September 19, 2024

ನೈರುತ್ಯ ಪದವೀಧರ ಕ್ಷೇತ್ರಕ್ಕೆ ಮತ್ತೊಮ್ಮೆ ಸ್ಪರ್ಧೆ

0
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಸುದ್ದಿಗೋಷ್ಠಿ

ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಸುದ್ದಿಗೋಷ್ಠಿ

ಚಿಕ್ಕಮಗಳೂರು: ನೈರುತ್ಯ ಪದವೀಧರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿ ತಮ್ಮ ಗಟ್ಟಿ ಧ್ವನಿಯ ಮೂಲಕ ಪದವೀಧರರ ಮತ್ತು ನೌಕರರ ಸಮಸ್ಯೆ ಪರಿಹರಿಸುವಲ್ಲಿ ಬಹುಪಾಲು ಯಶಸ್ವಿಯಾಗಿದ್ದು ಇದೇ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದು ಹಿಂದಿನಂತೆಯೇ ಈ ಭಾರಿಯೂ ಆಶೀರ್ವದಿಸಬೇಕೆಂದು ಕಾಂಗ್ರೆಸ್ ವಕ್ತಾರ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಆಯನೂರು ಮಂಜುನಾಥ್ ಅವರು ಮನವಿ ಮಾಡಿದರು.

ಇಂದು ನಗರಕ್ಕೆ ಆಗಮಿಸಿದ್ದ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನೈರುತ್ಯ ಪದವೀಧರ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸಲು ಬಯಸಿದ್ದು ಈ ಸಂಬಂಧ ಮತಯಾಚನೆಗಾಗಿ ಈ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದರು.

ಮೂಲತಃ ಕಾರ್ಮಿಕ ಕ್ಷೇತ್ರದ ಹೋರಾಟಗಾರರಾಗಿದ್ದ ತಾವು ಲೋಕಸಭೆ, ರಾಜ್ಯಸಭೆ, ವಿಧಾನ ಪರಿಷತ್ ಹಾಗೂ ವಿಧಾನಸಭೆ ಈ ನಾಲ್ಕು ಸದನಗಳಲ್ಲಿ ಮೂವರು ಪ್ರಧಾನ ಮಂತ್ರಿಗಳು, ಹತ್ತಾರು ಮುಖ್ಯ ಮಂತ್ರಿಗಳೊಂದಿಗೆ ಕೆಲಸ ಮಾಡಿ ಅನುಭವಿಯಾಗಿರುವುದರಿಂದ ವಿಧಾನ ಪರಿಷತ್‌ನಲ್ಲಿ ಗಟ್ಟಿ ಧ್ವನಿಯಲ್ಲಿ ಶಕ್ತಿಮೀರಿ ಹೋರಾಟ ಮಾಡಿರುವುದಾಗಿ ಹೇಳಿದರು.

ತಾವು ಆಯ್ಕೆಯಾದ ಪ್ರಾರಂಭದಲ್ಲಿ ನೂತನ ಪಿಂಚಣಿ ಯೋಜನೆ ಹಾಗೂ ಹಳೆಯ ಪಿಂಚಣಿ ಯೋಜನೆ ಬಗ್ಗೆ ಪರ ವಿರೋಧವಿದ್ದು ಹಳೆ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸಬೇಕೆಂಬ ನೌಕರರ ಬೇಡಿಕೆಗೆ ಸದನದಲ್ಲಿ ಪರಿಣಾಮಕಾರಿಯಾಗಿ ಧ್ವನಿ ಎತ್ತುವ ಮೂಲಕ ಹಳೆ ಪಿಂಚಣಿ ಯೋಜನೆ ಜಾರಿಗೆ ತರುವಲ್ಲಿ ಶ್ರಮಿಸಿದ್ದೇನೆಂದು ತಿಳಿಸಿದರು.

೨೦೦೫ ರಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಗೊಂಡು ೨೦೦೬ ರ ನಂತರ ನೇಮಕಾತಿ ಆದೇಶ ಪಡೆದ ೧೧೩೩೬ ಮಂದಿ ನೌಕರರಿಗೆ ಹಾಗೂ ಅನುಧಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರಿಗೆ ಉದ್ಯೋಗ ಭದ್ರತೆಯೊಂದಿಗೆ ಹಳೆ ಪಿಂಚಣಿ ಯೋಜನೆ ಅನ್ವಯವಾಗುವಂತೆ ಹೋರಾಟ ನಡೆಸಿದ್ದೆ ಎಂದು ಹೇಳಿದರು.

ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕಾರ್ಮಿಕ ವಿರೋಧಿ ಕಾಯಿದೆಯನ್ನು ಜಾರಿಗೆ ತಂದಾಗ ವಿಧಾನ ಪರಿಷತ್‌ನಲ್ಲಿ ಮಸೂದೆ ಅನುಮೋದನೆಯಾಗುವುದನ್ನು ತಡೆಹಿಡಿದ ಪ್ರಯತ್ನ ನಡೆಸಿ ಆಡಳಿತ ಪಕ್ಷದ ವಿರುದ್ದ ಆಡಳಿತ ಪಕ್ಷದ ಸದಸ್ಯನಾಗಿ ಹೋರಾಟ ನಡೆಸಿದ ದೇಶದಲ್ಲೇ ಏಕೈಕ ವ್ಯಕ್ತಿ ಎಂದು ತಿಳಿಸಿದರು.

ಪದವೀಧರ ವಿದ್ಯಾರ್ಥಿಗಳು ಪಡೆದ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕೆಂದು ಹೋರಾಟದಲ್ಲಿ ಸಫಲವಾಗಿಲ್ಲ ಮುಂದೆಯೂ ಈ ಹೋರಾಟ ನಡೆಸುತ್ತೇನೆಂದು ಹೇಳಿದ ಅವರು ತಾವು ಗೆದ್ದ ಸಂದರ್ಭದಲ್ಲಿ ಪ್ರಾಮಾಣಿಕವಾಗಿ ಮತ ಕೊಟ್ಟವರ ಋಣ ತೀರಿಸುವ ಕೆಲಸ ಮಾಡಿದ್ದೇನೆ ಎಂದರು.

ಈ ಭಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದು ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವ ವಿಶ್ವಾಸವಿದ್ದು ಬಹುತೇಕ ಖಚಿತವಾಗಿದೆ ಈ ಕ್ಷೇತ್ರದ ಮತದಾರರು ಮತ್ತೊಮ್ಮೆ ಆಶೀರ್ವದಿಸುವ ವಿಶ್ವಾಸವಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ವೈ.ಹೆಚ್ ನಾಗರಾಜ್ ಇದ್ದರು

Legislative Council member Ayanur Manjunath press conference

About Author

Leave a Reply

Your email address will not be published. Required fields are marked *

You may have missed