿವೃದ್ಧಿ ಕೆಲಸ ಸ್ಥಗಿತವಾಗಿದೆ. ಈ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಅವ್ಯವಹಾರ ನಡೆದಿರುವ ಆರೋಪ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಿವೃತ್ತ ಕೆ.ಎ.ಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿ ತನಿಖೆ ನಡೆಯುತ್ತಿದೆ ಎಂದರು.

ಸಣ್ಣ ನೀರಾವರಿ ಯೋಜನೆಯ ಕೆರೆ ಅಭಿವೃದ್ಧಿಗೆ ರಾಜ್ಯಸಭಾ ಸದಸ್ಯ ಜಯರಾಂರಮೇಶ್ ಅವರ ನಿಧಿಯಿಂದ ೧.೫೦ ಕೋಟಿ ರೂ. ಬಿಡುಗಡೆಯಾಗಿದ್ದು ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ. ಅದೇ ರೀತಿ ಇಂಧನ ಇಲಾಖೆಯಿಂದ ಮಲ್ಲಂದೂರಿನಲ್ಲಿ ೨೯.೮೬ ಕೋಟಿ ರೂ. ವೆಚ್ಚದಲ್ಲಿ ಹಾಗೂ ಲಕ್ಯಾ ಹೋಬಳಿಯ ಗಾಣದಾಳು ಗ್ರಾಮದಲ್ಲಿ ೧೬.೮೬ ಕೋಟಿ ರೂ ವೆಚ್ಚದಲ್ಲಿ ವಿದ್ಯುತ್ ಉಪಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.

ಜನಸಾಮಾನ್ಯರು ಸಮಸ್ಯೆ ನಿವಾರಣೆಗೆ ಸ್ಪಂದಿಸದೆ ಜಿಲ್ಲಾಡಳಿತ ನಿಷ್ಕ್ರಿಯವಾಗಿದೆ ಎಂದು ಗಮನ ಸೆಳೆದಾಗ ಉತ್ತರಿಸಿದ ಅವರು ತಾವು ಹಾಗೂ ಜಿಲ್ಲ್ಲಾ ಉಸ್ತುವಾರಿ ಸಚಿವರು ಜನ ಸಂಪರ್ಕ ಸಭೆಗಳನ್ನು ನಡೆಸುತ್ತಿದ್ದು ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕ್ರಮ ಕೈಗೊಳ್ಳಲಾಗಿದೆ. ಇನ್ನೂ ಕೂಡ ಜಿಲ್ಲಾಡಳಿತವನ್ನು ಚುರುಕುಗೊಳಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

ಕಾರ್ಯಕ್ರಮವೊಂದರಲ್ಲಿ ಶಿಕ್ಷಕರ ಕ್ಷೇತ್ರಕ್ಕೆ ಎಸ್.ಎಲ್ ಬೋಜೇಗೌಡರನ್ನು ಗೆಲ್ಲಿಸುವಂತೆ ಹೇಳಿಕೆ ನೀಡಿದ್ದ ಬಗ್ಗೆ ಗಮನ ಸೆಳೆದಾಗ ಆ ಸಂದರ್ಭದಲ್ಲಿ ಬೋಜೇಗೌಡರು ಹಾಗೂ ಜೆ.ಡಿ.ಎಸ್ ಬಿಜೆಪಿ ಜೊತೆ ವಿಲೀನವಾಗಿರಲಿಲ್ಲ ಶಿಕ್ಷಕರ ಪರವಾಗಿ ಕೆಲಸ ಮಾಡುವ ಬೋಜೇಗೌಡರಂತಹವರು ಆರಿಸಿ ಬಂದರೆ ಒಳ್ಳೆಯದೆಂದು ಹೇಳಿದ್ದೇನೆಯೇ ಹೊರತು ಬೋಜೇಗೌಡರನ್ನು ಗೆಲ್ಲಿಸಿ ಎಂದು ಹೇಳಿಲ್ಲ ಎಂದು ಸ್ಪಷ್ಠಪಡಿಸಿದರು.

ನಗರದಲ್ಲಿ ಕೆ.ಎಸ್.ಆರ್.ಟಿ.ಸಿ ಗ್ರಾಮಾಂತರ ಹೊಸ ಬಸ್ ನಿಲ್ದಾಣಕ್ಕೆ ೨೦ ಕೋಟಿ ರೂ ಮಂಜೂರಾಗಿದ್ದು ಸ್ಥಳ ಪರಿಶೀಲನೆ ನಡೆಯುತ್ತಿದೆ ನಗರ ಯೋಜನಾ ಇಲಾಖೆಯಿಂದ ಹಣ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ ತಮ್ಮಯ್ಯ ಹಿಂದುಳಿದ ವರ್ಗಗಳ ಇಲಾಖೆಯಿಂದ ಹೆಚ್ಚುವರಿಯಾಗಿ ೨ ಹಾಸ್ಟೆಲ್‌ಗಳನ್ನು ಮಂಜೂರು ಮಾಡಲು ಒತ್ತಾಯಿಸಿದ್ದು, ಸರ್ಕಾರ ಒಪ್ಪಿಗೆ ನೀಡಿದೆ ಎಂದರು. ಅಧ್ಯಕ್ಷತೆಯನ್ನು ಪ್ರಸ್‌ಕ್ಲಬ್ ಅಧ್ಯಕ್ಷ ರಾಜೇಶ್ ವಹಿಸಿದ್ದರು, ಪ್ರಧಾನ ಕಾರ್ಯದರ್ಶಿ ಆರ್. ತಾರಾನಾಥ್ ಸ್ವಾಗತಿಸಿದರು.

MLA HD Tammaiah in the dialogue program

About Author

Leave a Reply

Your email address will not be published. Required fields are marked *

You may have missed