September 19, 2024

ಮಲೆನಾಡಿನಲ್ಲಿ ಮೊಬೈಲ್ ಚಾರ್ಜ್‌ಗೆ ಹಣ ನೀಡಬೇಕು

0
ಮಲೆನಾಡಿನಲ್ಲಿ ಮೊಬೈಲ್ ಚಾರ್ಜ್‌ಗೆ ಹಣ ನೀಡಬೇಕು

ಮಲೆನಾಡಿನಲ್ಲಿ ಮೊಬೈಲ್ ಚಾರ್ಜ್‌ಗೆ ಹಣ ನೀಡಬೇಕು

ಚಿಕ್ಕಮಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಕತ್ತಲಲ್ಲಿರುವ ಕಾಫಿನಾಡ ಮಲೆನಾಡು ಭಾಗದಲ್ಲಿ ಮಲೆನಾಡಿಗರು ಹಣ ನೀಡಿ ಮೊಬೈಲ್ ಚಾರ್ಜ್ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ೧೫ ದಿನಗಳಿಂದಲೂ ಕೂಡ ಧಾರಾಕಾರ ಮಳೆ ಹಾಗೂ ಭಾರಿ ಗಾಳಿ ಬೀಸುತ್ತಿದೆ. ೩-೪ ದಿನಗಳಿಂದ ಮಲೆನಾಡು ಭಾಗದಲ್ಲಿ ಒಂದಷ್ಟು ಬಿಡುವು ನೀಡಿದ್ದ ವರುಣದೇವ ಕಳೆದ ರಾತ್ರಿಯಿಂದ ಮತ್ತೆ ಅಬ್ಬರಿಸಿದ್ದಾನೆ.

ಕಳೆದ ಮೂರ್ನಾಲ್ಕು ದಿನಗಳಿಂದ ಮಲೆನಾಡು ಭಾಗದಲ್ಲಿ ಭಾರೀ ಗಾಳಿಗೆ ವಿದ್ಯುತ್ ತಂತಿಯ ಮೇಲೆ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ.

ಹಾಗಾಗಿ, ಮಲೆನಾಡ ಕೆಲ ಗ್ರಾಮಗಳು ಕತ್ತಲಲ್ಲಿ ಬದುಕುವಂತಾಗಿದೆ. ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ೧೭೩ ಹಾಂದಿ ಗ್ರಾಮ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಮೊಬೈಲ್ ಚಾರ್ಜ್ ಇಲ್ಲದ ಕಾರಣ ಜನ ಪರದಾಡುತ್ತಿದ್ದರು.

ಹಾಂದಿ ಸಮೀಪದ ಶಾಮಿಯಾನ ಅಂಗಡಿ ಒಂದರಲ್ಲಿ ಜನರೇಟರ್ ಆನ್ ಮಾಡಿ ಮೊಬೈಲ್ ಚಾರ್ಜ್ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿದು ಸಾರ್ವಜನಿಕರು ಅಂಗಡಿ ಮುಂದೆ ಜಮಾಯಿಸಿದ್ದರು.

ಅದರಲ್ಲಿ ಕಾಲೇಜು ಯುವಕರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಒಂದು ಮೊಬೈಲ್ ಫುಲ್ ಚಾರ್ಜ್ ಮಾಡಲು ೬೦ ರೂ. ಹಾಗೂ ಹಾಲ್ ಚಾರ್ಜ್ ಮಾಡಲು ೪೦ ರೂ. ಪಡೆದುಕೊಳ್ಳುತ್ತಿದ್ದರು ಎಂದು ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ.

Mobile charges should be paid

About Author

Leave a Reply

Your email address will not be published. Required fields are marked *

You may have missed