September 20, 2024

ಅಖಿಲ ಭಾರತ ವೀರಶೈವ ಮಹಾಸಭೆ ವತಿಯಿಂದ ಹಲವು ಸಮಾಜಮುಖಿ ಕಾರ್ಯಕ್ರಮ

0
ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಹೆಚ್.ಎಂ ಲೋಕೇಶ್ ಸುದ್ದಿಗೋಷ್ಠಿ

ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಹೆಚ್.ಎಂ ಲೋಕೇಶ್ ಸುದ್ದಿಗೋಷ್ಠಿ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭೆಯ ರಾಜ್ಯ ಸಮಿತಿಯ ನಿರ್ದೇಶನದಂತೆ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳಿಗೆ ಚುನಾವಣೆ ನಡೆಸಲಾಗಿದ್ದು, ೩೦ ಜನ ಕಾರ್ಯಕಾರಿ ಮಂಡಳಿ ಸದಸ್ಯರ ಪೈಕಿ ೧೦ ಮಹಿಳಾ ಹಾಗೂ ೨೦ ಪುರುಷ ನಿರ್ದೇಶಕರನ್ನು ಅವಿರೋಧ ಆಯ್ಕೆಮಾಡಲಾಗಿದೆ ಎಂದು ಜಿಲ್ಲಾ ಸಮಿತಿಗೆ ಮೂರನೇ ಭಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹೆಚ್.ಎಂ ಲೋಕೇಶ್ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಇಂದು ಈ ವಿಷಯ ತಿಳಿಸಿರುವ ಅವರು, ಜು.೧ ರಿಂದ ೨೧ ರವರೆಗೆ ಚುನಾವಣೆ ಪ್ರಕಿಯೆ ನಡೆದಿದ್ದು, ಮೂಡಿಗೆರೆ, ಕಡೂರು ತಾಲ್ಲೂಕು ಘಟಕಗಳಿಗೆ ಅವಿರೋಧವಾಗಿ ಬಿ.ಎಸ್ ಓಂಕಾರ್ ಅಧ್ಯಕ್ಷರಾಗಿ ಹಾಗೂ ೭ ಮಹಿಳಾ, ೧೩ ಕಾರ್ಯ ನಿರ್ವಾಹಕ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದರು.

ಕಡೂರು ತಾಲ್ಲೂಕು ಅಧ್ಯಕ್ಷರಾಗಿ ಎಸ್.ಪಿ ರೇಣುಕಾರಾಧ್ಯ, ೧೩ ಪುರುಷ ಮತ್ತು ೭ ಮಹಿಳಾ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಆಯ್ಕೆಯಾಗಿದ್ದು, ಚಿಕ್ಕಮಗಳೂರು ತಾಲ್ಲೂಕಿನ ಅಧ್ಯಕ್ಷರಾಗಿ ಕೆ.ಸಿ ನಿಶಾಂತ್, ತರೀಕೆರೆ ತಾಲ್ಲೂಕು ಅಧ್ಯಕ್ಷರಾಗಿ ಎಂ.ಬಿ ಗಿರಿರಾಜ್ ಆಯ್ಕೆಯಾದರು ಎಂದು ತಿಳಿಸಿದರು.

ಜಿಲ್ಲಾ ಘಟಕ ಮತ್ತು ತಾಲ್ಲೂಕು ಘಟಕಗಳ ಸಹಕಾರದೊಂದಿಗೆ ಚಿಕ್ಕಮಗಳೂರು ನಗರದಲ್ಲಿ ಬೃಹತ್ ವೀರಶೈವ ಲಿಂಗಾಯತ ಸಭಾ ಭವನ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಸತಿ ನಿಲಯಗಳನ್ನು ನಿರ್ಮಿಸಲು ಗುರಿ ಹೊಂದಲಾಗಿದೆ ಎಂದರು.

ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿರುವ ಸಮಾಜದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಉತ್ತಮ ಸಾಧನೆ ಗೈದಿರುವ ಸಮಾಜದ ಸಾಧಕರಿಗೆ ಪುರಸ್ಕಾರ ನೀಡಿ ಗೌರವಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಪ್ರತೀ ಮನೆಮನೆಗಳಲ್ಲಿ ಮಹಾ ಸಭಾದ ಸದಸ್ಯತ್ವ ನೋಂದಣಿ ನಡೆಸಲು ಶೀಘ್ರದಲ್ಲೇ ಅಭಿಯಾನ ಆರಂಭಿಸುವುದಾಗಿ ತಿಳಿಸಿದ ಅವರು ಸಂಘಟನೆಯ ಎಲ್ಲಾ ಕಾರ್ಯಕ್ರಮಗಳು ಸಮಾಜದ ಎಲ್ಲಾ ಕುಟುಂಬಗಳಿಗೆ ತಲುಪುವಂತೆ ಕ್ರಮವಹಿಸಲಾಗುವುದೆಂದು ತಿಳಿಸಿದರು.

ಜಗಜ್ಯೋತಿ ಬಸವೇಶ್ವರ, ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಜಿಲ್ಲಾ ಹಾಗೂ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಲಿಂಗಾಯತ ಸಮಾಜದ ಬಂಧುಗಳು ಸ್ವಾವಲಂಬಿಗಳಾಗಿ ಬದುಕಲು ಉತ್ತಮ ಬದುಕನ್ನು ರೂಪಿಸುವುದರ ಜೊತೆಗೆ ಸಂಘಟನೆ, ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕರುಗಳಾದ ಕೆ.ಆರ್ ದೃವಕುಮಾರ್, ಸೋಮಣ್ಣ, ಮೋಹನ್ ರಾಜ್, ಬಿ.ಆರ್ ಜಗದೀಶ್, ರುದ್ರಮುನಿ, ರೇಣುಕಾರಾಧ್ಯ, ಓಂಕಾರಪ್ಪ, ಶಾಲಿನ, ಪೂರ್ಣೇಶ್ ಮತ್ತಿತರರು ಉಪಸ್ಥಿತರಿದ್ದರು.

Many social programs by All India Veerashaiva Mahasabha

About Author

Leave a Reply

Your email address will not be published. Required fields are marked *