September 19, 2024

ಶಿಕ್ಷಕರು-ಪದವೀಧರರು ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಲು ಮನವಿ

0
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರ ಘಟಕದ ರಾಜ್ಯಾಧ್ಯಕ್ಷ ಡಾ. ಆರ್.ಎಂ ಕುಬೇರಪ್ಪ ಸುದ್ದಿಗೋಷ್ಠಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರ ಘಟಕದ ರಾಜ್ಯಾಧ್ಯಕ್ಷ ಡಾ. ಆರ್.ಎಂ ಕುಬೇರಪ್ಪ ಸುದ್ದಿಗೋಷ್ಠಿ

ಚಿಕ್ಕಮಗಳೂರು: ಕಾಂಗ್ರೆಸ್ ನೇತೃತ್ವದ ಸರ್ಕಾರ ಕಳೆದ ಹತ್ತಾರು ವ?ಗಳಲ್ಲಿ ರಾಜ್ಯದ ಶಿಕ್ಷಕರು ಮತ್ತು ಪದವೀಧರರಿಗೆ ಅನೇಕ ಸೌಲಭ್ಯಗಳನ್ನು ನೀಡಿರುವುದರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಒಂದು ಮತ ನೀಡಿ ಋಣ ತೀರಿಸುವ ಅವಕಾಶ ಬಂದಿರುವುದರಿಂದ ಎಲ್ಲಾ ಫಲಾನುಭವಿ ಶಿಕ್ಷಕರು ಮತ್ತು ಪದವೀಧರರು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರ ಘಟಕದ ರಾಜ್ಯಾಧ್ಯಕ್ಷ ಡಾ. ಆರ್.ಎಂ ಕುಬೇರಪ್ಪ ಮನವಿ ಮಾಡಿದ್ದಾರೆ.

ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆರನೇ ವೇತನ ಆಯೋಗದ ಎಲ್ಲಾ ಶಿಫಾರಸ್ಸುಗಳನ್ನು ಯಥಾವತ್ತಾಗಿ ಆಗಿನ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಜಾರಿಗೊಳಿಸಿದ್ದರಿಂದ, ಕನಿ? ೧೦ ಸಾವಿರದಿಂದ ೨೦ ಸಾವಿರದವರೆಗೆ ಲಾಭವಾಗಿದೆ ಎಂದರು.

