September 19, 2024

ದಾಖಲೆಗಳಿಲ್ಲದ 13.20 ಲಕ್ಷ ರೂ. ಮೌಲ್ಯದ 220 ಗ್ರಾಂ. ಚಿನ್ನ ವಶ

0
ದಾಖಲೆಗಳಿಲ್ಲದ 13.20 ಲಕ್ಷ ರೂ. ಮೌಲ್ಯದ 220 ಗ್ರಾಂ. ಚಿನ್ನ ವಶ

ದಾಖಲೆಗಳಿಲ್ಲದ 13.20 ಲಕ್ಷ ರೂ. ಮೌಲ್ಯದ 220 ಗ್ರಾಂ. ಚಿನ್ನ ವಶ

ಚಿಕ್ಕಮಗಳೂರು: ತಾಲೂಕಿನ ಮಾಗಡಿ ಚೆಕ್‌ಪೋಸ್ಟ್‌ನಲ್ಲಿ ಸರ್ಕಾರಿ ಬಸ್‌ನಲ್ಲಿ ಸಾಗಿಸುತ್ತಿದ್ದ ದಾಖಲೆಗಳಿಲ್ಲದ ೧೩.೨೦ ಲಕ್ಷ ಮೌಲ್ಯದ ೨೨೦ ಗ್ರಾಂ. ಚಿನ್ನಾಭರಣಗಳನ್ನು ಸೀಜ್ ಮಾಡಿದ್ದರೇ, ಅಜ್ಜಂಪುರ, ಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ೪ ಲಕ್ಷಕ್ಕೂ ಹೆಚ್ಚು ನಗದನ್ನು ಜಪ್ತಿ ಮಾಡಿದ್ದಾರೆ.

ಮಾಗಡಿ ಚೆಕ್‌ಪೋಸ್ಟ್‌ನಲ್ಲಿ ಗುರುವಾರ ಬೆಂಗಳೂರಿನಿಂದ-ಚಿಕ್ಕಮಗಳೂರಿಗೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ೨೨೦ ಗ್ರಾಂ ಚಿನ್ನದ ತಾಳಿ, ನೆಕ್ಲೇಸ್, ಬ್ರಾಸ್ಲೈಟ್, ಬಳೆ, ಸರ, ಉಂಗುರಗಳನ್ನು ಪೊಲೀಸರು ಹಾಗೂ ಚುನಾವಣಾಧಿಕಾರಿಗಳ ತಂಡ ಸೀಜ್ ಮಾಡಿದ್ದಾರೆ.

ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ವ್ಯಕ್ತಿಯೊಬ್ಬರು ಈ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದು, ಆಭರಣಗಳಿಗೆ ಸಂಬಂಧಿಸಿದ ಯಾವುದೇ ದಾಖಲೆ ನೀಡದ ಹಿನ್ನೆಲೆಯಲ್ಲಿ ಆಭರಣಗಳನ್ನು ಸೀಜ್ ಮಾಡಲಾಗಿದೆ.

ಈ ಚಿನ್ನಾಭರಣಗಳ ಒಟ್ಟು ಮೌಲ್ಯ ೧೩.೨೦ ಲಕ್ಷ ಎಂದು ಎಸ್‌ಎಸ್‌ಟಿ ಅಧಿಕಾರಿಗಳ ತಂಡ ಅಂದಾಜಿಸಿದ್ದಾರೆ. ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಭರಣಗಳ ಮೂಲದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಕಸ್ಕೆಬೈಲ್ ಚೆಕ್‌ಪೋಸ್ಟ್‌ನಲ್ಲಿ ವಾಹನದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ೩,೬೨,೭೫೦ ರೂ. ನಗದನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದರೆ, ಗುರುವಾರ ಬೆಳಿಗ್ಗೆ ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ೧ಲಕ್ಷ ರೂ. ನಗದು ಹಾಗೂ ಅಜ್ಜಂಪುರ ತಾಲೂಕಿನ ಗಡಿ ಅಹ್ಮದಾನಗರದ ಚೆಕ್‌ಪೋಸ್ಟ್‌ನಲ್ಲಿ ೧.೩೦ಲಕ್ಷ ರೂ. ನಗದನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

13.20 lakhs of undocumented Rs. 220 grams worth. Gold possession

About Author

Leave a Reply

Your email address will not be published. Required fields are marked *

You may have missed