September 19, 2024

ವಿದ್ಯಾರ್ಥಿಗಳ ಮೇಲೆ ಒತ್ತಡ ಹಾಕದೆ ಪ್ರತಿಭೆಗಳನ್ನು ಗುರುತಿಸುವ ಕೆಲಸ ಮಾಡಬೇಕು

0
ಸಂತಜೋಸೆಫ್ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ

ಸಂತಜೋಸೆಫ್ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ

ಚಿಕ್ಕಮಗಳೂರು: ಪ್ರತಿಭಾವಂತ ವಿದ್ಯಾರ್ಥಿಗಳು ಬಹುಮಾನ ಪಡೆಯುವಾಗ ಪ್ರತಿಯೊಬ್ಬ ಪೋಷಕರು ಚಪ್ಪಾಳೆ ತಟ್ಟುವ ಮೂಲಕ ಪ್ರೋತ್ಸಾಹಿಸಬೇಕೆಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು.

ಅವರು ಸಂತಜೋಸೆಫ್ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳ ಪೋಷಕರು ಒಟ್ಟಾಗಿ ಚಪ್ಪಾಳೆ ತಟ್ಟಿದರೆ ಪ್ರತಿಭಾವಂತ ವಿದ್ಯಾರ್ಥಿಗಳು ಸಂತೋಷಪಡುವುದರ ಜೊತೆಗೆ ಇನ್ನಷ್ಟು ಸಾಧನೆ ಮಾಡಲು ಉತ್ಸಾಹ ತುಂಬಿದಂತಾಗುತ್ತದೆ. ಇದು ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ ಎಂದರು.

ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಸಾಧಿಸಿದರೆ ಇನ್ನೂ ಕೆಲವರು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಸಹಕಾರಿಯಾಗಿದೆ. ಶಾಲಾ ವಾರ್ಷಿಕೋತ್ಸವ ವೇದಿಕೆ ಅವರಿಗೆ ಬಹುಮಾನ ಪಡೆದು ಸ್ಪೂರ್ತಿ ನೀಡುವ ಕೇಂದ್ರಗಳಾಗಿವೆ ಎಂದು ತಿಳಿಸಿದರು.

ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವಲ್ಲಿ ಸಂತ ಜೋಸೆಫರ ಶಿಕ್ಷಣ ಸಂಸ್ಥೆಗಳು ನಗರದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಆ ಕಾರಣಕ್ಕೆ ಬಹಾಳ ಬೇಡಿಕೆಯ ಶಾಲೆಯಾಗಿ ಸೀಟು ಸಿಗುವುದೇ ಕಷ್ಟಕರವಾಗಿತ್ತು ಎಂದು ಹೇಳಿದರು.

ವಿದ್ಯೆ ನೀಡುವ ಶಿಕ್ಷಣ ಸಂಸ್ಥೆ, ಆರೋಗ್ಯ ನೀಡುವ ಸಂಸ್ಥೆಗಳು ಕೇವಲ ಹಣ ಗಳಿಕೆ ಉದ್ದೇಶವನ್ನಿಟ್ಟುಕೊಂಡು ನಡೆಸುತ್ತಿರುವ ಈ ಸಂದರ್ಭದಲ್ಲಿ ಕಡಿಮೆ ಶುಲ್ಕ ಪಡೆದು ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಈ ಶಿಕ್ಷಣ ಸಂಸ್ಥೆಯನ್ನು ಶ್ಲಾಘಿಸಿದರು.

೧೯೮೫ ರಲ್ಲಿ ಹಿರೇಮಗಳೂರಿನ ಪ್ರೌಢಶಾಲೆಯಲ್ಲಿ ೧೦ ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ತಾವು ಈ ಶಾಲೆಯಲ್ಲಿ ಪರೀಕ್ಷೆ ಬರೆದಿರುವುದನ್ನು ಸ್ಮರಿಸಿದ ಶಾಸಕರು ಪೋಷಕರು ಮತ್ತು ಉಪನ್ಯಾಸಕರು ವಿದ್ಯಾರ್ಥಿಗಳ ಮೇಲೆ ಒತ್ತಡ ಹಾಕದೆ ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸುವ ಕೆಲಸ ಈ ಇಬ್ಬರಿಂದಲೂ ಆಗಬೇಕು ಎಂದು ಕಿವಿಮಾತು ಹೇಳಿದರು.

ಇಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಶಿಕ್ಷಣ ಪಡೆಯುವ ಮೂಲಕ ಮುಂದೆ ಸಮಾಜದಲ್ಲಿ ಸುಸಂಸ್ಕೃತ ಪ್ರಜೆಯಾಗಬೇಕು ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಹಳೇ ವಿದ್ಯಾರ್ಥಿಗಳಾದ ಬಿ.ಸಿ ಮೋಹನ್‌ರಾವ್, ರಿತನ್ಯ ನಚಿಕೇತ್, ಶಾಲೆಯ ವಿದ್ಯಾಶ್ರೀ, ಫಾದರ್ ರೆವರೆಂಡ್ ಆಂಟೋನಿ ಪಿಂಟೋ, ಮಾರ್ಷಲ್ ಪಿಂಟೋ, ಮೈಕಲ್ ಸದಾನಂದ್, ಬ್ಯಾಕ್ಟೀಸ್, ಪುಟ್ಟಸ್ವಾಮಿ, ನಿರ್ಮಲ ಡಿಸೋಜ ಮತ್ತಿತರರಿದ್ದರು.

Sports event of Natcher International School

About Author

Leave a Reply

Your email address will not be published. Required fields are marked *

You may have missed