September 19, 2024

ಮತದಾರರ ಪಟ್ಟಿ ವಿಶೇಷ ಪರಿಷ್ಕರಿಸಿ ಅಂತಿಮ ಮತದಾರರ ಪಟ್ಟಿ ಪ್ರಕಟ

0
ಜಿಲ್ಲಾ ಚುನಾವಣಾಧಿಕಾರಿಗಳಾದ ಮೀನಾ ನಾಗರಾಜ್ ಸಿ.ಎನ್. ಸುದ್ದಿಗೋಷ್ಠಿ

ಜಿಲ್ಲಾ ಚುನಾವಣಾಧಿಕಾರಿಗಳಾದ ಮೀನಾ ನಾಗರಾಜ್ ಸಿ.ಎನ್. ಸುದ್ದಿಗೋಷ್ಠಿ

ಚಿಕ್ಕಮಗಳೂರು: ಜಿಲ್ಲೆಯ ೫ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು ೯,೬೨,೯೯೮ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು.

ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರದರ್ಶಿಸಲಾಗುತ್ತಿದೆ ಎಂದ ಅವರು ಅಂತಿಮ ಮತದಾರರ ಪಟ್ಟಿಯಲ್ಲಿ ೪,೮೯,೫೯೦ ಮಹಿಳಾ ಮತದಾರರು ೪,೭೩,೩೭೭ ಪುರುಷ ಮತದಾರರು ಹಾಗೂ ೩೧ ಇತರೆ ಮತದಾರರು ಸೇರಿ ಒಟ್ಟು ೯,೬೨,೯೯೮ ಮತದಾರರಿದ್ದಾರೆ. ಜಿಲ್ಲೆಯಲ್ಲಿ ಪುರಷರಿಗಿಂತ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿಸಿದರು.

ಮತದಾರರು ತಮ್ಮ ಮತದಾರರ ಮಾಹಿತಿಯನ್ನು ಹೆಸರು, ತಂದೆಯ ಹೆಸರು, ಸಂಬಂಧ, ಲಿಂಗ, ಜನ್ಮ, ದಿನಾಂಕ ಮತ್ತು ಫೋಟೋ ಪರಿಶೀಲಿಸಿಕೊಂಡು ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮುಖ್ಯ ಚುನಾವಣಾಧಿಕಾರಿಯವರ ವೆಬ್ ಸೈಟ್ www.ceokarnataka.kar.nic.in  ನಲ್ಲಿ ಸಹ ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗುವುದು ಎಂದರು.

ಸಾರ್ವಜನಿಕರು, ಮತದಾರರು ಯಾವುದೇ ಕಛೇರಿಗೆ ಹೋಗದೆ ಅವರಿರುವ ಸ್ಥಳದಿಂದಲೇ webportal-voters.eci.gov.in, voter Helpline Mobile App ಹಾಗೂ ೧೯೫೦ voter Helpline  ಮುಖಾಂತರ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಪರಿಶೀಲಿಸಿ ಆಗಿರುವ ತಪ್ಪುಗಳಿಗೆ ಸಂಬಂಧಪಟ್ಟ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

೧೮ ವರ್ಷ ತುಂಬಿದ ಅರ್ಹ ಯುವ ಮತದಾರರ ಸೇರ್ಪಡೆಗೆ ಜಿಲ್ಲಾ ಸ್ವೀಪ್ ಸಮಿತಿಯಿಂದ ಕಾಲೇಜುಗಳಲ್ಲಿ ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಜಾಗೃತಿ ಮೂಡಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಉಪವಿಭಾಗಾಧಿಕಾರಿ ಜಿತೇಂದರ್ ಕುಮಾರ್ ಇದ್ದರು.

Electoral Roll Special Revised Final Electoral List Published

About Author

Leave a Reply

Your email address will not be published. Required fields are marked *

You may have missed