September 19, 2024

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ – ಮಾನವ ಬಂಧುತ್ವ ಗಟ್ಟಿಗೆ ಮಾನವ ಸರಪಳಿ

0
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಚಿಕ್ಕಮಗಳೂರು:  ವಿವಿಧತೆಯಲ್ಲಿ ಏಕತೆ ಸಾರುವ ನಮ್ಮ ಹೆಮ್ಮೆಯ ರಾಷ್ಟ್ರದ ವೈವಿದ್ಯಮಯ ಧ್ವನಿಗಳ ಅಭಿವ್ಯಕ್ತಿಗೆ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗೆ ಅವಕಾಶ ನೀಡುವ ಆಡಳಿತ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳವಾಗಿದೆ ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಬೆಂಗಳೂರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ. ಡಿ. ರಾಜೇಗೌಡರವರು ಹೇಳಿದರು.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜರುಗಿದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾವ್ ಭಾವಚಿತ್ರಕ್ಕೆ ಮತ್ತು ಸಂವಿಧಾನ ಪೀಠಿಕೆಗೆ ಪುಷ್ಪಾ ನಮನ ಸಲ್ಲಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ನ್ಯಾಯಕ್ಕಾಗಿ ನಮ್ಮ ಅತ್ಯುನ್ನತ ಅಕಾಂಕ್ಷೆಗಳನ್ನು ಸಾಕಾರಗೊಳಿಸುವ ಶಕ್ತಿಯುತ ಮತ್ತು ಕ್ರಿಯಾತ್ಮಕ ಶಕ್ತಿಯಾಗಿದೆ ಎಂದರು.

ಭಾರತ ದೇಶವು ಅತ್ಯಂತ ಭವ್ಯ ಶಕ್ತಿ ಶಾಲಿ ಮತ್ತು ಯಶಸ್ವಿ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ದೇಶವಾಗಿದೆ. ದೇಶದಲ್ಲಿ ಪರಿಣಾಮಕಾರಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮೂಲಧಾರೆ ಡಾ|| ಬಿ.ಆರ್. ಅಂಬೇಡ್ಕರ್ ಅವರಿಂದ ರಚಿತವಾದ ಸಂವಿಧಾನ ಎಂದು ಹೇಳಿದರು.

೨೦೦೭ರಲ್ಲಿ ಜರುಗಿದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೆಪ್ಟೆಂಬರ್ ೧೫ ರ ದಿನವನ್ನು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವೆಂದು ಘೋಷಣೆ ಮಾಡಿ ವಿಶ್ವದಾದ್ಯಂತ ಪ್ರಜಾಪ್ರಭುತ್ವದ ಮೌಲ್ಯಗಳ, ಆದರ್ಶಗಳ, ತತ್ವಗಳ ಮತ್ತು ಅದರ ಅನ್ವಯಿಕತೆಯನ್ನು ಒಳಗೊಂಡ ಬೃಹತ್ ನಿರ್ಣಾಯ ಹೊರಡಿಸಿದ ಐತಿಹಾಸಿಕ ದಿನವಾಗಿದೆ. ಅಮೇರಿಕಾದ ಮಾಜಿ ಅಧ್ಯಕ್ಷ ಅಬ್ರಹಾಂ ಲಿಂಕನ್ ಹೇಳಿರುವ ಹಾಗೆ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರೂಪಿತಗೊಂಡ ಆಡಳಿತ ವ್ಯವಸ್ಥೆಯೇ ಪ್ರಜಾಪ್ರಭುತ್ವ ಎಂದು ಹೇಳಿದರು.

ನಮ್ಮ ಸಂವಿಧಾನವು ಜಗತ್ತಿನ ಅತಿದೊಡ್ಡ ಲಿಖಿತ ಸಂವಿಧಾನವಾಗಿದ್ದು, ಪ್ರಜೆಗಳ ಹಿತಾಸಕ್ತಿಗೆ ಅನುಗುಣವಾಗಿ ರೂಪಿತಗೊಂಡ ಸಂವಿಧಾನವಾಗಿದೆ. ಬ್ರಿಟೀಷ್ ಆಡಳಿತದಿಂದ ಮುಕ್ತಾಗೊಂಡ ನಂತರದಲ್ಲಿ ಭಾರತದ ಜನತೆಯಾದ ನಾವು ನಮ್ಮ ದೇಶವನ್ನು ಸಾರ್ವಭೌಮ ಸಮಾಜವಾದಿ, ಧರ್ಮ ನಿರಪೇಕ್ಷಿತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸಲು ವ್ಯವಸ್ಥಿತವಾದ ಸಂವಿಧಾನವನ್ನು ನಮಗೆ ನಾವು ಅರ್ಪಿಸಿಕೊಂಡೆದ್ದೇವೆ.

