September 19, 2024

ವಾಲ್ಮೀಕಿ ನಿಗಮದ ಅಕ್ರಮ ವಹಿವಾಟಿನ ತನಿಖೆಗೆ ಒತ್ತಾಯ

0
ವಾಲ್ಮೀಕಿ ನಾಯಕ ಯುವಕರ ಸಂಘದ ವತಿಯಿಂದ ಜಿಲ್ಲಾಡಳಿತದ ಮುಖಾಂತರ ಮುಖ್ಯಮಂತ್ರಿ ಗಳಿಗೆ ಮನವಿ

ವಾಲ್ಮೀಕಿ ನಾಯಕ ಯುವಕರ ಸಂಘದ ವತಿಯಿಂದ ಜಿಲ್ಲಾಡಳಿತದ ಮುಖಾಂತರ ಮುಖ್ಯಮಂತ್ರಿ ಗಳಿಗೆ ಮನವಿ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿರುವ ಅಕ್ರಮ ವಹಿವಾಟಿನ ಹಗರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘದ ವತಿಯಿಂದ ಸೋಮವಾರ ಜಿಲ್ಲಾಡಳಿತದ ಮುಖಾಂತರ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂಬಂಧ ಶಿರಸ್ತೇದಾರ್ ಹೇಮಂತ್‌ಕುಮಾರ್ ಅವರಿಗೆ ಸಂಘದ ಮುಖಂಡರುಗಳು ಮನವಿ ಸಲ್ಲಿಸಿ ಅಭಿವೃದ್ದಿ ನಿಗಮದ ಅಕ್ರಮ ಹಣ ವರ್ಗಾವಣೆಯ ತನಿಖೆ ನಡೆಸಬೇಕು ಹಾಗೂ ನಗರದಲ್ಲಿ ವಾಲ್ಮೀ ಕಿ ಭವನ ನಿವೇಶನದ ಜಾಗ ಒತ್ತುವರಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಬಳಿಕ ಮಾತನಾಡಿದ ಸಂಘದ ಅಧ್ಯಕ್ಷ ಜಗದೀಶ್ ಕೋಟೆ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ದಿ ನಿಗಮದ ಕೇಂದ್ರ ಕಚೇರಿಯಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ನಡೆದು ಅಧೀಕ್ಷಕ ಚಂದ್ರಶೇಖರ್ ಭ್ರಷ್ಟಾ ಚಾರ ಪ್ರಸ್ತಾಪಿಸಿದ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದರು.

ಅಧೀಕ್ಷಕರ ಮರಣಪತ್ರದಲ್ಲಿ ಪ್ರಭಾವಿ ವ್ಯಕ್ತಿಗಳ ಹಲವಾರು ಹೆಸರುಗಳು ಪ್ರಸ್ತಾಪವಾಗಿದ್ದು ಎಷ್ಟರ ಮಟ್ಟಿಗೆ ಭ್ರಷ್ಟಚಾರವಾಗಿದೆ ಎಂಬುದನ್ನು ತನಿಖೆಗೊಳಪಡಿಸಿ ಸತ್ಯವನ್ನು ಬಹಿರಂಗಪಡಿಸಬೇಕು. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

ಭ್ರಷ್ಟಚಾರವು ಕೇವಲ ಒಂದು ಜಿಲ್ಲೆಗೆ ಸೀಮಿತವಾಗಿಲ್ಲ. ಹಲವಾರು ಜಿಲ್ಲೆಗಳಲ್ಲೂ ಅಕ್ರಮವಾಗಿರು ವುದು ಸಂಶಯ ಮೂಡುತ್ತಿದೆ. ಹೀಗಾಗಿ ರಾಜ್ಯದ ಎಲ್ಲಾ ಜಿಲ್ಲಾ ಕಚೇರಿಗಳಲ್ಲಿ ತನಿಖೆ ನಡೆಸಿ ಸಮಾಜಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು.

ನಗರದ ಎಐಟಿ ಸಮೀಪದ ಜಿಲ್ಲಾ ವಾಲ್ಮೀಕಿ ಭವನ ಬಹುತೇಕ ನಿರ್ಮಾಣವಾಗಿದೆ. ೧೦೦೦ ಅಡಿ ಜಾಗದ ನಿವೇಶನವನ್ನು ಕೆಲವರು ಒತ್ತುವರಿ ಮಾಡಿದ್ದು ಈ ಬಗ್ಗೆ ಜಿಲ್ಲಾ ಸಮನ್ವ ಅಧಿಕಾರಿ, ಸಮಗ್ರ ಗಿರಿಜನ ಅಭೀವೃದ್ಧಿ ಇಲಾಖೆ ದೂರು ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೇ ಒತ್ತುವರಿ ಜಾಗವನ್ನು ತೆರವುಗೊಳಿಸಿ ಸಮಾಜಕ್ಕೆ ಅನುಕೂಲ ಕಲ್ಪಿಸಿಕೊಡಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಪ್ರಧಾನ ಕಾರ್ಯದರ್ಶಿ ಮಧು ಕುಮಾರ್, ಸಂಚಾಲಕ ಉಮೇಶ್, ಸಂಘದ ತಾಲ್ಲೂಕು ಅಧ್ಯಕ್ಷ ಪ್ರದೀಪ್, ಗೌರವಾಧ್ಯಕ್ಷ ವಿಜಯ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಯತೀಶ್, ಮುಖಂಡರುಗಳಾದ ಮರ್ಲೆ ಅಣ್ಣಯ್ಯ, ನಿವೃತ್ತ ಶಿಕ್ಷಕ ಮರಿಯಪ್ಪ ಹಾಜರಿದ್ದರು.

Demand for investigation into illegal transactions of Valmiki Corporation

About Author

Leave a Reply

Your email address will not be published. Required fields are marked *

You may have missed