September 20, 2024

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಮಗ್ರ ತನಿಖೆ ನಡೆಸಿ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

0
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಮಗ್ರ ತನಿಖೆ ನಡೆಸಿ ಆಗ್ಬಿರಹಿಸಿ ಬಿಜೆಪಿ ಪ್ರತಿಭಟನೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಮಗ್ರ ತನಿಖೆ ನಡೆಸಿ ಆಗ್ಬಿರಹಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು:  ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ೧೮೭ ಕೋಟಿ ರೂ ಹಗರಣದ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನುಕ್ರಮ ಕೈಗೊಂಡು ನಿಗಮಕ್ಕೆ ಹಣವನ್ನು ವಾಪಸ್ ಹಾಕುವಂತೆ ಆಗ್ರಹಿಸಿ ಇಂದು ಜಿಲ್ಲಾ ಬಿಜೆಪಿ ಎಸ್‌ಟಿ ಮೋರ್ಚಾ ವತಿಯಿಂದ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.

ಇಂದು ಬೆಳಗ್ಗೆ ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋ?ಣೆ ಕೂಗುತ್ತಾ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುತ್ತಾರೆ ಎಂಬ ಖಚಿತ ಮಾಹಿತಿ ಮೇರೆಗೆ ಆಜಾದ್ ಸರ್ಕಲ್‌ನಲ್ಲಿ ತಡೆದು ಪೊಲೀಸರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿಯ ಹಲವು ಮುಖಂಡರನ್ನು ಬಂಧಿಸಿದರು.

ಈ ಸಂದರ್ಭದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್ ದೇವರಾಜ್ ಶೆಟ್ಟಿ ಜನಸಾಮಾನ್ಯರ ಪರವಾಗಿ ಕೆಲಸ ಮಾಡುವುದಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಪ್ರತಿನಿತ್ಯ ಒಂದಲ್ಲಾ ಒಂದು ಹಗರಣದಲ್ಲಿ ತೊಡಗಿದ್ದು, ವಾಲ್ಮೀಕಿ ನಿಗಮದ ೧೮೭ ಕೋಟಿ ರೂ ಎಲ್ಲಿಗೆ ಹೋಗಿದೆ ಎಂಬುದು ಪತ್ತೆ ಆಗಿಲ್ಲ ಎಂದು ಆರೋಪಿಸಿದರು.

ಕೇವಲ ಸಚಿವ ನಾಗೇಂದ್ರ ರಾಜೀನಾಮೆ ಪಡೆದ ತಕ್ಷಣ ಈ ಹಗರಣ ಮುಗಿಯಲಿಲ್ಲ, ಕೂಡಲೇ ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಹಗರಣದಲ್ಲಿ ಭಾಗಿಯಾಗಿರುವ ಕಾಣದ ಕೈಗಳನ್ನು ಬಂಧಿಸಬೇಕು. ಜೊತೆಗೆ ೧೮೭ ಕೋಟಿ ರೂ ಸರ್ಕಾರದ ಖಜಾನೆಗೆ ವಾಪಸ್ ಬರಬೇಕೆಂದು ಒತ್ತಾಯಿಸಿದರು.

ಈ ಭ್ರಷ್ಟಾಚಾರದ ವಿರುದ್ಧ ನಡೆಯುತ್ತಿರುವ ಹೋರಾಟ ನಿರಂತರವಾಗಿರುತ್ತದೆ ಎಂದು ಎಚ್ಚರಿಸಿದ ಅವರು ಪ್ರತಿಭಟನೆಯ ಮೂಲಕ ಜನಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ, ನಂಬಿಕೆ ಇಟ್ಟು ಮತ ನೀಡಿದ ಮತದಾರರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

ನಿಗಮದಲ್ಲಿ ನಡೆದಿರುವ ಈ ಹಗರಣದಿಂದಾಗಿ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಗಿದ್ದು, ಸರ್ಕಾರದ ಹತ್ತಕ್ಷೇಪವಿಲ್ಲದೆ ಇ?ಂದು ದೊಡ್ಡ ಮಟ್ಟದಲ್ಲಿ ಅವ್ಯವಹಾರ ನಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿ, ಚುನಾವಣೆ ನೀತಿಸಂಹಿತೆ ಜಾರಿಯಲ್ಲಿದ್ದ ಅವಧಿಯಲ್ಲಿ ಖಾಸಗಿ ಬ್ಯಾಂಕ್‌ಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಟೀಕಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಾದ್ಯಂತ ಇಂದು ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಇದರ ಭಾಗವಾಗಿ ಇಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಪ್ರತಿಭಟನೆಯ ನೇತೃತ್ವವನ್ನು ಬಿಜೆಪಿ ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ನಂದೀಶ್‌ಮದಕರಿ, ಮಧುಕುಮಾರ್, ಎಚ್.ಎಂ ಶಂಕರ್, ಮಹೇಶ್, ಪ್ರದೀಪ್, ಭರತ್, ಹೆಚ್.ಎಸ್ ಪುಟ್ಟಸ್ವಾಮಿ, ಕೆ.ಪಿ ವೆಂಕಟೇಶ್, ಪು?ರಾಜ್, ರವೀಂದ್ರ ಬೆಳವಾಡಿ, ಮಣಿಕಂಠ, ನೆಟ್ಟೆಕೆರೆಹಳ್ಳಿ ಜಯಣ್ಣ, ಸಂತೋ? ಕೊಟ್ಯಾನ್, ಜಿ.ಶಂಕರ್, ಮಂಜುನಾಥ್, ರಾಜಪ್ಪ, ಓಂಕಾರೇಗೌಡ, ಸೀತಾರಾಮ ಭರಣ್ಯ, ಸಚಿನ್, ಕವಿತಾಶೇಖರ್, ರೂಪ, ಜೆಸೆಂತ ಅನಿಲ್ ಕುಮಾರ್, ಪು? ರಾಜೇಂದ್ರ ಮತ್ತಿತರರು ಭಾಗವಹಿಸಿದ್ದರು

A comprehensive investigation into the Valmiki Development Corporation scam sparked BJP protests

About Author

Leave a Reply

Your email address will not be published. Required fields are marked *