ಅವರ ಹಿಂದಿನ ಅವಧಿಯಲ್ಲಿ ಲಕ್ಷಗಟ್ಟಲೇ ಉದ್ಯೋಗಗಳನ್ನು ಸೃಷ್ಟಿಸಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ನೀಡಿದ್ದಾರೆ. ೨೫ ವ?ಗಳಿಂದ ರಾಜ್ಯದ ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿಯಾದ ಹುದ್ದೆಗಳನ್ನು ತುಂಬಲು ಅನುಮತಿ ನೀಡಿದ್ದರಿಂದ ಪಿಎಚ್‌ಡಿ ಪಡೆದು ನಿರುದ್ಯೋಗಿಯಾದ ಸಾವಿರಾರು ಯುವಕರಿಗೆ ಉದ್ಯೋಗದ ಅವಕಾಶಗಳನ್ನು ನೀಡಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ನೀಡಿದ ಪಂಚ ಗ್ಯಾರಂಟಿಗಳಲ್ಲಿ ನಿರುದ್ಯೋಗ ಪದವೀಧರ ಯುವಕ ಯುವತಿಯರಿಗೆ ತಿಂಗಳಿಗೆ ೩೦೦೦ ರೂಪಾಯಿ ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ ೧೫೦೦ ನಗದು ಹಣ ಪ್ರತಿ ತಿಂಗಳು ನೀಡುತ್ತಿದ್ದಾರೆ, ಹಾಗೂ ಇತ್ತೀಚಿಗೆ ಅತಿಥಿ ಉಪನ್ಯಾಸಕರು ಮಾಡಿದ ಹೋರಾಟಕ್ಕೆ ಸ್ಪಂದಿಸಿದ ಸಿದ್ಧರಾಮಯ್ಯನವರ ಸರ್ಕಾರ, ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೆ ಅವರ ವೇತನವನ್ನು ತಿಂಗಳಿಗೆ ಕನಿ? ೩೮ ಸಾವಿರದಿಂದ ೪೨ ಸಾವಿರದವರೆಗೆ ಹೆಚ್ಚಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಅವರಿಗೆ ಆರೋಗ್ಯ ವಿಮೆ, ನಿವೃತ್ತಿ ಹೊಂದುವಾಗ ಪ್ರತಿಯೊಬ್ಬರಿಗೂ ೫ ಲಕ್ಷ ಇಡಿಗಂಟು ಹಣ ನೀಡುವುದಾಗಿ ಆದೇಶ ಮಾಡಲಾಗಿದೆ ಈಗಾಗಲೇ ೭ನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಮಧ್ಯಂತರ ಪರಿಹಾರವನ್ನು ಘೋಷಿಸಿದ್ದು ಅತೀ ಶೀಘ್ರದಲ್ಲೇ ೭ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಲಿದ್ದಾರೆ, ರಾಜ್ಯದ ಎಲ್ಲಾ ಅನುದಾನಿತ ಶಾಲಾ- ಕಾಲೇಜುಗಳಲ್ಲಿ ನಿವೃತ್ತಿ-ನಿಧನದಿಂದ ಖಾಲಿಯಾದ ಶಿಕ್ಷಕರ ಹುದ್ದೆಗಳನ್ನು ೨೦೧೫ ರವರೆಗೆ ತುಂಬಲಾಗಿದೆ ಎಂದು ವಿವರಿಸಿದರು.

೨೦೨೩ರ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಅನುದಾನರಹಿತ ಶಾಲಾ-ಕಾಲೇಜುಗಳನ್ನು ಆದ್ಯತೆ ಮೇರೆಗೆ ಹಂತ-ಹಂತವಾಗಿ ಅನುದಾನಕ್ಕೂಳಪಡಿಸುವ ಭರವಸೆ ನೀಡಿದ್ದಾರೆ. ಹೀಗೆ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಶಿಕ್ಷಕರು ಮತ್ತು ಪದವೀಧರರಿಗೆ ಸಾಲು-ಸಾಲು ಸೌಲಭ್ಯಗಳನ್ನು ನೀಡಿರುವುದರಿಂದ ಮತ್ತು ಈಗಾಗಲೇ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ ಎಂದರು.

ನಾಡಿನ ಬುದ್ಧಿವಂತ ಪದವೀಧರರು ಮತ್ತು ಶಿಕ್ಷಕರು ಅತ್ಯಂತ ಪ್ರಾಮಾಣಿಕವಾಗಿ ಸ್ಪಂದಿಸಿ, ಶಿಕ್ಷಕರ ಮತ್ತು ಪದವೀಧರರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಕೆ.ಕೆ ಮಂಜುನಾಥ್‌ಕುಮಾರ್ ಹಾಗೂ ಆಯನೂರು ಮಂಜುನಾಥ್ ಇವರುಗಳನ್ನು ಅತೀ ಹೆಚ್ಚಿನ ಮತ ನೀಡಿ ಆಯ್ಕೆ ಮಾಡಬೇಕೆಂದು ಡಾ. ಕುಬೇರಪ್ಪ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಹೆಚ್.ಪಿ ಮಂಜೇಗೌಡ, ಎನ್.ಡಿ ಚಂದ್ರಪ್ಪ, ಎಂ.ಸಿ ಶಿವಾನಂದಸ್ವಾಮಿ, ಶಂಕರ್ ಮೇವಾಡಿ ಇದ್ದರು.

Teachers-graduates appeal to support Congress candidate

About Author

Leave a Reply

Your email address will not be published. Required fields are marked *

You may have missed