September 19, 2024

ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬರು ತಪ್ಪದೇ ಮತ ಚಲಾಯಿಸಿ

0
ಮತದಾರರಿಗೆ ಮತದಾನದ ಮಹತ್ವ ಕುರಿತು ಜಾಗೃತಿಗಾಗಿ ರಂಗೋಲಿ ಸ್ಪರ್ಧೆ ಕಾರ್ಯಕ್ರಮ

ಮತದಾರರಿಗೆ ಮತದಾನದ ಮಹತ್ವ ಕುರಿತು ಜಾಗೃತಿಗಾಗಿ ರಂಗೋಲಿ ಸ್ಪರ್ಧೆ ಕಾರ್ಯಕ್ರಮ

ಚಿಕ್ಕಮಗಳೂರು: ಭಾರತ ಸಂವಿಧಾನವು ದೇಶದ ನಾಗರೀಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನವಾಗಿದೆ ಮತ್ತು ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವು ಆಗಿದೆ. ಆದ್ದರಿಂದ ಅರ್ಹ ಪ್ರತಿಯೊಬ್ಬ ಮತದಾರರು ಏ.೨೬ ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಿ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮೀನಾನಾಗರಾಜ್ ಸಿ.ಎನ್. ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಸೋಮವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಮುಂಭಾಗದಲ್ಲಿ ಮತದಾರರಿಗೆ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಏರ್ಪಡಿಸಲಾಗಿದ್ದ ರಂಗೋಲಿ ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳು ಪ್ರಮುಖ ಪಾತ್ರ ನಿರ್ವಹಿಸುತ್ತವೆ. ಸ್ವೀಪ್ ಸಮಿತಿಯಲ್ಲಿ ಪ್ರತಿ ಮತದಾರನಿಗೆ ಮತದಾನದ ಮಹತ್ವ ತಿಳಿಸಿ ಅರಿವು ಮೂಡಿಸಿ ತಪ್ಪದೇ ಮತದಾನ ಮಾಡುವಂತೆ ಮಾಡುವುದು ಮತ್ತು ಪ್ರತಿ ಅರ್ಹ ಮತದಾರರು ಮತದರರ ಪಟ್ಟಿಯಲ್ಲಿ ತಪ್ಪದೇ ತಮ್ಮ ಹೆಸರು ಸೇರ್ಪಡೆ ಆಗಿರುವ ಬಗ್ಗೆ ಖಾತರಿ ಮಾಡಿಕೊಳ್ಳಲು ತಿಳಿಸುವುದಾಗಿದೆ ಎಂದರು.

ನಗರ ಪ್ರದೇಶದಲ್ಲಿ ಮತದಾನ ಜಾಗೃತಿಗೆ ಆದ್ಯತೆ ನೀಡಲಾಗುತ್ತಿದ್ದು, ಹಿಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ಈ ಬಾರಿ ಮತದಾನದ ಪ್ರಮಾಣ ಶೇ. ೯೦ ಕ್ಕಿಂತಲೂ ಹೆಚ್ಚು ಆಗುವಂತೆ ಮಾಡಲು ಕಡಿಮೆ ಮತದಾನದ ಮತಗಟ್ಟೆಗಳು ಹಾಗೂ ಅವುಗಳ ಸುತ್ತಲಿನ ಮತಗಟ್ಟೆಗಳನ್ನು ಕೇಂದ್ರಿಕರಿಸಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಬಿ. ಮಾತನಾಡಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಜನರ ಸಹಭಾಗಿತ್ವದಲ್ಲಿ ಚುನಾವಣೆ, ಮತದಾರರ ಪಟ್ಟಿ, ಮತದಾನ ಜಾಗೃತಿಗೆ ಜಿಲ್ಲಾ ಸ್ವೀಪ್ ಸಮಿತಿ ತೊಡಗಿಸಿಕೊಂಡಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಮುಂಭಾಗದ ರಸ್ತೆಯಲ್ಲಿ ವಿವಿಧ ಸಂಘಗಳ ಮಹಿಳೆಯರು ವಿವಿಧ ಬಣ್ಣಗಳ ಆಕರ್ಷಣೆಯ ರಂಗೋಲಿ ಹಾಕುವ ಮೂಲಕ ಮತದಾನದ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಯಿತು. ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ. ಗೀತಾ, ಜಿ.ಪಂ ನ ಮುಖ್ಯ ಲೆಕ್ಕಾಧಿಕಾರಿ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Everyone should vote in the Lok Sabha General Election without fail

About Author

Leave a Reply

Your email address will not be published. Required fields are marked *

You may have missed