September 19, 2024

ಸರ್ಕಾರದ ಯೋಜನೆಗಳ ಕುರಿತು ವಿಕಲಚೇತನರಿಗೆ ಅರಿವು ಮೂಡಿಸಿ

0
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್.

ಚಿಕ್ಕಮಗಳೂರು:  ವಿಕಲಚೇತನರ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ವಿಕಲಚೇತನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಪ್ರತಿ ಸ್ಥಳೀಯ ಸಂಸ್ಥೆಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹೇಳಿದರು.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಕಲಚೇತನರಿಗಾಗಿ ಜಾರಿಗೆ ತಂದಿರುವ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯೋಜನೆಗಳ ಮಾಹಿತಿ ನೀಡಿದರೆ ಸರ್ಕಾರದ ಸವಲತ್ತುಗಳನ್ನು ವಿಕಲಚೇತನರು ಪಡೆದುಕೊಳ್ಳಲು ಅನುಕೂಲವಾಗುತ್ತದೆ. ಅವರಿಗೆ ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಿ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದ ಅವರು. ವಿಕಲಚೇತನರ ಗುರುತಿನ ಚೀಟಿ (ಯು.ಡಿ.ಐ.ಡಿ) ಯನ್ನು ಕಡ್ಡಾಯವಾಗಿ ನೀಡಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ ಸಭೆಗೆ ಮಾಹಿತಿ ನೀಡಿ ವಿಕಲಚೇತನರಿಗೆ ಗುರುತಿನ ಚೀಟಿ ನೀಡುವ ಸಂಬಂಧ ವಿಕಲಚೇತನರೆಂದು ಗುರುತಿಸಿಕೊಳ್ಳುವವರು ಯು.ಡಿ.ಐ.ಡಿ ವೆಬ್ ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ಹೀಗೆ ನೋಂದಾಯಿತ ಅರ್ಜಿಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ತಪಾಸಣೆಗೊಳಪಟ್ಟು ಅವರು ವಿಕಲಚೇತನರೆಂದು ಕಂಡು ಬಂದರೆ ಜಿಲ್ಲಾಸ್ಪತ್ರೆ ಮೂಲಕ ವಿಶಿಷ್ಠ ಗುರುತಿನ ಚೀಟಿಗಳು ನೇರವಾಗಿ ವಿಕಲಚೇತನರ ಮನೆಗೆ ಅಂಚೆ ಮೂಲಕ ತಲುಪುತ್ತವೆ.

ಜಿಲ್ಲೆಯಲ್ಲಿ ೧೪,೦೦೦ ಕ್ಕೂ ಹೆಚ್ಚು ವಿಕಲಚೇತನರಿಗೆ ಯು.ಡಿ.ಐ.ಡಿ ಗುರುತಿನ ಚೀಟಿ ವಿತರಿಸಲಾಗಿದೆ. ೨೦೨೨-೨೩ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ಅಲಿಮ್ಕೋ ಸಹಯೋಗದಲ್ಲಿ ಜಿಲ್ಲೆಯ ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರೋಟರಿ ಸಂಸ್ಥೆ ಸಹಭಾಗಿತ್ವದಲ್ಲಿ ಕೃತಕ ಕೈ ಕಾಲು ಜೋಡಿಸುವ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದ್ದು ವಿಕಲಚೇತನರ ಪೋಷಕರಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಅಂಗವಿಕಲರ ಪ್ರತಿನಿಧಿ ಸೋಮಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Progress Review Meeting of District Rehabilitation Center for Persons with Disabilities

About Author

Leave a Reply

Your email address will not be published. Required fields are marked *

You may have missed