September 19, 2024

ಶಿಕ್ಷಕ-ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ

0
ರೋಟರಿ ಸಭಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಏರ್ಪಡಿಸಿದ್ದ ಕಾರ್ಯಕಾರಿ ಸಮಿತಿ ಹಾಗೂ ವಿಧಾನ ಪರಿಷತ್ ಚುನಾವಣಾ ತಯಾರಿ ಸಭೆ

ರೋಟರಿ ಸಭಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಏರ್ಪಡಿಸಿದ್ದ ಕಾರ್ಯಕಾರಿ ಸಮಿತಿ ಹಾಗೂ ವಿಧಾನ ಪರಿಷತ್ ಚುನಾವಣಾ ತಯಾರಿ ಸಭೆ

ಚಿಕ್ಕಮಗಳೂರು:  ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ ಪ್ರಚಾರ ಕೈಗೊಂಡು ಗೆಲುವಿಗೆ ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ನಗರದ ರೋಟರಿ ಸಭಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಏರ್ಪಡಿಸಿದ್ದ ಕಾರ್ಯಕಾರಿ ಸಮಿತಿ ಹಾಗೂ ವಿಧಾನ ಪರಿಷತ್ ಚುನಾವಣಾ ತಯಾರಿ ಸಭೆಯನ್ನುದ್ದೇಶಿಸಿ ಶನಿವಾರ ಮಾತನಾಡಿದ ಅವರು ಶಿಕ್ಷಕರು- ಪಧವೀಧರರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತವೆಂದು ಹೇಳಿದರು.

ಶಿಕ್ಷಕರ ಹಾಗೂ ಪದವಿಧರರ ಕ್ಷೇತ್ರದ ಅಭ್ಯರ್ಥಿಗಳ ಚುನಾವಣೆಯನ್ನು ತಮ್ಮ ಚುನಾವಣೆಯೆಂದು ಪರಿಗಣಿಸಬೇಕು. ಮುಖ್ಯವಾಗಿ ಶಿಕ್ಷಕ-ಪದವಿಧರ ಕ್ಷೇತ್ರದಲ್ಲಿ ಜಯಸಾಧಿಸಿದರೆ ಮುಂದಿನ ಎಂತಹ ಚುನಾ ವಣೆಯಲ್ಲಿ ಸುಲಭವಾಗಿ ಎದುರಿಸುವ ಧೈರ್ಯ ಕಾಂಗ್ರೆಸ್ ಪಕ್ಷಕ್ಕೆ ಬರಲಿದೆ ಎಂದು ತಿಳಿಸಿದರು.

ರಾಜ್ಯದ ಪ್ರತಿಯೊಂದು ಚುನಾವಣೆಯಲ್ಲಿ ಶಿಕ್ಷಕರು ಹಾಗೂ ಪದವಿಧರರು ನಿರಂತರ ಕಾರ್ಯಪ್ರವೃ ತ್ತರಾಗಿ ಶ್ರಮವಹಿಸುವುದು ಸುಲಭದ ಮಾತಲ್ಲ. ಚುನಾವಣಾ ಪೌಂಢೇಷನ್ ಆಗಿ ಕರ್ತವ್ಯ ನಿರ್ವಹಿಸುವ ವರ ಸಮಸ್ಯೆ ಆಲಿಸುವ ಹಾಗೂ ಸವಲತ್ತು ಸಮರ್ಪಕವಾಗಿ ಒದಗಿಸಲು ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚಿಸಬೇಕು ಎಂದರು.

ಜಿಲ್ಲೆಯ ಐದು ಶಾಸಕರು ಈ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಪಂಚಾಯಿತಿ ಮಟ್ಟದಿಂದ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಹಾಗೂ ಆಯನೂರು ಮಂಜುನಾಥ್ ಪರವಾಗಿ ಚುನಾವಣಾ ಅಖಾಡಕ್ಕೆ ಇಳಿದು ಗೆಲುವಿಗೆ ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.

ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮಾತನಾಡಿ ಕಾಂಗ್ರೆಸ್ ಜಿಲ್ಲಾ ಸಮಿತಿಯಲ್ಲಿ ಬ್ಲಾಕ್ ಕಾಂಗ್ರೆಸ್, ಯುವಕಾಂಗ್ರೆಸ್ ಸೇರಿದಂತೆ ಅನೇಕ ಸೆಲ್‌ಗಳನ್ನು ಸ್ಥಾಪಿಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಆಯಾಕ್ಷೇತ್ರಗಳಲ್ಲಿ ಮುಖಂಡರುಗಳು ಅಭ್ಯರ್ಥಿಗಳ ಕರಪತ್ರಗಳನ್ನು ಹಂಚುವ ಮೂಲಕ ಪ್ರಚಾರ ಕೈಗೊಂಡು ಗೆಲುವಿಗೆ ಸಕ್ರೀಯವಾಗಿ ಸಹಕರಿಸಬೇಕು ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ ಪಕ್ಷದ ಅಭ್ಯರ್ಥಿಗಳನ್ನು ಆರಾಮವಾಗಿ ದಡ ಸೇರಿಸು ವ ಜವಾಬ್ದಾರಿ ಮತದಾರರು ಹಾಗೂ ಕಾರ್ಯಕರ್ತರ ಮೇಲಿದೆ. ಆ ನಿಟ್ಟಿನಲ್ಲಿ ವಾರ್ ರೂಂ ರಚನೆಗೊಳಿಸಿ ದ್ದು ಮುಖಂಡರುಗಳು ಕಾಂಗ್ರೆಸ್ ಪಕ್ಷದ ನಿಲುವುಗಳನ್ನು ಶಿಕ್ಷಕರು-ಪದವಿಧರ ಕ್ಷೇತ್ರದ ಮತದಾರರಿಗೆ ಮನ ವರಿಕೆಗೊಳಿಸಲು ಮುಂದಾಗಬೇಕು ಎಂದರು.

ಪದವಿಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಮಾತನಾಡಿ ಚುನಾವಣಾ ಪ್ರಚಾರ ಕೈಗೊಳ್ಳುವ ಸಲುವಾಗಿ ಕೆಲವೇ ದಿನಗಳ ಕಾಲಾವಕಾಶದ ನಡುವೆಯು ಪ್ರತಿಯೊಂದು ಜಿಲ್ಲೆಗಳಿಗೂ ಭೇಟಿ ನೀಡಿ ಸಭೆ ನಡೆಸುವ ಮೂಲಕ ಪ್ರಚಾರ ಕೈಗೊಳ್ಳಲಾಗಿದೆ. ಉಳಿದಂತೆ ಸ್ಥಳೀಯ ಕಾರ್ಯಕರ್ತರು ತಾ ಲ್ಲೂಕು ಮಟ್ಟದಲ್ಲಿ ಗೆಲುವಿಗೆ ಶ್ರಮವಹಿಸಬೇಕು ಎಂದು ತಿಳಿಸಿದರು.

ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ ವಿರೋಧ ಪಕ್ಷದ ಮು ಖಂಡರುಗಳು ಧೈರ್ಯವಾಗಿ ಚುನಾವಣೆ ಎದುರಿಸಲಾಗದೇ ತಮ್ಮದೇ ಹೆಸರಿನಲ್ಲಿ ಇನ್ನೋರ್ವ ಅಭ್ಯರ್ಥಿ ಯನ್ನು ಕಣಕ್ಕಿಳಿಸಿ ಮತ ವಿಭಜಿಸಲು ಯತ್ನಿಸುತ್ತಿರುವುದು ಸರಿಯಲ್ಲ. ಹೀಗಾಗಿ ಮತದಾರರು ಗೊಂದಲಕ್ಕೆ ಒಳಗಾಗದೇ ಸಮಪರ್ಕವಾಗಿ ಮತಯಾಚಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಅಂಶುಮಂತ್, ಶಾಸಕರುಗಳಾದ ಹೆಚ್.ಡಿ.ತಮ್ಮ ಯ್ಯ, ನಯನ ಮೋಟಮ್ಮ, ಆನಂದ್, ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಮುಖಂ ಡರುಗಳಾದ ಡಾ.ಡಿ.ಎಲ್.ವಿಜಯ್‌ಕುಮಾರ್, ಐ.ಬಿ.ಶಂಕರ್, ಹೆಚ್.ಪಿ.ಮಂಜೇಗೌಡ, ಗಾಯತ್ರಿ ಶಾಂತೇ ಗೌಡ, ಹೆಚ್.ಹೆಚ್.ದೇವರಾಜ್, ಬಿ.ಬಿ.ನಿಂಗಯ್ಯ, ಎಂ.ಪಿ.ಕುಮಾರಸ್ವಾಮಿ, ನಯಾಜ್, ಎಂ.ಡಿ.ರಮೇಶ್ ಮತ್ತಿತರರು ಹಾಜರಿದ್ದರು.

The victory of the Congress candidates in the teacher-graduate field is certain

About Author

Leave a Reply

Your email address will not be published. Required fields are marked *

You may have missed