September 19, 2024
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಪತ್ರಿಕಾಗೋಷ್ಠಿ

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಪತ್ರಿಕಾಗೋಷ್ಠಿ

ಚಿಕ್ಕಮಗಳೂರು: ನಗರ-ಗ್ರಾಮ ಎಂಬ ತಾರತಮ್ಯ ಮಾಡದೆ ಇನ್ನೂಂದು ವಾರದಲ್ಲಿ ೭ ಗಂಟೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡದಿದ್ದರೆ ಮೆಸ್ಕಾಂ ಎದುರು ಬೆಂಕಿ ಹಾಕಿ ಅಡುಗೆ ಮಾಡಿ ವಿನೂತನ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರತಿಭಟನೆ ಸಂದರ್ಭದಲ್ಲಿ ಮೆಸ್ಕಾಂ ಅಧಿಕಾರಿ ಸಿಬ್ಬಂದಿ ಫ್ಯಾನ್ ಬಳಸದೆ ಕೆಲಸ ಮಾಡಬೇಕೆಂದು ನಿರ್ಬಂಧ ಹೇರಲಾಗುವುದು ರೈತರನ್ನು ಸರ್ಕಾರ ಕಡೆಗಣಿಸಿದ್ದು ಕೂಡಲೇ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಬೇಕೆಂದು ಆಗ್ರಹಿಸಿದರು.

ಅಗತ್ಯವಾದ ವಿದ್ಯುತ್ ಸರಬರಾಜು ಮಾಡಬೇಕೆಂದು ಒತ್ತಾಯಿಸಿದ ಅವರು ವಿಳಂಬ ಮಾಡಿದರೆ ಮುಂದೆ ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ನಿರಂತರ ಕಪ್ಪು ಭಾವುಟ ಪ್ರದರ್ಶನ ಮಾಡಲಾಗುವುದೆಂದು ಎಚ್ಚರಿಸಿದರು.

ಸಮರ್ಪಕ ವಿದ್ಯುತ್ ಇಲ್ಲದೆ ರೈತರ ಅಡಿಕೆ, ಶುಂಠಿ, ಸೇರಿದಂತೆ ವಿವಿಧ ಬೆಳೆಗಳು ನೆಲಕಚ್ಚಿದ್ದು ರೈತರ ಮನೆಗಳು ಬೆಂದು ಹೋಗುತ್ತಿರುವ ಈ ಸಂದರ್ಭದಲ್ಲಿ ಬೋರ್‌ವೆಲ್ ಲಾರಿ ಮಾಲೀಕರು ಹಗಲು ದರೋಡೆ ಮಾಡುತ್ತಿದ್ದಾರೆ ಈ ಬಗ್ಗೆ ಜಿಲ್ಲಾಡಳಿತ ಮಧ್ಯ ಪ್ರವೇಶ ಮಾಡಿ ನ್ಯಾಯಯುತ ನಿಗಧಿತ ದರ ನಿಗಧಿ ಮಾಡಿ ರೈತರಿಗೆ ಅನುಕೂಲ ಮಾಡಬೇಕೆಂದು ಮನವಿ ಮಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಮಹೇಶ್ ಮತನಾಡಿ ಜಿಲ್ಲೆಯಲ್ಲಿ ವಿದ್ಯುತ್ ಕೊರತೆಯಿದ್ದು ಆದರೆ ಮೆಸ್ಕಾಂ ಇಲಾಖೆಯಿಂದ ನಗರ ಪ್ರದೇಶ ಮತ್ತು ಗ್ರಾಮೀಣ ಭಾಗಕ್ಕೆ ತಾರತಮ್ಯ ಮಾಡುತ್ತಿದ್ದು, ಸರ್ಕಾರ ೭ ಗಂಟೆ ಕಾಲ ರೈತರಿಗೆ ವಿದ್ಯುತ್ ನೀಡಲು ಅನುಮತಿ ನೀಡಿದ್ದರು ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ರೈತರಿಗೆ ಮತ್ತು ಗ್ರಾಮೀಣ ಪ್ರದೇಶಕ್ಕೆ ವಿದ್ಯುತ್ ಖಡಿತಗೂಳಿಸಿ ರೈತರು ಮತ್ತು ಹಳ್ಳಿಯ ಮುಗ್ಧ ಜನರು ಉಸಿರಾಡುವುದೇ ಕಷ್ಟವಾಗಿದೆ ಎಂದು ಆರೋಪಿಸಿದರು.

ದಿನದಲ್ಲಿ ಹಗಲು ೪ ಗಂಟೆ ವಿದ್ಯುತ್ ನೀಡುತ್ತಿದ್ದು, ರಾತ್ರಿ ವೇಳೆ ೩-೪ ಸಾರಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುತ್ತಿದ್ದಾರೆ. ಮಧ್ಯರಾತ್ರಿಯಲ್ಲಿ ವಿದ್ಯುತ್‌ನ್ನು ತೆಗೆದರೆ ಬೆಳಿಗ್ಗೆ ೭ ಗಂಟೆ ವಿದ್ಯುತ್ ನೀಡುತ್ತ ಜನರಿಗೆ ಮೋಸ ಮಾಡುತ್ತಿದ್ದಾರೆ. ಜನರ ಆಕ್ರೋಶ ಮುಗಿಲು ಮುಟ್ಟಿದ್ದು, ರೈತರು ಸರ್ಕಾರದ ವಿರುದ್ದ ಮತ್ತು ಮೆಸ್ಕಾಂ ಇಲಾಖೆಗೆ ಮುತ್ತಿಗೆ ಹಾಕಿ ಇಲಾಖೆಯ ಮುಂದೆ ನಿರಂತರ ಚಳುವಳಿ ನಡೆಸಲು ನಿರ್ಧರಿಸಲಾಗಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ರೈತಸಂಘದ ಖಜಾಂಚಿ ಶಿವಣ್ಣ, ಯುವ ಘಟಕದ ಅಧ್ಯಕ್ಷ ದರ್ಶನ್ ಉಪಸ್ಥಿತರಿದ್ದರು.

Farmers’ union demands to solve the electricity problem

About Author

Leave a Reply

Your email address will not be published. Required fields are marked *

You may have missed