September 20, 2024

ಜಿಲ್ಲೆಯ ಅತಿವೃಷ್ಟಿ ಪ್ರದೇಶಗಳಿಗೆ ಬಿಜೆಪಿ ನಿಯೋಗ ಭೇಟಿ

0
ಜಿಲ್ಲೆಯ ಅತಿವೃಷ್ಟಿ ಪ್ರದೇಶಗಳಿಗೆ ಬಿಜೆಪಿ ನಿಯೋಗ ಭೇಟಿ

ಜಿಲ್ಲೆಯ ಅತಿವೃಷ್ಟಿ ಪ್ರದೇಶಗಳಿಗೆ ಬಿಜೆಪಿ ನಿಯೋಗ ಭೇಟಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಹಾಗೂ ಮನೆ ಕಳೆದುಕೊಂಡವರ ಭೇಟಿ ಮಾಡಿದ ಬಿಜೆಪಿ ಮುಖಂಡ ಹಾಗೂ ಶಾಸಕ ಅಶ್ವತ್ ನಾರಾಯಣ್ ನೇತೃತ್ವದ ನಿಯೋಗ ಹಾನಿಯ ಪರಿಶೀಲನೆ ನಡೆಸಿತು.

ಮೂಡಿಗೆರೆ ಚಿಕ್ಕಮಗಳೂರು ಭಾಗದಲ್ಲಿ ನೆರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಿಯೋಗ ಅಲ್ಲಿನ ಪರಿಸ್ಥಿತಿಯ ಅವಲೋಕನ ನಡೆಸಿತು ಜೊತೆಗೆ ಭಾರಿ ಮಳೆಯಿಂದ ಮನೆ ಕಳೆದುಕೊಂಡು ಸಂತ್ರಸ್ತರಾದವರಿಗೆ ಧೈರ್ಯ ತುಂಬುವ ಕೆಲಸ ಮಾಡಲಾಯಿತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಮುಖಂಡ ಅಶ್ವತ್ ನಾರಾಯಣ, ವಿಪರೀತ ಮಳೆಯಿಂದಾಗಿ ಬೆಳೆ ನಾಶವಾಗಿದೆ. ಜೊತೆಗೆ ಇಳುವರಿಯೂ ಕುಂಠಿತವಾಗಿದೆ. ರೈತರು ಹಾಗೂ ಕಾಫಿ ಬೆಳೆಗಾರರಿಗೆ ದೊಡ್ಡ ಮಟ್ಟದಲ್ಲಿ ನಷ್ಟ ಉಂಟಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಭಾರಿ ಮಳೆ ಬಂದಾಗ ಕಾಫಿ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 56 ಸಾವಿರ ರೂಪಾಯಿ ಪರಿಹಾರ ನೀಡಿದೆವು. ಈ ಬಾರಿ ರಾಜ್ಯ ಸರ್ಕಾರ ಪ್ರತಿ ಹೆಕ್ಟರ್ ಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಭಾರಿ ಮಳೆಯಿಂದ ಮನೆ ಕಳೆದುಕೊಂಡವರಿಗೆ ಕೂಡಲೇ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಮನಗಳಿಗೆ ಅಲ್ಪಸ್ವಲ್ಪ ಹಾನಿಯಾದವರಿಗೆ ಕೂಡಲೇ ಹತ್ತು ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಕಾಫಿ ಬೆಳಗಾರರಿಗೆ ತಮ್ಮ ಜಮೀನಲ್ಲಿ ಯಾವ ಯಾವ ಬೆಳೆಗಳಿವೆ ಎನ್ನುವುದನ್ನು ಪಹಣಿಯಲ್ಲಿ ನಮೂದಿಸಲು ಸಾಧ್ಯವಾಗಿಲ್ಲ. ಹೀಗಾಗಿ ಅವರು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಹೀಗಾಗಿ ತವರಿಗೆ ಬೆಳಗಿನ ಪರಿಹಾರವೂ ಬರದ ಸ್ಥಿತಿ ಇದೆ ಎಂದು ಹೇಳಿದರು.

2019ರಲ್ಲಿಯೂ ಭಾರಿ ಮಳೆಯಾಗಿತ್ತು. ಚಿಕ್ಕಮಗಳೂರಿನಲ್ಲಿ 400 ವಿದ್ಯುತ್ ಕಂಬಗಳು ಬಿದ್ದು ಹೋಗಿದ್ದವು. ಆದರೆ ಅಂದು ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಕೇವಲ ಐದೇ ದಿನದಲ್ಲಿ ವಿದ್ಯುತ್ ಲೈನ್ ಸರಿಪಡಿಸಿ ವಿದ್ಯುತ್ ನೀಡಿತ್ತು. ಆದರೆ ಇಂದಿನ ರಾಜ್ಯ ಸರ್ಕಾರಕ್ಕೆ 20 ದಿನ ಕಳೆದರೂ ಸರಿಯಾಗಿ ವಿದ್ಯುತ್ ನೀಡಲು ಸಾಧ್ಯವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಲೆನಾಡು ಭಾಗದಲ್ಲಿ ಲೈನ್ ಮ್ಯಾನ್ ಗಳೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮುರಿದು ಬಿದ್ದ ವಿದ್ಯುತ್ ಕಂಬಗಳನ್ನು ಬದಲಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಮಲೆನಾಡಿನ ಹಳ್ಳಿಗಳು ಕತ್ತಲೆಗೆ ಜಾರಿವೆ ಎಂದು ದೂರಿದರು.

ರಾಜ್ಯ ಸರ್ಕಾರ ಗ್ಯಾರಂಟಿ ಹೆಸರನ್ನು ಹೇಳಿಕೊಂಡು ಓಡಾಡುತ್ತಿದೆ. ರಾಜ್ಯ ಸರ್ಕಾರ ಬದುಕಿದೆಯೇ ಎನ್ನುವುದು ಅನುಮಾನವಾಗಿದೆ. ರಾಜ್ಯದಲ್ಲಿ ನೆರೆ ಪರಿಸ್ಥಿತಿ ಇದ್ದರೂ ಪರಿಹಾರ ಕ್ರಮಗಳನ್ನು ಸಮಾರೋಪಾದಿಯಲ್ಲಿ ಕೈಗೊಂಡಿಲ್ಲ ಎಂದು ದೂರಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ, ಪ್ರಮುಖರಾದ ದೀಪಕ್ ದೊಡ್ಡಯ್ಯ, ಕುರುವಂಗಿ ವೆಂಕಟೇಶ್, ತಹಸೀಲ್ದಾರ್ ಸುಮಂತ್ ಮತ್ತಿತರರು ಉಪಸ್ಥಿತರಿದ್ದರು.

BJP delegation visits the heavy rainfall areas of the district

About Author

Leave a Reply

Your email address will not be published. Required fields are marked *