ನಮ್ಮ ಸಂವಿಧಾನವು ಭಾರತದ ಪ್ರತಿ ಪ್ರಜೆಗೂ ಆರ್ಥಿಕ, ಸಾಮಾಜಿಕ, ರಾಜಕೀಯ ನ್ಯಾಯವನ್ನು, ವಿಚಾರ ಅಭಿವ್ಯಕ್ತಿ ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ನೀಡುವಂತೆ ಮಾಡಿದೆ ಹಾಗೂ ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡಿ. ಪ್ರತಿ ವ್ಯಕ್ತಿಯ ಗೌರವ ದೇಶದ ಏಕತೆ ಮತ್ತು ಸಮಗ್ರತೆಯ ಉಳಿವಿಗಾಗಿ ಭಾರತದಲ್ಲಿ ಪ್ರತಿಯೊಬ್ಬರು ಸಹೋದರತ್ವ ಭಾವನೆಯಿಂದ ತಮ್ಮ ಜೀವನವನ್ನು ನಿರ್ವಹಿಸುವ ಉದ್ದೇಶದಿಂದ ಸ್ಥಾಪಿತವಾದ ನಮ್ಮ ಸಂವಿಧಾನವು ಪ್ರಜಾಪ್ರಭುತ್ವದ ಮಹತ್ವವನ್ನು ಸಾರುತ್ತದೆ ಎಂದರು.

ವಿಧಾನ ಪರಿಷತ್ ಶಾಸಕ ಸಿ.ಟಿ. ರವಿ ಮಾತನಾಡಿ ಭಾರತವು ಅನೇಕ ಧರ್ಮ, ಸಂಸ್ಕೃತಿ ಭಾಷೆಗಳ ವಿವಿಧತೆಯಿಂದ ಕೂಡಿದ ದೇಶವಾಗಿದ್ದು, ವಿವಿಧತೆಯಲ್ಲಿ ಏಕತೆಯನ್ನು ಸಾರುವ ಸಂವಿಧಾನವನ್ನು ನಾವು ರೂಪಿಸಿಕೊಂಡಿದ್ದೆವೆ. ಸಂವಿಧಾನತ್ಮಕ ಹಕ್ಕುಗಳ ಪಡೆಯುವುದರೊಂದಿಗೆ ಅದರ ಕರ್ತವ್ಯ ಪಾಲನೆಯು ಬಹುಮುಖ್ಯವಾಗಿದೆ. ಜಾತ್ಯಾತೀತತೆಯಿಂದ, ಧರ್ಮ ನಿರಪೇಕ್ಷಿತ ರಾಷ್ಟ್ರ ನಿರ್ಮಾಣ ಮಾಡುವುದು ಸಂವಿಧಾನದ ಆಶಯ ಭಾರತದಲ್ಲಿ ಪ್ರತಿಯೊಬ್ಬರು ಭ್ರಾತೃತ್ವ ಮನೋಭಾವದಿಂದ ಬದುಕಬೇಕು. ಅಂಬೇಡ್ಕರ್‌ರವರ ಚಿಂತನೆಗಳನ್ನು ಮೈಗೂಡಿಸಿಕೊಂಡು ಪಾಲನೆ ಮಾಡಿದಲ್ಲಿ ಭಾರತವು ವಿಶ್ವಗುರು ಸ್ಥಾನವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದ ಅವರು ಯುವ ಜನತೆಯು ಸಂವಿಧಾನವನ್ನು ಅರಿತು ಅದರ ಸಂರಕ್ಷಣೆಗೆ ಮುಂದಾಗಬೇಕು ಎಂದರು.

ರಾಜ್ಯವು ಪ್ರಜಾಪ್ರಭುತ್ವ ದಿನಾಚರಣೆಯನ್ನು ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ೨,೫೦೦ ಕಿ.ಮೀ. ಉದ್ದದ ಮಾನವ ಸರಪಳಿಯನ್ನು ನಿರ್ಮಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ ಚಿಕ್ಕಮಗಳೂರು ತಾಲ್ಲೂಕಿನ ಮಾಗಡಿ ಗಡಿಯಿಂದ ತರೀಕೆರೆ ತಾಲ್ಲೂಕಿನ ಎಂ.ಸಿ. ಹಳ್ಳಿ ಗ್ರಾಮದವರೆಗೆ ೯೨ ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಿಸಲಾಗಿತ್ತು, ಈ ಮಾನವ ಸರಪಳಿ ಕಾರ್ಯಕ್ರಮವನ್ನು ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು, ಸ್ವಯಂ ಪ್ರೇರಿತವಾಗಿ ಮಾನವ ಸರಪಳಿಯನ್ನು ನಿರ್ಮಿಸುವ ಮೂಲಕ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮಹತ್ವ ಸಾರುವ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಹೆಚ್. ಹರೀಶ್, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಉಪಾಧ್ಯಕ್ಷೆ ಅನು ಮಧುಕರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದರ್ ಕುಮಾರ್ ದಹೀಮ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಉಪವಿಭಾಗಾಧಿಕಾರಿ ದಲ್ಜೀತ್ ಕುಮಾರ್, ತಹಸೀಲ್ದಾರ್ ಡಾ. ಸುಮಂತ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗಿಶ್, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಸೇರಿದಂತೆ ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

International Democracy Day

About Author

Leave a Reply

Your email address will not be published. Required fields are marked *

You may have missed