September 20, 2024

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಿಇಓಗೆ ಮನವಿ

0
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಿಇಓಗೆ ಮನವಿ

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಿಇಓಗೆ ಮನವಿ

ಚಿಕ್ಕಮಗಳೂರು: ೨೦೧೭ ರಲ್ಲಿ ನೇಮಕವಾದ ಶಿಕ್ಷಕರನ್ನು ೧ ರಿಂದ ೭ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಬೇಕು. ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಟತೆಯೊಂದಿಗೆ ಪದವೀಧರ ಶಿಕ್ಷಕ ರೆಂದು ಪದನಾಮೀಕರಿಸಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಜಿ.ಪಂ. ಸಿಇಓ ಹೆಚ್.ಎಸ್.ಕೀರ್ತನಾ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಪರಮೇಶ್ವರಪ್ಪ ೨೦೧೭ರ ವೃಂದ ಮತ್ತು ನೇಮಕಾತಿ ನಿಯಮಗಳು ೨೦೧೬ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯ ವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿದ್ದು ೧ ರಿಂದ ೮ಕೆ ನೇಮಕ ಹೊಂದಿದವರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ ೧-೫ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು ಎಂದರು.

ಅರ್ಹ ವಿದ್ಯಾರ್ಹತೆ ಪೂರೈಸಿದ ೨೦೧೬ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲಾ ೧ ರಿಂದ ೮ನೇ ತರಗತಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಸಂಖ್ಯೆ ಮುಗಿಯುವವರೆಗೂ ಈ ಮೊದಲಿನಂತೆ ಅರ್ಹತೆಯ ಆಧಾ ರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರು ಗಳ ಹುದ್ದೆಗೆ ಸೇವಾ ಜೇಷ್ಟತೆಯ ಆಧಾರದ ಮೇಲೆ ಬಡ್ತಿ ನೀಡಬೇಕು. ಅರ್ಹ ವಿದ್ಯಾರ್ಹತೆ ಹೊಂದಿದ ೨೦೧೬ಕ್ಕಿಂತ ಪೂರ್ವದಲ್ಲಿ ನೇಮಕಾತಿಯಾಗಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಸೇವಾ ಜೇಷ್ಟತೆಯ ರಕ್ಷಣೆಯೊಂದಿಗೆ ಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.

ಈ ಪ್ರಮುಖ ಅಂಶಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ೨೦೧೭ರಲ್ಲಿ ರೂಪಿತಗೊಂಡಿರುವ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು ೨೦೧೬ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು. ಸರ್ವರಿಗೂ ಈ ಹಿಂದಿನಂತೆ ಪ್ರೌಢಶಾಲೆಗಳಿಗೆ ವಿದ್ಯಾರ್ಹತೆಯ ಆಧಾರ ದ ಮೇಲೆ ಬಡ್ತಿ ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಬೈರೇಗೌಡ, ಸಹ ಕಾರ್ಯದರ್ಶಿಗಳಾದ ಚಿತ್ರ, ಗಣೇಶ್, ಸಂಘಟನಾ ಕಾರ್ಯದರ್ಶಿ ಗೀತಾ, ವನಜಾಕ್ಷಿ, ಕೋಶಾಧ್ಯಕ್ಷ ಶ್ರೀನಿವಾಸ್, ತಾಲ್ಲೂಕು ಅಧ್ಯಕ್ಷ ಕಿರಣ್, ಕಾರ್ಯದರ್ಶಿ ಅಜ್ಜಯ್ಯ, ಶೃಂಗೇರಿ ಅಧ್ಯಕ್ಷ ಓಂಕಾರಸ್ವಾಮಿ, ತರೀಕೆರೆ ಅಧ್ಯಕ್ಷ ರವಿ, ಕಾರ್ಯದರ್ಶಿ ಆನಂದ್ ಮತ್ತಿತರರು ಹಾಜರಿದ್ದರು.

Appeal to CEO from District Primary School Teachers Association

About Author

Leave a Reply

Your email address will not be published. Required fields are marked *