September 22, 2024

ಪೌರ ಕಾರ್ಮಿಕರು ನಗರ ಸ್ವಚ್ಚತೆ ಜೊತೆಗೆ ನಾಗರೀಕರ ಆರೋಗ್ಯಕ್ಕೆ ಪೂರಕ ಕೆಲಸ

0
ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಕ್ರೀಡಾಕೂಟ

ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಕ್ರೀಡಾಕೂಟ

ಚಿಕ್ಕಮಗಳೂರು: ಪ್ರಪಂಚದ ಯಾವುದೇ ನಗರ ಸ್ವಚ್ಚವಾಗಿರುವ ಜೊತೆಗೆ ನಾಗರೀಕರ ಆರೋಗ್ಯ ಚೆನ್ನಾಗಿರಬೇಕಾದರೆ ಪೌರ ಕಾರ್ಮಿಕರ ಪರಿಶ್ರಮ ಮೂಲ ಕಾರಣ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಅಭಿಪ್ರಾಯಿಸಿದರು.

ಅವರು ಇಂದು ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ನಗರಸಭೆ, ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಎಲ್ಲಾ ನಾಗರೀಕರ ಆರೋಗ್ಯಕ್ಕೆ ಪೂರಕವಾಗಿ ಸೇವೆ ಸಲ್ಲಿಸುವ ಪೌರ ಕಾರ್ಮಿಕರ ಆರೋಗ್ಯ ಸಹ ಚೆನ್ನಾಗಿರಬೇಕು ಎಂಬ ಉದ್ದೇಶದಿಂದ ಸರ್ಕಾರ ಪೌರ ಕಾರ್ಮಿಕರಿಗೆ ನಗರಸಭೆ ವತಿಯಿಂದ ಕ್ರೀಡಾಕೂಟಗಳನ್ನು ಏರ್ಪಡಿಸಿ ಅವರ ಮಾನಸಿಕ ಹಾಗೂ ದೈಹಿಕವಾಗಿ ಗಟ್ಟಿಗೊಳ್ಳಲು ಕ್ರೀಡೆ ಸಹಕಾರಿಯಾಗಿದೆ ಎಂದರು.

ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಪೌರ ಕಾರ್ಮಿಕರು ಎಲ್ಲಾ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮಾತನಾಡಿ, ಕಾಯಕವೇ ಕೈಲಾಸ ಎಂಬ ತತ್ವದಂತೆ ಕೆಲಸ ಮಾಡುವ ಪೌರ ಕಾರ್ಮಿಕರು ಚಿಕ್ಕಮಗಳೂರು ನಗರದ ಸ್ವಚ್ಚತೆಯ ಜೊತೆಗೆ ನಾಗರೀಕರ ಆರೋಗ್ಯ ರಕ್ಷಣೆಗೆ ತಮ್ಮದೇ ಆದ ಕೊಡುಗೆಯನ್ನು ಸ್ವಚ್ಚತೆ ಮಾಡುವ ಮೂಲಕ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಎಲ್ಲಿ ಸ್ವಚ್ಚತೆ ಇರುತ್ತದೋ ಅಲ್ಲಿ ಭಗವಂತ ನೆಲೆಸಿರುತ್ತಾನೆ ಎಂಬುದು ನಂಬಿಕೆಯಾಗಿದೆ. ನಾಗರೀಕರ ಆರೋಗ್ಯ ಮತ್ತು ಸ್ವಚ್ಚತೆಗೆ ಗಮನ ಕೊಟ್ಟು ಕೆಲಸ ನಿರ್ವಹಿಸುತ್ತಿರುವ ನಿಮ್ಮೆಲ್ಲ ಪೌರ ಕಾರ್ಮಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಪೌರ ಕಾರ್ಮಿಕರಿಗೆ ಈ ಕ್ರೀಡಾಕೂಟ ಜೀವನೋತ್ಸಾಹ ಹೆಚ್ಚು ಮಾಡಲಿ, ತಮಗೆ ಆತ್ಮವಿಶ್ವಾಸ ಹೆಚ್ಚಿಸಲಿ ಎಂದು ಹಾರೈಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಮಾತನಾಡಿ, ಪೌರಕಾರ್ಮಿಕರು ದಿನನಿತ್ಯ ಸ್ವಚ್ಚತಾ ಕಾರ್ಯ ಕೈಗೊಳ್ಳುವ ಮೂಲಕ ನಗರದ ನಾಗರೀಕರ ಆರೋಗ್ಯ ಕಾಪಾಡುವ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಶುಭ ಹಾರೈಸಿದರು.

ಈ ಕ್ರೀಡಾಕೂಟ ಹಾಗೂ ಪೌರ ಕಾರ್ಮಿಕರ ದಿನಾಚರಣೆ ಪೌರ ಕಾರ್ಮಿಕರಿಗೆ ಸುದಿನವಾಗಿದೆ. ದಿನಪೂರ್ತಿ ಕ್ರೀಡೆಯಲ್ಲಿ ಭಾಗವಹಿಸಿ ಸದೃಢ ಆರೋಗ್ಯವಂತರಾಗಿ ಎಂದು ಹೇಳಿದ ಅವರು ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಚ ಭಾರತ್‌ಗೆ ಕರೆನೀಡಿದ್ದು, ಅದರಂತೆ ಪ್ರತೀ ಮನೆಮನೆಯಲ್ಲಿ ಸ್ವಚ್ಚತೆ ಕಾಪಾಡುವ ಪ್ರಯೋಜನಕಾರಿ ಕಾರ್ಯಕ್ರಮವಾಗಿದ್ದು, ಈ ನಿಟ್ಟಿನಲ್ಲಿ ಪೌರಕಾರ್ಮಿಕರ ಪಾದಪೂಜೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆಂದು ತಿಳಿಸಿದರು.

ಪ್ರಸ್ತುತ ಅನಾರೋಗ್ಯ ಕಾಡುತ್ತಿರುವ ಈ ಸಂದರ್ಭದಲ್ಲಿ ಪೌರ ಕಾರ್ಮಿಕರನ್ನು ದೇವರಂತೆ ಕಾಣಬೇಕಾಗಿರುವುದು ಅಗತ್ಯ. ಸ್ವಚ್ಚತೆ ಆರೋಗ್ಯದ ಒಂದು ಭಾಗವಾಗಿದೆ, ಕ್ರೀಡೆಗಳು ಸದೃಢ ಆರೋಗ್ಯಕ್ಕೆ ಪೂರಕವಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ನಗರಸಭಾ ಸದಸ್ಯ ಕುಮಾರ್, ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಎನ್.ಅಣ್ಣಯ್ಯ, ಗೌರವಾಧ್ಯಕ್ಷ ನಾಗರಾಜ್, ಶಾಖಾ ಸಂಘದ ಅಧ್ಯಕ್ಷ ಶ್ರೀನಿವಾಸ್, ಆರೋಗ್ಯ ನಿರೀಕ್ಷಕರಾದ ಶಶಿರಾಜ್ ಅರಸ್, ನಾಗಪ್ಪ, ವೆಂಕಟೇಶ್, ರಂಗಪ್ಪ, ಈಶ್ವರ್ ಉಪಸ್ಥಿತರಿದ್ದರು, ಮೊದಲಿಗೆ ಪೌರಾಯುಕ್ತರಾದ ಬಿ.ಸಿ ಬಸವರಾಜು ಸ್ವಾಗತಿಸಿದರು.

The sports event was organized as part of Civil Workers’ Day

About Author

Leave a Reply

Your email address will not be published. Required fields are marked *

You may have missed