September 19, 2024

ಜಿಲ್ಲಾ ಕೇಂದ್ರದಲ್ಲಿ ತರಬೇತಿ ಕೇಂದ್ರ ಆರಂಭಿಸುವಂತೆ ಬಿಜೆಪಿ ಒತ್ತಾಯ

0
ಬಿಜೆಪಿ ಎಸ್.ಸಿ. ಮೋರ್ಚಾ ಮುಖಂಡರುಗಳು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಮನವಿ

ಬಿಜೆಪಿ ಎಸ್.ಸಿ. ಮೋರ್ಚಾ ಮುಖಂಡರುಗಳು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಮನವಿ

ಚಿಕ್ಕಮಗಳೂರು: ಜಿಲ್ಲಾ ಕೇಂದ್ರದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಫಲಾನು ಭವಿಗಳಿಗೆ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ಮುಖಂಡರುಗಳು ಸೋಮವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್ ಕೇಂದ್ರ ಸರ್ಕಾ ರದ ಮಹತ್ವಾಕಾಂಕ್ಷೆ ವಿಶ್ವಕರ್ಮ ಯೋಜನೆ ಫಲಾನುಭವಿಗಳಿಗೆ ತರಬೇತಿ ಕೇಂದ್ರಗಳು ಇಲ್ಲದಿರುವ ಹಿನ್ನೆಲೆ ಕೂಡಲೇ ಸ್ಥಾಪಿಸಿ ಅನುಕೂಲ ಮಾಡಿಕೊಡಬೇಕು ಎಂದರು.

ವಿಶ್ವಕರ್ಮ ಯೋಜನೆಯಲ್ಲಿ ವಿವಿಧ ಕುಶಲ ಕರ್ಮಿಗಳಡಿಯಲ್ಲಿ ತಾಲ್ಲೂಕು ಮತ್ತು ನಗರ ನೂರಾರು ಫಲಾನುಭವಿಗಳು ಅರ್ಜಿ ಸಲ್ಲಿಸಿರುತ್ತಾರೆ. ಆದರೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಕಡೂರು, ತರೀಕೆರೆ ಅಥವಾ ಅರಸೀಕೆರೆ ತಾಲ್ಲೂಕಿಗೆ ಧಾವಿಸುದಂತೆ ಕರೆ ಬರುತ್ತಿದೆ ಎಂದು ಹೇಳಿದರು.

ಹೀಗಾಗಿ ಜಿಲ್ಲಾ ಕೇಂದ್ರದಲ್ಲಿ ತರಬೇತಿ ಕೇಂದ್ರ ಆರಂಭವಾಗದಿರುವ ಕಾರಣ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ತೀವ್ರ ಸಮಸ್ಯೆಯಾಗಿದೆ. ಹಾಗಾಗಿ ಜಿಲ್ಲಾಡಳಿತ ಶೀಘ್ರವೇ ಎಚ್ಚೆತ್ತುಕೊಂಡು ಜಿಲ್ಲಾ ಕೇಂದ್ರ ದಲ್ಲಿ ಸದ್ಯದಲ್ಲೇ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಈ ವಿಷಯವಾಗಿ ಜಿಲ್ಲಾಡಳಿತ ವಿಳಂಭ ಧೋರಣೆ ಅನುಸರಿಸಿ ಫಲಾನುಭವಿಗಳಿಗೆ ತೊಂದರೆಯುಂ ಟಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಅನಿಯಮಿತವಾಗಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಕಾರ್ಯದರ್ಶಿ ಸೀತಾರಾಮಭರಣ್ಯ, ಜಿಲ್ಲಾ ಉಪಾಧ್ಯಕ್ಷ ಕನಕರಾಜ್, ನಗರ ಮಂಡಲ ಉಪಾಧ್ಯಕ್ಷ ರೇವನಾಥ್, ಮಾಧ್ಯಮ ಸಹ ಪ್ರಮುಖ್ ಕೇಶವ, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಸಹ ವಕ್ತಾರ ಹಂಪಯ್ಯ, ನಗರ ಎಸ್ಸಿ ಮೋರ್ಚಾ ಅಧ್ಯಕ್ಷ ಜಗದೀಶ್, ಮುಖಂಡರಾದ ಶೇಖರ್, ನರಸಿಂಹಮೂರ್ತಿ ಮತ್ತಿತರರು ಹಾಜರಿದ್ದರು.

BJP insists on starting a training center in the district headquarters

About Author

Leave a Reply

Your email address will not be published. Required fields are marked *

You may have missed