September 19, 2024

ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಜಯಂತಿ ಎಲ್ಲಾ ಶಾಲಾ ಕಾಲೇಜುಗಳಲ್ಲೂ ಆಚರಿಸಬೇಕು

0
ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಜಯಂತಿ ಎಲ್ಲಾ ಶಾಲಾ ಕಾಲೇಜುಗಳಲ್ಲೂ ಆಚರಿಸಬೇಕು

ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಜಯಂತಿ ಎಲ್ಲಾ ಶಾಲಾ ಕಾಲೇಜುಗಳಲ್ಲೂ ಆಚರಿಸಬೇಕು

ಚಿಕ್ಕಮಗಳೂರು: ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಅವರ ಜಯಂತಿಯನ್ನು ಎಲ್ಲಾ ಶಾಲಾ ಕಾಲೇಜುಗಳಲ್ಲೂ ಆಚರಿಸಬೇಕು ಎಂದು ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ ಹೇಳಿದರು.

ನಗರದ ಬಿಎಸ್‌ಪಿ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣು ಮಕ್ಕಳು ಅಡುಗೆ ಮನೆಗಷ್ಟೇ ಸೀಮಿತರಾಗಿ ಮನೆಯಿಂದ ಹೊರ ಬಾರದಂತಹ ಅಂದಿನ ಕಾಲದಲ್ಲಿ ಗಂಡನಿಂದಲೇ ಅಕ್ಷರವನ್ನು ಕಲಿತು ದೇಶದ ಮೊಟ್ಟ ಮೊದಲ ಮಹಿಳಾ ಶಿಕ್ಷಕಿಯಾದವರು ಸಾವಿತ್ರಿಬಾಯಿ ಫುಲೆ. ಅಂದಿನ ಬ್ರಿಟಿಷ್ ಸರ್ಕಾರ ಸಹ ಅವರಿಗೆ ಫಸ್ಟ್ ಲೇಡಿ ಟೀಚರ್ ಬಿರುದು ನೀಡಿ ಗೌರವಿಸಿದೆ ಎಂದರು.

ತನ್ನಂತಯೇ ಉಳಿದ ಎಲ್ಲಾ ಹೆಣ್ಣು ಮಕ್ಕಳೂ ಶಿಕ್ಷಣವಂತರಾಗಬೇಕು ಎಂದು ಸ್ವಾತಂ ತ್ರ್ಯ ಪೂರ್ವದಲ್ಲೇ ಮೇಲ್ವರ್ಗದವರ ಅಡೆ-ತಡೆ ಅವರು ನೀಡಿದ ಕಿರುಕುಳ ಕಷ್ಟಗಳ ನ್ನೆಲ್ಲ ಎದುರಿಸಿ ೧೪ ಶಾಲೆಗಳನ್ನು ತೆರೆದವರು ಸಾವಿತ್ರಿಬಾಯಿ ಫುಲೆ ಎಂದು ತಿಳಿಸಿ ದರು.

ಇಂತಹ ವ್ಯಕ್ತಿಯ ಜಯಂತಿಯನ್ನು ಶಾಲಾ ಕಾಲೇಜುಗಳಲ್ಲಿ ಆಚರಿಸದಿರುವುದು ಆ ಮೂಲಕ ಅವರನ್ನು ಸ್ಮರಿಸದಿರುವುದು ವಿಪರ್ಯಾಸ ಎಂದ ಅವರು, ಇದರಿಂದಾಗಿ ಎಷ್ಟೋ ಜನರಿಗೆ ಇಂದಿನ ಮಕ್ಕಳಿಗೆ ಸಾವಿತ್ರಿಬಾಯಿ ಪುಲೆ ಯಾರೆಂಬುದೇ ತಿಳಿದಿಲ್ಲ ಎಂದು ವಿಷಾದಿಸಿದರು.

ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಮಾತನಾಡಿ, ಜ್ಯೋತಿ ಬಾಪುಲೆ ಹಾಗೂ ಸಾವಿತ್ರಿಬಾಯಿ ಫುಲೆ ಅವರು ಅಂದು ಧೈರ್ಯದಿಂದ ಮುನ್ನುಗ್ಗಿ ಶಾಲೆಗಳನ್ನು ತೆರೆಯದಿದ್ದರೆ. ಕೆಳ ವರ್ಗದ ಮಹಿಳೆಯರು ಇಂದಿಗೂ ಶಿಕ್ಷಣದಿಂದ ವಂಚಿತರಾಗಿ ಯೇ ಉಳಿಯುತ್ತಿದ್ದರು ಎಂದರು.

ಸಾವಿತ್ರಿಬಾಯಿ ಪುಲೆ ಜಯಂತಿಯನ್ನು ಎಲ್ಲಾ ಶಾಲಾ ಕಾಲೇಜುಗಳಲ್ಲೂ ಆಚರಿಸುವ ಮೂಲಕ ಅವರನ್ನು ನಾಡಿಗೆ ಪರಿಚಯಿಸುವ ಕೆಲಸ ಮಾಡಬೇಕಿತ್ತು ಎಂದ ಅವರು, ಇನ್ನಾದರೂ ದೇಶದಲ್ಲಿ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ಆಚರಣೆಗೆ ತರಬೇಕು ಎಂದು ಒತ್ತಾಯಿಸಿದರು.

ಪಕ್ಷದ ಲೋಕಸಭಾ ಕ್ಷೇತ್ರದ ಸಂಯೋಜಕ ಕೆ.ಆರ್.ಗಂಗಾಧರ್ ಮಾತನಾಡಿ, ಸಾವಿತ್ರಿ ಬಾಯಿ ಪುಲೆ ಅವರ ಜಯಂತಿಯನ್ನು ಆಚರಣೆಗೆ ತಾರದಿರುವುದು ಈ ದೇಶದ ದುರಂತ ಎಂದರು.

ಸಾವಿತ್ರಿಬಾಯಿ ಪುಲೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಸಾರ್ವಜನಿ ಕರಿಗೆ ಸಿಹಿ ವಿತರಿಸಲಾಯಿತು. ಪಕ್ಷದ ಅಸೆಂಬ್ಲಿ ಅಧ್ಯಕ್ಷ ಸಿದ್ದಯ್ಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷೆ ಕೆ.ಎಸ್. ಮಂಜುಳಾ, ಅಸೆಂಬ್ಲಿ ಪ್ರಧಾನ ಕಾರ್ಯ ದರ್ಶಿ ಆರ್.ವಸಂತ್, ಈರಯ್ಯ, ಪ್ರೇಮ, ಗಿರೀಶ್, ಜಿನ್ನಪ್ಪ, ವೆಂಕಟೇಶ್, ಮಂಜು ನಾಥ್, ಉಪಸ್ಥಿತರಿದ್ದರು.

Teacher Savitribai Pule Jayanti should be celebrated in all schools and colleges

About Author

Leave a Reply

Your email address will not be published. Required fields are marked *

You may have missed