September 19, 2024

Inaugurate Hostel for Minority Post Matric Girls: ಶೈಕ್ಷಣಿಕ ಅಭಿವೃದ್ಧಿಯಿಂದ ಸಮರ್ಥ ನಾಡನ್ನು ಕಟ್ಟಲು ಸಾಧ್ಯ

0

ಚಿಕ್ಕಮಗಳೂರು: ಶೈಕ್ಷಣಿಕ ಅಭಿವೃದ್ಧಿಯಿಂದ ಮಾತ್ರ ಸಮರ್ಥ ನಾಡನ್ನು ಕಟ್ಟಲು ಸಾಧ್ಯ ಎಂದು ಶಾಸಕ ಸಿ.ಟಿ ರವಿ  ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಎ.ಐ.ಟಿ ಕಾಲೇಜು ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದು ಯಾವುದೇ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ವಸತಿ ನಿಲಯ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದ ಅವರು ರೂ. ೨ ಕೋಟಿ ವೆಚ್ಚದಲ್ಲಿ ಈ ವಿದ್ಯಾರ್ಥಿ ನಿಲಯ ನಿರ್ಮಿಸಲಾಗಿದ್ದು, ೧೦೦ ಜನ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲು  ಅವಕಾಶವಿದ್ದು  ಈ ವರ್ಷದಿಂದಲೇ ವಿದ್ಯಾರ್ಥಿ ನಿಲಯ ಪ್ರಾರಂಭಿಸಲು ಕ್ರಮವಹಿಸಲಾಗುವುದು  ಎಂದರು.

ಜಿಲ್ಲೆಗೆ ೩ ವರ್ಷದಲ್ಲಿ ೪ ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸಲು ಕ್ರಮವಹಿಸಲಾಗಿದ್ದು ನಾರಾಯಣ ಗುರುಗಳ ಹೆಸರಿನಲ್ಲಿ ವಿದ್ಯಾರ್ಥಿ ನಿಲಯ ಪ್ರಾರಂಭಕ್ಕೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾಪಿಸಿ ಸಲ್ಲಿಸಲಾಗಿದೆ, ಸಮಾಜ ಕಲ್ಯಾಣ ಇಲಾಖೆ ಸಚಿವರು ಈ ವಿದ್ಯಾರ್ಥಿ ನಿಲಯ ಪ್ರಾರಂಭಿಸಲು ಒಪ್ಪಿದ್ದಾರೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ನಗರಾಭಿವೃದ್ಧಿ ಪ್ರಾಧಿಕಾರದ  ಅಧ್ಯಕ್ಷ ಆನಂದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಜಿ.ಪ್ರಭು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಸೋಮಶೇಖರ್ ಮುಂತಾದವರು ಉಪಸ್ಥಿತರಿದ್ದರು.

Inaugurate Hostel for Minority Post Matric Girls

About Author

Leave a Reply

Your email address will not be published. Required fields are marked *

You may have missed