September 20, 2024

ವಿಧಾನಪರಿಷತ್ ಪ್ರತಿ ಪಕ್ಷ ನಾಯಕರಿಗೆ ಸರಕಾರಿ ಸವಲತ್ತು ನೀಡಿಲ್ಲ ಎಂದು ಆರೋಪಿಸಿ ಪ್ರತಿಭಟನೆ

0
ವಿಧಾನಪರಿಷತ್ ಪ್ರತಿ ಪಕ್ಷ ನಾಯಕರಿಗೆ ಸರಕಾರಿ ಸವಲತ್ತು ನೀಡಿಲ್ಲ ಎಂದು ಆರೋಪಿಸಿ ಪ್ರತಿಭಟನೆ

????????????????????????????????????

ಚಿಕ್ಕಮಗಳೂರು: ವಿಧಾನಪರಿಷತ್ ಪ್ರತಿ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸರಕಾರಿ ಸವಲತ್ತು ನೀಡಿಲ್ಲ ಎಂದು ಆರೋಪಿಸಿ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು.

ನಗರದ ಆಜಾದ್ ಪಾರ್ಕಿನಲ್ಲಿ ಸಮಾವೇಶಗೊಂಡ ಹಲವಾರು ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಕೂಡಲೇ ನಾರಾಯಣಸ್ವಾಮಿ ಅವರಿಗೆ ಎಲ್ಲ ಸರಕಾರಿ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ.ವೆಂಕಟೇಶ್ ಮಾತನಾಡಿ, ವಿಧಾನಪರಿಷತ್ ನಾಯಕನಾಗಿ ಆಯ್ಕೆಯಾಗಿ ೩ ವಾರ ಕಳೆದಿದ್ದರೂ ಈವರೆಗೆ ರಾಜ್ಯ ಸರಕಾರ ಅವರಿಗೆ ಯಾವುದೇ ಸರಕಾರಿ ಸೌಲಭ್ಯ ನೀಡಿಲ್ಲ. ದಲಿತರೆಂಬ ಕಾರಣಕ್ಕೆ ನಾರಾಯಣಸ್ವಾಮಿ ಅವರಿಗೆ ಸೌಲಭ್ಯ ನೀಡಲು ರಾಜ್ಯ ಸರಕಾರ ಮೀನಾಮೇಷ ಎಣಿಸುತ್ತಿರುವುದು ಸರಕಾರದ ದಲಿತ ವಿರೋಧಿ ನೀತಿಯನ್ನು ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದರು.

ವಿರೋಧ ಪಕ್ಷದ ಮುಖಂಡರಿಗೆ ನೀಡಬೇಕಾದ ಸಾಂವಿಧಾನಿಕ ಸ್ಥಾನಮಾನ ಮತ್ತು ಎಲ್ಲ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿ ಶಾಸಕಾಂಗದ ಮುಖ್ಯಸ್ಥರಾದ ರಾಜ್ಯಪಾಲರಿಗೆ ಮನವಿ ನೀಡುತ್ತಿದ್ದೇವೆ. ಅವರು ಮಧ್ಯಪ್ರವೇಶಿಸಿ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಎಸ್ಸಿ ಮೋರ್ಚಾ ರಾಜ್ಯ ಸಹಕಾರ್ಯದರ್ಶಿ ಸೀತಾರಾಂಭರಣ್ಯ, ಮುಖಂಡರಾದ ಹಿರೇಮಗಳೂರು ಪುಟ್ಟಸ್ವಾಮಿ, ಜಗದೀಶ್, ಕೇಶವಮೂರ್ತಿ, ಹಂಪಯ್ಯ, ಕೃಷ್ಣಮೂರ್ತಿ ಮತ್ತಿತರರಿದ್ದರು.

Protest alleging that the Legislative Council has not given government privilege to each party leader

About Author

Leave a Reply

Your email address will not be published. Required fields are marked *