September 20, 2024

ಬೀದಿನಾಟಕ ಪ್ರದರ್ಶನದ ಮೂಲಕ ಸರ್ಕಾರದ ಸೌಲಭ್ಯ ಪಡೆಯಲು ಜನಜಾಗೃತಿ

0
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ

ಚಿಕ್ಕಮಗಳೂರು: ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರದ ಸೌಲಭ್ಯಗಳು ತಲುಪಬೇಕೆಂಬ ಉದ್ದೇಶದಿಂದ ಬೀದಿ ನಾಟಕ ಪ್ರದರ್ಶನದ ಮೂಲಕ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ನಗರಸಭಾಧ್ಯಕ್ಷ ವರಸಿದ್ದಿ ವೇಣುಗೋಪಾಲ್ ತಿಳಿಸಿದರು.

ಅವರು ಇಂದು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪಿಎಂ ಸ್ವ-ನಿಧಿ, ಸೇ ಸಮೃದ್ಧಿ ಯೋಜನೆಯಡಿ ನವಜೀವನ ಚಾರಿಟಲ್ ಸೇವಾ ಸಂಸ್ಥೆ ಕಡೂರು ಇವರಿಂದ ಬೀದಿಬದಿ ವ್ಯಾಪಾರಿಗಳಿಗೆ ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೇಂದ್ರ ಸರ್ಕಾರದ ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ದೇಶದ ಬಡ ಜನರು ಆರ್ಥಿಕ ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿ ಮಾಡಿದ್ದು, ಈ ಬಗ್ಗೆ ನಗರಸಭೆಯಿಂದ ಜಾಗೃತಿ ಮೂಡಿಸಲು ಬೀದಿ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.

ಬೀದಿಬದಿ ವ್ಯಾಪಾರಿಗಳಿಗಾಗಿ ಹಲವು ಜನಪರ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡಿದ್ದು, ಈ ಸಂಬಂಧ ನಗರಸಭೆ ಜಾಗೃತಿ ಮೂಡಿಸಿ, ಆರ್ಥಿಕ ಸ್ವಾವಲಂಬಿಗಳಾಗಿಸಲು ಕ್ರಮ ವಹಿಸಲಾಗಿದೆ ಎಂದರು.

ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಜೀವನ್ ಜ್ಯೋತಿ ಭೀಮಾ ಯೋಜನೆ, ಒನ್ ನೇಷನ್ ಒನ್ ರೇಷನ್ ಕಾಡ್, ಜನಧನ್ ಯೋಜನೆ, ಶ್ರಮಯೋಗಿ ಮಾನ್‌ಧನ್ ಯೋಜನೆ, ಕಟ್ಟಡ ಹಾಗು ಇತರೆ ನಿರ್ಮಾಣಗಳ ಕಾರ್ಮಿಕರ ನೋಂದಣಿ, ಜನನಿ ಸುರಕ್ಷಾ ಯೋಜನೆ, ಮಾತೃ ವಂದನಾ ಯೋಜನೆ ಈ ಎಂಟು ಯೋಜನೆಗಳ ಮೂಲಕ ಬಡ್ಡಿ ರಹಿತ ಸಾಲವನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಸಮರ್ಪಕವಾಗಿ ಇದನ್ನು ಸಧ್ಬಳಕೆ ಮಾಡಿಕೊಳ್ಳಬೇಕೆಂದು ವಿನಂತಿಸಿದರು.

ನಗರಸಭೆ ಪೌರಾಯುಕ್ತರಾದ ಬಿ.ಸಿ ಬಸವರಾಜ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯುವ ಕುರಿತು ನಗರಸಭೆ ವತಿಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸಿ, ಆರ್ಥಿಕ ಸದೃಢವಾಗುವ ಉದ್ದೇಶದಿಂದ ಈ ಬೀದಿ ನಾಟಕ ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ. ಈ ಮೂಲಕ ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ದೊರೆಯುವಂತಾಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ನವಜೀವನ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ಮತ್ತು ಕಲಾತಂಡ ವತಿಯಿಂದ ನಗರವ್ಯಾಪ್ತಿಯಲ್ಲಿ ಬೀದಿ ಬದಿಯ ವ್ಯಾಪಾರಿಗಳಿಗೆ ಪ್ರಧಾನ ಮಂತ್ರಿಗಳ ಆತ್ಮನಿರ್ಬರ ಯೋಜನೆಯಡಿ ನೀಡುವ ಸಾಲ ಸೌಲಭ್ಯಗಳ ಮತ್ತು ಭದ್ರತಾ ಯೋಜನೆಗಳ ಬಗ್ಗೆ ನಾಟಕ ಪ್ರದರ್ಶನ ಮಾಡಿದರು ಮುಖಂಡ ಹಾಗೂ ನಗರಸಭೆ ಸಿಬಂಧಿ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಸಮುದಾಯ ಸಂಘಟಕರಾದ ಹೆಚ್.ಎಸ್.ಚಂದ್ರಶೇಖರ್ ಸ್ವಾಗತಿಸಿದರು.

Awareness-raising street drama performance launched at KSRTC bus stand

About Author

Leave a Reply

Your email address will not be published. Required fields are marked *