September 19, 2024

ಪ್ರವಾಹ – ಅತಿವೃಷ್ಠಿಯಂತಹ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸನ್ನದರಾಗಿ

0
ಪ್ರವಾಹ ಮತ್ತು ಅತಿವೃಷ್ಠಿ ಕುರಿತು ಕೆಸ್ವಾನ್‌ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆ

ಪ್ರವಾಹ ಮತ್ತು ಅತಿವೃಷ್ಠಿ ಕುರಿತು ಕೆಸ್ವಾನ್‌ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆ

ಚಿಕ್ಕಮಗಳೂರು: ಪ್ರವಾಹ ಮತ್ತು ಅತಿವೃಷ್ಠಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಲು ಸನ್ನದರಾಗಿರಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಇಂದು ಕೆಸ್ವಾನ್‌ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಮುಂಬರುವ ದಿನಗಳಲ್ಲಿ ಪ್ರವಾಹ ಮತ್ತು ಅತಿವೃಷ್ಠಿಯಂತಹ ಪರಿಸ್ಥಿತಿಗಳನ್ನು ಎದುರಿಸಲು ಅಧಿಕಾರಿಗಳು ಸರ್ವರೀತಿಯಿಂದ ಸನ್ನದರಾಗಿರಬೇಕು. ನದಿ, ಹಳ್ಳಗಳು ಹಾಗೂ ತಗ್ಗು ಪ್ರದೇಶಗಳ ವ್ಯಾಪ್ತಿಯಲ್ಲಿರುವ ಗ್ರಾಮಗಳು, ರಸ್ತೆಗಳನ್ನು ಈಗಿನಿಂದಲೆ ಗುರುತಿಸುವಂತೆ ಸೂಚಿಸಿದ ಅವರು ನೋಡಲ್ ಅಧಿಕಾರಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಮುಂದಿನ ದಿನಗಳಲ್ಲಿ ಸನ್ನದರಾಗಿರುವಂತೆ ಸೂಚನೆ ನೀಡಿದರು.

ಗ್ರಾಮ ಪಂಚಾಯಿತಿಗಳ ಹಂತದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್‌ಪೋರ್ಸ್ ತಂಡಗಳನ್ನು ರಚಿಸಬೇಕು. ಈ ತಂಡದಲ್ಲಿ ಅಗ್ನಿಶಾಮಕ ಅಧಿಕಾರಿಗಳು, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಇರಬೇಕು. ತಕ್ಷಣ ಟಾಸ್ಕ್‌ಪೋರ್ಸ್ ಸಭೆ ಕರೆಯಬೇಕು. ಈ ತಂಡಗಳು ಅತೀವೃಷ್ಠಿಯಿಂದ ತೊಂದರೆ ಆಗುವ ವಲ್ನರಬಲ್ ಸ್ಥಳಗಳನ್ನು ಗುರುತಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಪ್ರವಾಹ ಬಂದ ನಂತರ ತಯಾರಿ ಮಾಡುವುದು ಬೇಡ. ಮಳೆ ಮುನ್ಸೂಚನೆ ಮಾಹಿತಿ ಇರುತ್ತದೆ. ಇದರ ಆಧಾರದ ಮೇಲೆ ಪ್ರವಾಹ ಭೀತಿ ಇರುವ ನದಿ ಜಲಾಶಯ ಪಕ್ಕದಲ್ಲಿನ ಜನ ಮತ್ತು ಜಾನುವಾರುಗಳನ್ನು ಮುಂಚಿತವಾಗಿಯೇ ರಕ್ಷಣೆಗೆ ಮುಂದಾಗಬೇಕು. ತಾಲ್ಲೂಕುಗಳಲ್ಲಿ ತಹಸೀಲ್ದಾರರು ಪ್ರವಾಹ ಪರಿಸ್ಥಿತಿ ಎದುರಿಸಲು ಮುಂದಾಳತ್ವ ವಹಿಸಬೇಕು. ಪೊಲೀಸ್, ಅಗ್ನಿಶಾಮಕ ಇಲಾಖೆ ಹೀಗೆ ಎಲ್ಲಾ ಅಧಿಕಾರಿಗಳ ಸಹಾಯಪಡೆದು ಯುದ್ದೋಪಾದಿಯಲ್ಲಿ ಕೆಲಸ ಮಾಡಬೇಕೆಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಭೆ ನಡೆಸಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಪ್ರವಾಹದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಲ್ಲದೆ. ಯಾವುದೇ ಅವಘಡಗಳು ಸಂಭವಿಸದಂತೆ ಕ್ರಮವಹಿಸುವಂತೆ ತಿಳಿಸಿದ ಅವರು. ಜಿಲ್ಲೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಸೂಕ್ಷ್ಮ ಪ್ರದೇಶದಲ್ಲಿ ಸೂಚನಾಫಲಕಗಳನ್ನು ಆಳವಡಿಸಬೇಕು, ದುರಸ್ತಿಯಲ್ಲಿರುವ ಸೇತುವೆಗಳ ದುರಸ್ತಿಗೆ ಸಂಬಂಧಿಸಿದ ಇಲಾಖೆಗಳು ಕ್ರಮವಹಿಸುವಂತೆ ತಿಳಿಸಿದ ಅವರು. ವಿದ್ಯುತ್ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು, ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Meeting held through video conference in Keswan on flood and excess rainfall

About Author

Leave a Reply

Your email address will not be published. Required fields are marked *

You may have missed