September 19, 2024

The theft of an old woman’s gold chain: ಹಾಡುಹಗಲೇ ನಗರದಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ

0

ಚಿಕ್ಕಮಗಳೂರು: ನಗರದಲ್ಲಿ ಸರಗಳ್ಳರ ಹಾವಳಿ ಮತ್ತೆ ಆರಂಭವಾಗಿದ್ದು, ವಿಳಾಸ ಕೇಳುವ ನೆಪದಲ್ಲಿ ದುಷ್ಕರ್ಮಿಗಳು ಹಾಡು ಹಗಲೇ ವೃದ್ಧೆಯೊಬ್ಬರ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾದ ಘಟನೆ ನಗರದ ಕೋಟೆ ಬಡಾವಣೆಯಲ್ಲಿ ವರದಿಯಾಗಿದೆ. ಘಟನೆಯ ವಿಡಿಯೋ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

ನಗರದ ಬೇಲೂರು ರಸ್ತೆಯಲ್ಲಿರುವ ಕೋಟೆ ಬಡಾವಣೆಯಲ್ಲಿ ಲೀಲಾವತಿ ಎಂಬ ವೃದ್ಧೆ ಸುಗ್ಗಿಕಲ್ಲು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ಸರಗಳ್ಳರು ವೃದ್ಧೆಯ ಬಳಿ ವಿಳಾಸ ಕೇಳುವ ನೆಪದಲ್ಲಿ ನಿಲ್ಲಿಸಿಕೊಂಡಿದ್ದಾರೆ. ಈ ವೇಳೆ ಓರ್ವ ಆರೋಪಿ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ.

ಅಪರಿಚಿತ ಯುವಕರು ಸರವನ್ನು ಕಿತ್ತುಕೊಂಡ ರಭಸಕ್ಕೆ ವೃದ್ಧೆ ಸ್ಥಳದಲ್ಲಿ ಬಿದ್ದಿದ್ದು, ತೀವ್ರಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಹಾಡುಹಗಲೇ ಇಂತಹ ಘಟನೆ ನಡೆದಿದ್ದು, ಬಡಾವಣೆಯ ಮಹಿಳೆಯರಲ್ಲಿ ಆತಂಕ ಮೂಡಿ ಸಿದೆ. ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

The theft of an old woman’s gold chain

About Author

Leave a Reply

Your email address will not be published. Required fields are marked *

You may have missed